ನಾಮಪತ್ರ ಸಲ್ಲಿಸುತ್ತಿರುವ ಉಗ್ರಪ್ಪ
ಬಳ್ಳಾರಿ: ನನಗೂ ಬಳ್ಳಾರಿಗೂ ಸಂಬಂಧ ಇದೆ. ಆದರೆ ಮೊಳಕಾಲ್ಮೂರು ಹಾಗೂ ಬಾದಾಮಿಯಲ್ಲಿ ಶ್ರೀರಾಮುಲುಗೇನು ಸಂಬಂಧ ಎಂದು ಬಳ್ಳಾರಿ ಲೋಕಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ಕೊನೇ ಕ್ಷಣದಲ್ಲಿ ಕಾಂಗ್ರೆಸ್ ಅಭ್ಯರ್ಥಿಯಾಗಿರುವ ವಿ.ಎಸ್. ಉಗ್ರಪ್ಪ ಅವರು ಮಂಗಳವಾರ ಪ್ರಶ್ನಿಸಿದ್ದಾರೆ.
ಇಂದು ನಗರದಲ್ಲಿ ನಾಮಪತ್ರ ಸಲ್ಲಿಕೆಗೂ ಮುನ್ನ ಸುದ್ದಿಗಾರರೊಂದಿಗೆ ಮಾತನಾಡಿದ ಉಗ್ರಪ್ಪ, ನಾನು ಹೊರಗಿನವ ಅನ್ನುವುದಾದರೆ ಶ್ರೀರಾಮುಲು ಅವರಿಗೆ ಮೊಳಕಾಲ್ಮೂರು ಮತ್ತು ಬಾದಾಮಿಯಲ್ಲಿ ಏನು ಸಂಬಂಧವಿದೆ? ಹಿಂದೆ ರಾಯಚೂರಿನಲ್ಲಿ ಯಾರು ಸ್ಪರ್ಧಿಸಿದ್ದರು ಎಂದು ಬಿಜೆಪಿಗೆ ತಿರುಗೇಟು ನೀಡಿದರು.
ಇದೇ ವೇಳೆ ತಾವು ಕಾಂಗ್ರೆಸ್ ಪಕ್ಷದ ಸರ್ವಾನುಮತದ ಅಭ್ಯರ್ಥಿಯಾಗಿದ್ದು, ಪಕ್ಷದಲ್ಲಿ ಯಾವುದೇ ಭಿನ್ನಮತ ಇಲ್ಲ ಎಂದು ಉಗ್ರಪ್ಪ ಸ್ಪಷ್ಟಪಡಿಸಿದರು.
ಬಳಿಕ ಮೆರವಣಿಗೆ ಮೂಲಕ ಜಿಲ್ಲಾಧಿಕಾರಿ ಕಚೇರಿಗೆ ತೆರಳಿ ಉಗ್ರಪ್ಪ ಅವರು ನಾಲ್ಕು ನಾಮಪತ್ರ ಸಲ್ಲಿಸಿದರು. ಉಗ್ರಪ್ಪಗೆ ಕೆಪಿಸಿಸಿ ಅಧ್ಯಕ್ಷ ದಿನೇಶ್ ಗುಂಡೂರಾವ್, ಜಿಲ್ಲಾ ಉಸ್ತುವಾರಿ ಸಚಿವ ಡಿ ಕೆ ಶಿವಕುಮಾರ್ ಅವರು ಸಾಥ್ ನೀಡಿದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics