ರಾಜಕೀಯ

ಕೈ'ಯಲ್ಲಿ ಭಿನ್ನಮತ ಸ್ಫೋಟ: ದಸರಾ ಉದ್ಘಾಟನಾ ಸಮಾರಂಭದಿಂದ ದೂರ ಉಳಿದ ಕಾಂಗ್ರೆಸ್ ನಾಯಕರು

Manjula VN
ಮೈಸೂರು: ಕಾಂಗ್ರೆಸ್ ಪಾಳಯದಲ್ಲಿ ಅಸಮಾಧಾನ ಮತ್ತೆ ಭುಗಿಲೆದ್ದಿದ್ದು, ನಾಡಹಬ್ಬ ದಸರಾ ಉದ್ಘಾಟನಾ ಸಮಾರಂಭದಲ್ಲಿ ಕಾಂಗ್ರೆಸ್ ಪಕ್ಷದ ಹಲವು ಸ್ಥಳೀಯ ಮುಖಂಡರು ಗೈರು ಹಾಜರಾಗಿದ್ದಾರೆಂದು ತಿಳಿದುಬಂದಿದೆ. 
ಚಾಮುಂಡಿ ಬೆಟ್ಟದಲ್ಲಿ ನಾಡಿನ ಸಂಭ್ರಮದ ಹಬ್ಬ ದಸಾರ ಉತ್ಸವಕ್ಕೆ ಅಧಿಕೃತ ಚಾಲನೆ ದೊರೆತಿದ್ದು, ಕಾರ್ಯಕ್ರಮಕ್ಕೆ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಸೇರಿ ಜೆಡಿಎಸ್ ಪಕ್ಷದ ಎಲ್ಲಾ ಮುಖಂಡರು ಹಾಗೂ ಮಂತ್ರಿಗಳು ಪಾಲ್ಕೊಂಡಿದ್ದರು. ಆದರೆ, ಸ್ಥಳೀಯ ಕಾಂಗ್ರೆಸ್ ಮುಖಂಡರು ಮಾತ್ರ ಗೈರು ಹಾಜರಾಗಿರುವುದು ಕಾರ್ಯಕ್ರಮದಲ್ಲಿ ಎದ್ದು ಕಾಣುತ್ತಿತ್ತು. 
ಕಾರ್ಯಕ್ರಮದಲ್ಲಿ ಸ್ಥಳೀಯ ಶಾಸಕರು ಹಾಗೂ ಮಾಜಿ ಮಂತ್ರಿಗಳಾದ ತನ್ವೀರ್ ಸೇಠ್, ಶಾಸಕ ಯತೀಂದ್ರ ಸಿದ್ದರಾಮಯ್ಯ, ಅನಿಲ್ ಚಿಕ್ಕಮಾದು, ಚಾಮರಾನಗರ ಉಸ್ತುವಾರಿ ಸಚಿವ ಸಿ.ಪುಟ್ಟರಂಗಶೆಟ್ಟಿ, ಎನ್. ಮಹೇಶ್ ಹಾಗೂ ಸಂಸದ ಧೃವನಾರಾಯಣ್ ಅವರು ಗೈರು ಹಾಜರಾಗಿರುವುದು ಕಂಡು ಬಂದಿದೆ. 
ಇದಲ್ಲದೆ, ವಿಶೇಷ ಆಹ್ವಾನಿರಾಗಿದ್ದ ಉಪ ಮುಖ್ಯಮಂತ್ರಿ ಡಾ.ಜಿ.ಪರಮೇಶ್ವರ್, ಸ್ಥಳೀಯ ಮಹಾನಗರ ಪಾಲಿಕೆಯ ಕಾಂಗ್ರೆಸ್ ಪಕ್ಷದ ಯಾವುದೇ ಜನಪ್ರತಿನಿಧಿಗಳೂ ಕೂಡ ಕಾರ್ಯಕ್ರಮದಲ್ಲಿ ಭಾಗವಹಿಸದೇ ಇರುವುದು ಕಾಂಗ್ರೆಸ್ ಪಾಳದಲ್ಲಿ ಅಸಮಾಧಾನ ಭುಗಿಲೆದ್ದಿದೆ ಎಂದ ಊಹಾಪೋಹಗಳಿಗೆ ಇಂಬು ನೀಡಿದೆ. 
SCROLL FOR NEXT