ಡಿ.ಕೆ.ಶಿವಕುಮಾರ್ ಮತ್ತು ಶ್ರೀರಾಮುಲು 
ರಾಜಕೀಯ

ಉಪ ಚುನಾವಣೆ ಸಮರ: ಗಣಿನಾಡು ಬಳ್ಳಾರಿಯಲ್ಲಿ ಶ್ರೀರಾಮುಲು, ಡಿಕೆಶಿ ಕ್ಯಾಂಪ್ ನಡುವೆ ನೇರ ಹಣಾಹಣಿ?

ರಾಜ್ಯದಲ್ಲಿ ಉಪ ಚುನಾವಣೆಯ ರಂಗು ಹೆಚ್ಚಾಗತೊಡಗಿದ್ದು, ಗಣಿನಾಡು ಬಳ್ಳಾರಿಯ ಜಿಲ್ಲಾ ಉಸ್ತುವಾರಿ ಸಚಿವ ಡಿ.ಕೆ.ಶಿವಕುಮಾರ್ ಮತ್ತು ಬಿಜೆಪಿ ಶಾಸಕ ಶ್ರೀರಾಮುಲು ನಡುವೆ ನೇರಾ ನೇರ ಹಣಾಹಣಿ ಎದುರಾಗಲಿದೆ ಎಂದು ಹೇಳಲಾಗುತ್ತಿದೆ...

ಬೆಂಗಳೂರು: ರಾಜ್ಯದಲ್ಲಿ ಉಪ ಚುನಾವಣೆಯ ರಂಗು ಹೆಚ್ಚಾಗತೊಡಗಿದ್ದು, ಗಣಿನಾಡು ಬಳ್ಳಾರಿಯ ಜಿಲ್ಲಾ ಉಸ್ತುವಾರಿ ಸಚಿವ ಡಿ.ಕೆ.ಶಿವಕುಮಾರ್ ಮತ್ತು ಬಿಜೆಪಿ ಶಾಸಕ ಶ್ರೀರಾಮುಲು ನಡುವೆ ನೇರಾ ನೇರ ಹಣಾಹಣಿ ಎದುರಾಗಲಿದೆ ಎಂದು ಹೇಳಲಾಗುತ್ತಿದೆ. 
ಮೂರು ಲೋಕಸಭಾ ಕ್ಷೇತ್ರ, ಎರಡು ವಿಧಾನಸಭಾ ಕ್ಷೇತ್ರಗಳ ಉಪ ಚುನಾವಣೆಯಲ್ಲಿ ಮೈತ್ರಿಗೆ ಮುಂದಾಗಿರುವ ಜೆಡಿಎಸ್ ಪಕ್ಷ ಮಂಡ್ಯ ಲೋಕಸಭಾ ಕ್ಷೇತ್ರ ಮತ್ತು ರಾಮನಗರ ವಿಧಾನಸಭಾ ಕ್ಷೇತ್ರದಲ್ಲಿ ಮಾತ್ರ ಸ್ಪರ್ಧಿಸಿ ಇನ್ನುಳಿದ ಶಿವಮೊಗ್ಗ, ಬಳ್ಳಾರಿ ಲೋಕಸಭಾ ಕ್ಷೇತ್ರ ಮತ್ತು ಜಮಖಂಡಿ ವಿಧಾನಸಭಾ ಕ್ಷೇತ್ರವನ್ನು ಕಾಂಗ್ರೆಸ್'ಗೆ ಬಿಟ್ಟುಕೊಡಲು ಬಯಸಿದೆ. 
ಈ ಹಿನ್ನಲೆಯಲ್ಲಿ ಬಿಜೆಪಿ ಹಾಗೂ ಕಾಂಗ್ರೆಸ್ ಬಲಿಷ್ಠ ನಾಯಕರನ್ನು ಕಣದಲ್ಲಿ ನಿಲ್ಲಿಸಲು ನಿರ್ಧರಿಸಿದ್ದು, ಬಿಜೆಪಿ ಮಾಜಿ ಸಚಿವ ಬಿ. ಶ್ರೀರಾಮುಲು ಹಾಗೂ ಡಿ.ಕೆ.ಶಿವಕುಮಾರ್ ಗುಂಪುಗಳ ನಡುವೆ ನೇರ ಹಣಾಹಣಿ ಎದುರಾಗಲಿದೆ. 
ವಿಧಾನಸಭಾ ಚುನಾವಣೆಯಲ್ಲಿ ಗೆದ್ದ ಬಳಿಕ ರಾಜೀನಾಮೆ ನೀಡಿದ್ದ ಶ್ರೀರಾಮುಲು ಅವರಿಗೆ, ಗೆಲ್ಲುವ ಅಭ್ಯರ್ಥಿ ಆಯ್ಕೆ ಮಾಡುವಂತೆ ಬಿಜೆಪಿ ನಾಯಕತ್ವ ಮುಕ್ತಹಸ್ತ ನೀಡಿದೆ. ಇದರಂತೆ ಶ್ರೀರಾಮು ಅವರು ಸಹೋದರಿ ಜೆ. ಶಾಂತ ಹಾಗೂ ಆಪ್ತ ಸಂಬಂಧಿ ಟಿ.ಸುರೇಶ್ ಬಾಬು ಅವರನ್ನು ಕಣದಲ್ಲಿ ನಿಲ್ಲಿಸಲು ನಿರ್ಧರಿಸಿದ್ದಾರೆಂದು ಹೇಳಲಾಗುತ್ತಿದೆ. 
ಬಳ್ಳಾರಿ ಕ್ಷೇತ್ರದಲ್ಲಿ ಬಿಜೆಪಿ ಗೆಲುವು ಸಾಧಿಸುವಂತೆ ನೋಡುವ ಜವಾಬ್ದಾರಿಯನ್ನು ಶ್ರೀರಾಮುಲು ಅವರಿಗೆ ನೀಡಲಾಗಿದೆ. ಶ್ರೀರಾಮುಲು ಅವರ ನಿರ್ಧಾರವನ್ನು ಪಕ್ಷ ಒಪ್ಪಿಕೊಳ್ಳಲಿದೆ. ಉಪ ಚುನಾವಣೆಗೆ ಅಭ್ಯರ್ಥಿಗಳ ಆಯ್ಕೆ ಕುರಿತಂತೆ ಮಂಗಳವಾರ ಅಥವಾ ಬುಧವಾರ ನಡೆಯುವ ಸಭೆಯಲ್ಲಿ ಅಂತಿಮ ನಿರ್ಧಾರ ಕೈಗೊಳ್ಳಲಾಗುತ್ತದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್.ಯಡಿಯೂರಪ್ಪ ಅವರು ಹೇಳಿದ್ದಾರೆ. 
ಲೋಕಸಭೆ ಮತ್ತು ವಿಧಾನಸಭೆ ಉಪ ಚುನಾವಣೆಗೆ ಅಭ್ಯರ್ಥಿಗಳ ಆಯ್ಕೆ ಕುರಿತು ಜೆಡಿಎಸ್ ವರಿಷ್ಠ ಹೆಚ್.ಡಿ.ದೇವೇಗೌಡ ನೇತೃತ್ವದಲ್ಲಿ ಮಂಗಳವಾರ ಸಭೆ ನಡೆಯಲಿದ್ದು, ಸಭೆಯಲ್ಲಿ ಪಕ್ಷದ ರಾಜ್ಯಾಧ್ಯಕ್ಷ ಹೆಚ್. ವಿಶ್ವನಾಥ್ ಭಾಗವಹಿಸಲಿದ್ದಾರೆ. 
ಅಭ್ಯರ್ಥಿಗಳ ಆಯ್ಕೆ ಜೊತೆಗೆ ಪಕ್ಷದ ನೂತನ ಪದಾಧಿಕಾರಿಗಳ ನೇಮಕ ಕುರಿತಂತೆಯೂ ಸಭೆಯಲ್ಲಿ ಚರ್ಚೆ ನಡೆಯುವ ನಿರೀಕ್ಷೆಗಳಿವೆ. 
ಇನ್ನು ತಮ್ಮ ವಿರುದ್ಧ ಡಿ.ಕೆ.ಶಿವಕುಮಾರ್ ಅವರು ಸ್ಪರ್ಧಿಸುವ ಕುರಿತಂತೆ ಮಾತುಗಳು ಕೇಳಿ ಬರುತ್ತಿರುವ ಹಿನ್ನಲೆಯಲ್ಲಿ ಸವಾಲನ್ನು ಸ್ವೀಕರಿಸಿರುವ ಶ್ರೀರಾಮುಲು ಅವರು, ಶಿವಕುಮಾರ್ ಕಾಂಗ್ರೆಸ್ ಪಕ್ಷಕ್ಕೆ ಬಲಿಷ್ಠ ನಾಯಕರಾಗಿರಬಹುದು. ಆದರೆ, ಅವರ ಆಟ ಹಾಗೂ ತಂತ್ರಗಳು ಕೆಲಸಕ್ಕೆ ಬರುವುದಿಲ್ಲ ಎಂದು ಹೇಳಿದ್ದಾರೆ. 

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ರಾಂಚಿ ಪರೀಕ್ಷೆ ವಿವಾದ: ಬ್ಯಾರಿಕೇಡ್ ಮುರಿದು ವಿಧಾನಸೌಧದತ್ತ ನುಗ್ಗಿದ ವಿದ್ಯಾರ್ಥಿಗಳು! ಜಲಫಿರಂಗಿ ಬಳಸಿದ ಪೊಲೀಸರು, Video

TNIE Exclusive | Air India ವಿಮಾನದಲ್ಲಿ ಭಾರೀ ತಾಂತ್ರಿಕ ದೋಷ..! Phuket-Delhi ವಿಮಾನ 300 ಅಡಿ ಕುಸಿತಕ್ಕೆ Triple hydraulic systems ವೈಫಲ್ಯ ಕಾರಣ..?

ಸಂಪುಟ ವಿಸ್ತರಣೆ ಬಿಕ್ಕಟ್ಟು ಶಮನಕ್ಕೆ ಸಿಎಂ ಡಿಕೆ.ಶಿವಕುಮಾರ್ ದೆಹಲಿಗೆ ದೌಡು: ಹೈಕಮಾಂಡ್‌ ಜೊತೆ ಮಹತ್ವದ ಚರ್ಚೆ..!

ಬಿಡದಿ ಯೋಜನೆಗೆ ಭೂಸ್ವಾಧೀನ ವಿರೋಧಿಸಿ ಜೆಡಿಎಸ್ ಪಾದಯಾತ್ರೆ: ಮಾಜಿ ಪ್ರಧಾನಿ HD ದೇವೇಗೌಡ ಭಾಗಿ

Maharashtra: ಶಾಲಾ ಹಾಸ್ಟೆಲ್‌ನಲ್ಲಿ ಭೀಕರ ದುರಂತ: ಮಲಗಿದ್ದ 6 ಬಾಲಕಿಯರಿಗೆ ಹಾವು ಕಡಿತ, ಮೂವರ ಸಾವು!