ಬಿ.ಎಸ್. ಯಡಿಯೂರಪ್ಪ 
ರಾಜಕೀಯ

ಸಚಿವ ಮಹೇಶ್ ರಾಜೀನಾಮೆಗು ಬಿಜೆಪಿಗು ಯಾವುದೇ ಸಂಬಂಧವಿಲ್ಲ: ಯಡಿಯೂರಪ್ಪ

ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಎನ್ ಮಹೇಶ್ ರಾಜೀನಾಮೆ ನೀಡಿದ ವಿಚಾರಕ್ಕೂ ಬಿಜೆಪಿಗೂ ಯಾವುದೇ ಸಂಬಂಧವಿಲ್ಲ. ಅವರ ರಾಜೀನಾಮೆ ವೈಯಕ್ತಿಕವಾದದ್ದು, ಅದಕ್ಕೆ ಮುಖ್ಯ ಕಾರಣ ಏನು ಎಂಬುದು ತಮಗೆ ತಿಳಿದಿಲ್ಲ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್.ಯಡಿಯೂರಪ್ಪ ಹೇಳಿದ್ದಾರೆ.

ಶಿವಮೊಗ್ಗ : ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಎನ್ ಮಹೇಶ್ ರಾಜೀನಾಮೆ ನೀಡಿದ ವಿಚಾರಕ್ಕೂ ಬಿಜೆಪಿಗೂ  ಯಾವುದೇ ಸಂಬಂಧವಿಲ್ಲ. ಅವರ ರಾಜೀನಾಮೆ ವೈಯಕ್ತಿಕವಾದದ್ದು, ಅದಕ್ಕೆ ಮುಖ್ಯ ಕಾರಣ ಏನು ಎಂಬುದು ತಮಗೆ ತಿಳಿದಿಲ್ಲ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್.ಯಡಿಯೂರಪ್ಪ ಹೇಳಿದ್ದಾರೆ.

 ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಪ್ರತಿಪಕ್ಷ ಸ್ಥಾನದಲ್ಲಿದ್ದು, ವಿರೋಧ ಪಕ್ಷದ ಕೆಲಸವೇನೋ ಅದನ್ನೇ ಮಾಡುತ್ತೇವೆ. ಆದರೆ, ಒಂದು ವೇಳೆ ಯಾವುದಾದರೂ ಕಾರಣಕ್ಕೆ ಸರ್ಕಾರ ಉರುಳಿದರೆ  ಮುಂದೇನು ಮಾಡಬೇಕು ಎಂಬುದರ ಬಗ್ಗೆ ನೋಡಲಾಗುವುದು ಎಂದರು.

ಇದೇ ವೇಳೆ ರಾಜ್ಯಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದ ಯಡಿಯೂರಪ್ಪ, ಸಮ್ಮಿಶ್ರ ಸರ್ಕಾರ ತುಘಲಕ್ ದರ್ಬಾರ್ ನಡೆಸುತ್ತಿದೆ. ಆಡಳಿತ ಪಕ್ಷ ಹಾಗೂ ವಿರೋಧ ಪಕ್ಷದ ಶಾಸಕರು ಉಸಿರುಗಟ್ಟಿದ ಪರಿಸ್ಥಿತಿಯಲ್ಲಿ ಸಿಲುಕಿದ್ದಾರೆ. ವಿಧಾನಸೌಧ ಶಾಸಕರಿಲ್ಲದೆ ಭೂತ ಬಂಗಲೆಯಂತಾಗಿದೆ ಎಂದು ಆಕ್ರೋಶ ವ್ಯಕ್ತಪಡಿಸಿದರು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

'ನನ್ನ ವಿರುದ್ಧ 100 ಎಫ್‌ಐಆರ್‌ ದಾಖಲಿಸಿ ಹೆದರಲ್ಲ, ಪ್ರತಿಯೊಂದೂ ನನಗೆ ಪದಕ': ರಾಹುಲ್ ಗಾಂಧಿ

CM ಆಗಲು ಸಿದ್ದರಾಮಯ್ಯ ವಿರುದ್ಧ ಡಿಕೆಶಿ ಸ್ಟಿಂಗ್ ಆಪರೇಷನ್; ಈಗ ಸಚಿವರ ವಿರುದ್ಧವೂ ಅದೇ ತಂತ್ರ: ಕುಮಾರಸ್ವಾಮಿ ಗಂಭೀರ ಆರೋಪ

ಕಾರ್ಮಿಕರ ಆರೋಗ್ಯ ತಪಾಸಣೆ ಹೆಸರಲ್ಲಿ 800 ಕೋಟಿ ರೂ. ಲೂಟಿ; ಸಂತೋಷ್ ಲಾಡ್ ರಾಜೀನಾಮೆಗೆ ಆರಗ ಜ್ಞಾನೇಂದ್ರ ಆಗ್ರಹ

ಹೆನ್ರಿ ಕಗನ್, ಕೆನ್ಸೊ ಸೊವೈಗೆ 2026ರ ರಸಾಯನಶಾಸ್ತ್ರದ ನೊಬೆಲ್ ಪ್ರಶಸ್ತಿ

'ನಾನು ಕ್ಯಾಬ್‌ನಲ್ಲಿ ಓಡಾಡೋ ಹುಡುಗಿ ಕಣ್ರೋ.. ಹೋಗ್ಲಿ ಪಾಪ ಅಂತಾ ಬಸ್`ನಲ್ಲಿ ಬಂದೆ': MTC ಬಸ್‌ನಲ್ಲಿ ಕುಡಿದ ಮತ್ತಿನಲ್ಲಿ ಯುವತಿ ರಂಪಾಟ, Video ವೈರಲ್