ರಾಜಕೀಯ

ಉಪ ಚುನಾವಣೆ: ರಾಮನಗರ ಬಿಜೆಪಿ ಅಭ್ಯರ್ಥಿಯಾಗಿ ಚಂದ್ರಶೇಖರ್‌ ಸ್ಪರ್ಧೆ

Raghavendra Adiga
ಬೆಂಗಳೂರು: ರಾಜ್ಯದ ವಿಧಾನಸಭೆ ಉಪ ಚುನಾವಣೆ ಕಣ ದಿನ ದಿನಕ್ಕೆ ಕಾವೇರತೊಡಗಿದ್ದು ರಾಮನಗರ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಯಾರೆನ್ನುವ ಪ್ರಶ್ನೆಗೆ ಕಡೆಗೂ ಉತ್ತರ ಸಿಕ್ಕಿದೆ.
ವಿಧಾನ ಪರಿಷತ್ ಸದಸ್ಯ ಹಾಗೂ ಕಾಂಗ್ರೆಸ್ ಮುಖಂಡ ಸಿ.ಎಂ.ಲಿಂಗಪ್ಪನವರ ಪುತ್ರ ಚಂದ್ರಶೇಖರ್‌ ರಾಮನಗರ ಬಿಜೆಪಿ ಅಭ್ಯರ್ಥಿಯಾಗಿ ಕಣಕ್ಕಿಳಿಯಲಿದ್ದಾರೆ. ಚಂದ್ರಶೇಖರ್ ಗೆ ಇದಾಗಲೇ ರಾಜ್ಯಾಧ್ಯಕ್ಷ ಬಿ.ಎಸ್.ಯಡಿಯೂರಪ್ಪ ಬಿ-ಫಾರ್ಮ್ ನೀಡಿದ್ದು ಸೋಮವಾರ ಅವರು ನಾಮಪತ್ರ ಸಲ್ಲಿಸಲಿದ್ದಾರೆ.
ಬಿಜೆಪಿ ಜಿಲ್ಲಾಧ್ಯಕ್ಷ ರುದ್ರೇಶ್‌, ಮಾಜಿ ಸಚಿವ ಸಿ.ಪಿ.ಯೋಗೇಶ್ವರ್‌  ಮತ್ತು ಚಂದ್ರಶೇಖರ್ ನಡುವೆ ಪಕ್ಷ ಯಾರನ್ನು ಅಭ್ಯರ್ಥಿಯನ್ನಾಗಿಸಲಿದೆ ಎನ್ನುವ ಕುತೂಹಲವಿತ್ತು. ಆದರೆ ಯೋಗೀಶ್ವರ್ ಕಣಕ್ಕಿಳಿಯಲು ಹಿಂಜರಿದ ಕಾರಣ ರುದ್ರೇಶ್‌ ಹಾಗೂ ಚಂದ್ರಶೇಖರ್‌ ಹೆಸರುಗಳೌ ಚಾಲ್ತಿಯಲ್ಲಿದ್ದವು.
ರಾಮನಗರ ಜಿಲ್ಲಾಧ್ಯಕ್ಷ ರುದ್ರೇಶ್ ಅವರ ಸಮ್ಮತಿಯ ಮೇರೆಗೆ ಚಂದ್ರಶೇಖರ್ ಗೆ ಟಿಕೆಟ್ ಲಭಿಸಿದೆ ಎನ್ನಲಾಗಿದೆ.
ಕಳೆದ ವಿಧಾನಸಭೆ ಚುನಾವಣೆ ವೇಳೆ ಚೆನ್ನಪಟ್ಟಣ ಹಾಗೂ ರಾಮನಗರ ಎರಡೂ ಕ್ಷೇತ್ರದಿಂದ ಸ್ಪರ್ಧಿಸಿದ್ದ ಮುಖ್ಯಮಂತ್ರಿ ಕುಮಾರಸ್ವಾಮಿ ಚೆನ್ನಪಟ್ಟಣವನ್ನು ತಮ್ಮಲ್ಲಿ ಉಳಿಸಿಕೊಂಡು ರಾಮನಗರವನ್ನು ತೆರೆವು ಮಾಡಿದ್ದರು.ಹೀಗಾಗಿ ರಾಮನಗರ ಕ್ಷೇತ್ರಕ್ಕೆ ಉಪಚುನಾವಣೆ ಎದುರಾಗಿದೆ.ಕಾಂಗ್ರೆಸ್ ಹಾಗೂ ಜೆಡಿಎಸ್‍ಗೆ ಪ್ರತಿಷ್ಠೆಯ ಕಣವಾಗಿರುವ ಜಿಲ್ಲೆಯಲ್ಲಿ ಮುಖ್ಯಮಂತ್ರಿ ಪತ್ನಿ ಅನಿತಾ ಕುಮಾರಸ್ವಾಮಿ ಕಣಲ್ಕ್ಕಿಳಿಯಲಿದ್ದು ಬಿಜೆಪಿ ಪ್ರಬಲ ಅಭ್ಯರ್ಥಿಗಾಗಿ ಹುಡುಕಾಟದಲ್ಲಿತ್ತು.
ವಿಧಾನಪರಿಷತ್ ಸದಸ್ಯ ಹಾಗೂ ಕಾಂಗ್ರೆಸ್ ಮುಖಂಡ ಸಿ.ಎಂ.ಲಿಂಗಪ್ಪನವರ ಪುತ್ರ ಚಂದ್ರಶೇಖರ್ ಇತ್ತೀಚೆಗೆ ಕಾಂಗ್ರೆಸ್ ತೊರೆದು ಬಿಜೆಪಿ ಸೇರಿದ್ದರು.
SCROLL FOR NEXT