ಸಂಗಮೇಶ್ ನಿರಾಣಿ ಮತ್ತು ಶ್ರೀಕಾಂತ್ ಕುಲಕರ್ಣಿ 
ರಾಜಕೀಯ

ಬಿಜೆಪಿಗೆ ತಲೆನೋವಾಗಿರುವ ಜಮಖಂಡಿ: ಶ್ರೀಕಾಂತ್ ಕುಲಕರ್ಣಿ, ಸಂಗಮೇಶ್ ನಿರಾಣಿ ನಡುವೆ ಜಟಾಪಟಿ!

ಎರಡು ವಿಧಾನಸಭೆ ಹಾಗೂ ಮೂರು ಲೋಕಸಭೆ ಉಪಚುನಾವಣೆಗೆ ಅಭ್ಯರ್ಥಿಗಳ ಆಯ್ಕೆಯಲ್ಲಿ ತೊಡಗಿರುವ ಬಿಜೆಪಿಗೆ ಜಡಖಂಡಿ ವಿಧಾನಸಭೆ ಕ್ಷೇತ್ರಕ್ಕೆ ಅಭ್ಯರ್ಥಿ ...

ಬೆಂಗಳೂರು: ಎರಡು ವಿಧಾನಸಭೆ ಹಾಗೂ ಮೂರು ಲೋಕಸಭೆ ಉಪಚುನಾವಣೆಗೆ ಅಭ್ಯರ್ಥಿಗಳ ಆಯ್ಕೆಯಲ್ಲಿ ತೊಡಗಿರುವ ಬಿಜೆಪಿಗೆ ಜಡಖಂಡಿ ವಿಧಾನಸಭೆ ಕ್ಷೇತ್ರಕ್ಕೆ ಅಭ್ಯರ್ಥಿ ಆಯ್ಕೆ ವರಿಷ್ಠರಿಗೆ ತಲೆ ನೋವಾಗಿ ಪರಿಣಮಿಸಿದೆ,
ಜಮಖಂಡಿಯಲ್ಲಿ ಈ ಬಾರಿಯೂ ಶ್ರೀಕಾಂತ್ ಕುಲಕರ್ಣಿ ಅವರಿಗೇ ಟಿಕೆಟ್ ನೀಡಬೇಕೆಂದು ಮಂಡಲ ಅಧ್ಯಕ್ಷ ಈಶ್ವರ ಆದ್ಯಪ್ಪನವರ್ ನೇತೃತ್ವದ ತಂಡ ಬಿಎಸ್​ವೈ ಅವರಿಗೆ ಮನವಿ ಮಾಡಿದೆ. 
ಜಮಖಂಡಿಯಲ್ಲಿ ಕಳೆದ ಬಾರಿ ಬಂಡಾಯ ಅಭ್ಯರ್ಥಿಯಾಗಿದ್ದ ಸಂಗಮೇಶ ನಿರಾಣಿ  24 ಸಾವಿರ ಮತಗಳಿಂದ ಸೋಲನುಭವಿಸಿದ್ದರು,. ಹೀಗಾಗಿ ಸಂಗಮೇಶ್ ಪರ ಸಹೋದರ ಮುರುಗೇಶ್ ನಿರಾಣಿ ಟಿಕೆಟ್ ಗೆ ಲಾಬಿ ನಡೆಸುತ್ತಿದ್ದಾರೆ.
ಇನ್ನು ಒಂದು ಅಥವಾ ಎರಡು ದಿನಗಳಲ್ಲಿ ಬಿಜೆಪಿ ಕೋರ್ ಕಮಿಟಿ ಅಭ್ಯರ್ಥಿ ಬಗ್ಗೆ ಅಂತಿಮ ನಿರ್ಧಾರ ಕೈಗೊಳ್ಳಲಿದೆ ಎಂದು ಯಡಿಯೂರಪ್ಪ ಹೇಳಿದ್ದಾರೆ, 
ಜಮಖಂಡಿ ವಿದಾನಸಭೆ ಕ್ಷೇತ್ರಕ್ಕೆ ಸಿದ್ದು ನ್ಯಾಮಗೌಡ ಅವರ ಪುತ್ರ ಆನಂದ್ ಅವರನ್ನು ಕಣಕ್ಕಿಳಿಸಲು ಕಾಂಗ್ರೆಸ್ ಈಗಾಗಲೇ ನಿರ್ದರಿಸಿದೆ. ಇನ್ನೂ ಬಳ್ಳಾರಿ ಮತ್ತು ಶಿವಮೊಗ್ಗ ಕ್ಷೇತ್ರಗಳ ಅಭ್ಯರ್ಥಿ ಆಯ್ಕೆ ಬಗ್ಗೆ  ಮಂಗಳವಾರ ನಡೆಯುವ ಸಭೆಯಲ್ಲಿ ನಿರ್ಧಾರ ಕೈಗೊಳ್ಳಲಾಗುವುದು, ಇನ್ನೂ ಮಂಡ್ಯ ಕ್ಷೇತ್ರದ ಅಭ್ಯರ್ಥಿ ಆಯ್ಕೆ ಬಗ್ಗೆ ಮತ್ತಷ್ಟು ಗೊಂದಲವಿದೆ, ಜೆಡಿಎಸ್ ಗೆ ಕ್ಷೇತ್ರ ಬಿಟ್ಟುಕೊಡುವ ಬಗ್ಗೆ ಅಸಮಾಧಾನ ಭುಗಿಲೆದ್ದಿದೆ.
ಮಂಡ್ಯ. ಲೋಕಸಭೆ ಕ್ಷೇತ್ರದಿಂದ ಸ್ಪರ್ಧಿಸಲು ಎಲ್ ಆರ್ ಶಿವರಾಮೇಗೌಡ ಮತ್ತು ಲಕ್ಷ್ಮಿ ಅಶ್ವಿನ್ ಗೌಡ ನಡುವೆ ಪೈಪೋಟಿ ನಡೆದಿದೆ. ಈ ನಡುವೆ ಎಚ್.ಡಿ ರೇವಣ್ಣ ಪುತ್ರ ಪ್ರಜ್ವಲ್ ಹೆಸರು ಕೂಡ ಕೇಳಿ ಬರುತ್ತಿದೆ. ಮಂಡ್ಯದಿಂದ ಬಿಜೆಪಿಯಿಂದ ಆರ್. ಅಶೋಕ್ ಮತ್ತು ಕಾಂಗ್ರೆಸ್ ನಿಂದ ಚಲುವರಾಯ ಸ್ವಾಮಿ ಕಣಕ್ಕಿಳಿಯಲಿದ್ದಾರೆ ಎಂದು ಹೇಳಲಾಗುತ್ತಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ಪ್ರಶ್ನೆಪತ್ರಿಕೆ ಸೋರಿಕೆ,'ಚಂದಾ ಚೋರಿ' ವಿರುದ್ಧ ರಾಷ್ಟ್ರವ್ಯಾಪಿ ಪ್ರತಿಭಟನೆಗೆ ಕಾಂಗ್ರೆಸ್ ನಿರ್ಧಾರ; 'ವಂದೇ ಮಾತರಂ'ನ ಎರಡು ಪ್ಯಾರಾ ಮಾತ್ರ ಹಾಡಲು ನಿರ್ಣಯ!

illegal gold mine: ಮಧ್ಯ ಆಫ್ರಿಕಾದಲ್ಲಿ ಭಯಾನಕ ದುರಂತ, ಚಿನ್ನದ ಗಣಿಯಲ್ಲಿ ಕುಸಿತ,100 ಮಂದಿ ದುರ್ಮರಣ! Video

ಮೂಡಾ ಅಕ್ರಮಕ್ಕೆ ಬ್ರೇಕ್: ₹2000 ಕೋಟಿ ಮೌಲ್ಯದ 1,100 ಸೈಟುಗಳ ಹಂಚಿಕೆ ರದ್ದು ಮಾಡಿದ ಯತೀಂದ್ರ ಸಿದ್ದರಾಮಯ್ಯ

ರೋಚಕ ಪಂದ್ಯದಲ್ಲಿ ಭಾರತ 5-3 ಗೋಲುಗಳಿಂದ ಪಾಕಿಸ್ತಾನವನ್ನು ಸೋಲಿಸಿ ವಿಶ್ವಕಪ್‌ನಿಂದ ಹೊರದೂಡಿದೆ!

ಬಾಲಿವುಡ್ ನಟ ಗೋವಿಂದಾ ದಾಂಪತ್ಯ ಕಿತ್ತಾಟದಲ್ಲಿ ಸ್ಫೋಟಕ ತಿರುವು: ವಿಚ್ಛೇದನ ಅರ್ಜಿ ಹಿಂಪಡೆದ ಪತ್ನಿ ಸುನೀತಾ ಅಹುಜಾ!