ಕಾಂಗ್ರೆಸ್ ಹಿರಿಯ ನಾಯಕ ಡಿ.ಕೆ.ಶಿವಕುಮಾರ್
ಬೆಂಗಳೂರು: ರಾಮನಗರದಲ್ಲಿ ಕಾಂಗ್ರೆಸ್ ಕಾರ್ಯಕರ್ತರು ಜೆಡಿಎಸ್ ವಿರುದ್ಧ ಹೋರಟ ಮಾಡಿಕೊಂಡು ಬಂದಿದ್ದಾರೆ. ಈಗ ಹೈಕಮಾಂಡ್ ಜೆಡಿಎಸ್'ಗೆ ಬೆಂಬಲ ನೀಡುವಂತೆ ಹೇಳಿದ್ದು, ಕೆಲ ಬಾರಿ ರಾಷ್ಟ್ರದ ಹಿತಾಸಕ್ತಿ ದೃಷ್ಟಿಯಿಂದ ಮನಸ್ಸಿಗೆ ಎಷ್ಟೇ ನೋವಾದರೂ, ತೊಂದರೆಯಾದರೂ ಕೆಲ ನಿರ್ಧಾರಗಳಿಗೆ ಗೌರವ ಕೊಡಬೇಕು ಎಂದು ಕಾಂಗ್ರೆಸ್ ಹಿರಿಯ ನಾಯಕ ಡಿ.ಕೆ.ಶಿವಕುಮಾರ್ ಅವರು ಶುಕ್ರವಾರ ಹೇಳಿದ್ದಾರೆ.
ರಾಮನಗರ ಕ್ಷೇತ್ರವನ್ನು ಜೆಡಿಎಸ್'ಗೆ ಬಿಟ್ಟುಕೊಡುವ ಬಗ್ಗೆ ಸ್ಥಳೀಯ ಕಾಂಗ್ರೆಸ್ಸಿಗರಿಂದ ವಿರೋಧ ವ್ಯಕ್ತವಾಗಿರುತ್ತಿರುವ ಕುರಿತಂತೆ ಪ್ರತಿಕ್ರಿಯೆ ನೀಡಿರುವ ಅವರು, ಮನಸ್ಸಿಲ್ಲದಿದ್ದರೂ ಹೈಕಮಾಂಡ್ ನಿರ್ಧಾರಕ್ಕೆ ಗೌರವ ಕೊಡಬೇಕಾಗುತ್ತದೆ. ಇದು ರಾಷ್ಟ್ರದ ಹಿತ ದೃಷ್ಟಿಯಿಂದ ಅನಿವಾರ್ಯವಾಗಿದೆ ಎಂದು ಹೇಳಿದ್ದಾರೆ.
ರಾಮನಗರದಲ್ಲಿ ನಾವು ಮೊದಲಿನಿಂದಲೂ ದೇವೇಗೌಡ ಹಾಗೂ ಕುಮಾರಸ್ವಾಮಿ ವಿರುದ್ಧ ಹೋರಾಟ ಮಾಡಿಕೊಂಡು ಬಂದಿದ್ದೇವೆ. ಈ ಹೋರಾಟದಲ್ಲಿ ಕೆಲ ಬಾರಿ ಸೋತಿದ್ದೇವೆ. ಕೆಲ ಬಾರಿ ಗೆದ್ದಿದ್ದೇವೆ. ಈಗ ಜೆಡಿಎಸ್'ಗೆ ಬೆಂಬಲ ನೀಡಬೇಕಿದೆ. ಹಾಗಂತೆ ದಳದಲ್ಲಿ ಕಾರ್ಯಕರ್ತರು ಇಲ್ಲ ಎಂದಲ್ಲ ಎಂದು ತಿಳಿಸಿದ್ದಾರೆ.
ಸಿಎಂ ಲಿಂಗಪ್ಪ ಅವರು ಪಕ್ಷದ ನಿರ್ಧಾರದ ಬಗ್ಗೆ ನೀಡುತ್ತಿರುವ ಹೇಳಿಕೆಗೆ ಪ್ರತಿಕ್ರಿಯೆ ನೀಡಿದ ಅವರು, ನಿಷ್ಠಾವಂತ ಕಾರ್ಯಕರ್ತರಾದ ಲಿಂಗಪ್ಪ ಅವರಿಗೆ ತಮ್ಮ ಪುತ್ರ ತಮ್ಮ ಮಾತು ಕೇಳದೆ ಬಿಜೆಪಿಗೆ ಹೋಗಿದ್ದಕ್ಕೆ ಬಂಸರವಾಗಿದೆ ಎಂದಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics