ರಾಜಕೀಯ

ಹೆಚ್'ಡಿಕೆ, ದೇವೇಗೌಡರ ಭೇಟಿ: ಪ್ರಾಥಮಿಕ ಶಿಕ್ಷಣ ಸಚಿವ ಸ್ಥಾನದ ಮೇಲೆ ಹೊರಟ್ಟಿ ಕಣ್ಣು!

Manjula VN
ಬೆಂಗಳೂರು: ಅನಿರೀಕ್ಷಿತ ಬೆಳವಣಿಯಲ್ಲಿ ಬಿಎಸ್'ಪಿ ಮುಕಂಡ ಎನ್ ಮಹೇಶ್ ಅವರು ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಿರುವ ಹಿನ್ನಲೆಯಲ್ಲಿ ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಸಚಿವ ಸ್ಥಾನದ ಮೇಲೆ ಬಸವರಾಜ್ ಹೊರಟ್ಟಿಯವರು ಕಣ್ಣಿದ್ದು, ಸಚಿವ ಸ್ಥಾನ ನೀಡುವಂತೆ ಮುಖ್ಯಂಮತ್ರಿ ಹೆಚ್.ಡಿ.ಕುಮಾರಸ್ವಾಮಿ ಹಾಗೂ ಜೆಡಿಎಸ್ ವರಿಷ್ಠ ದೇವೇಗೌಡರನ್ನು ಭೇಟಿ ಮಾಡಿ ಮಾತುಕತೆ ನಡೆಸಿದ್ದಾರೆಂದು ಮೂಲಗಳಿಂದ ತಿಳಿದುಬಂದಿದೆ. 
ರಾಜ್ಯದಲ್ಲಿ ಸಮ್ಮಿಶ್ರ ಸರ್ಕಾರ ರಚನೆಗೊಂಡಾಗಿನಿಂದಲೂ ಹೊರಟ್ಟಿಯವರು ಪ್ರಾಥಮಿಕ ಹಾಗೂ ಪ್ರೌಢಶಿಕ್ಷಣ ಸಚಿವ ಸ್ಥಾನಕ್ಕಾಗಿ ಬೇಡಿಕೆ ಇಟ್ಟಿದ್ದರು. ಆದರೆ, ಆ ಸ್ಥಾನವನ್ನು ಮಹೇಶ್ ಅವರಿಗೆ ನೀಡಲಾಗಿತ್ತು. ಇದೀಗ ಮಹೇಶ್ ಅವರು ರಾಜೀನಾಮೆ ನೀಡಿರುವ ಹಿನ್ನಲೆಯಲ್ಲಿ ಮತ್ತೆ ಸ್ಥಾನ ನೀಡುವಂತೆ ಹೊರಟ್ಟಿಯವರು ಆಗ್ರಹಿಸುತ್ತಿದ್ದಾರೆಂದು ಹೇಳಲಾಗುತ್ತಿದೆ. 
ಜೆಡಿಎಸ್ ಎದುರಾಗಿರುವ ಸಮಸ್ಯೆಗಳಿಗೆ ಶಮನ ಹುಡುಕಿದ್ದ ಜೆಡಿಎಸ್ ನಾಯಕತ್ವ ಹೊರಟ್ಟಿಯವರಿಗೆ ಸಭಾಪತಿ ಸ್ಥಾನ ನೀಡಲು ನಿರ್ಧರಿಸಿತ್ತು. ಈ ನಡುವೆ ಹೊರಟ್ಟಿಯವರು ಮಾಜಿ ಪ್ರಧಾನಿ ಹೆಚ್.ಡಿ.ದೇವೇಗೌಡ ಅವರನ್ನು ಗುರುವಾರ ಭೇಟಿ ಮಾಡಿದ್ದು, ಪ್ರಾಥಮಿಕ ಹಾಗೂ ಪ್ರೌಢಶಿಕ್ಷಣ ಸಚಿವ ಸ್ಥಾನ ನೀಡುವಂತೆ ಬಲವಾಗಿ ಆಗ್ರಹಿಸಿದ್ದಾರೆ. ಇದಲ್ಲದೆ, ಶುಕ್ರವಾರ ಕೂಡ ಮುಖ್ಯಮಂತ್ರಿ ಕುಮಾರಸ್ವಾಮಿಯವರನ್ನು ಭೇಟಿ ಮಾಡಿ ಮತ್ತೆ ಸಚಿವ ಸ್ಥಾನಕ್ಕೆ ಆಗ್ರಹಿಸಿದ್ದು, ಇದಕ್ಕೆ ಕುಮಾರಸ್ವಾಮಿಯವರು ಧನಾತ್ಮಕ ಪ್ರತಿಕ್ರಿಯೆ ನೀಡಿದ್ದಾರೆಂದು ತಿಳಿದುಬಂದಿದೆ. 
SCROLL FOR NEXT