ಬೆಂಗಳೂರು: ನನಗೀಗ 71 ವರ್ಷ. ನಾನು ಈಗಾಗಲೇ 13 ಚುನಾವಣೆಗಳನ್ನ ಎದುರಿಸಿದ್ದೇನೆ, ಈ ಐದು ಬಾರಿ ಶಾಸಕನಾಗಿದ್ದೇನೆ, ಇನ್ನು ಮುಂದೆ ಚುನಾವಣೆಗೆ ನಿಲ್ಲೋದಿಲ್ಲ, ಎಂದು ಮಾಜಿ ಸಿಎಂ ಸಿದ್ಧರಾಮಯ್ಯ ಹೇಳಿದ್ದಾರೆ.
ಬಾಗಲಕೋಟ ಜಿಲ್ಲೆಯ ಬಾದಾಮಿ ತಾಲೂಕಿನ ಗುಳೇದಗುಡ್ಡ ಪಟ್ಟಣದಲ್ಲಿ ಆಯೋಜಿಸಲಾಗಿದ್ದ ಕಾಂಗ್ರೆಸ್ ಕಾರ್ಯಕರ್ತರ ಸಭೆಯಲ್ಲಿ ಮಾತನಾಡಿದ, ಸಿದ್ಧರಾಮಯ್ಯ, ನನಗೆ 71 ವರ್ಷ ವಯಸ್ಸಾಗಿದೆ, ಹಾಗಾಗಿ ಇನ್ಮುಂದೆ ಚುನಾವಣೆಗೆ ನಿಲ್ಲೋದಿಲ್ಲ ಎಂದು ಹೇಳುವ ಮೂಲಕ ಚುನಾವಣಾ ನಿವೃತ್ತಿ ಘೋಷಿಸಿದರು.
ಅಭಿವೃದ್ಧಿ ಕೆಲಸ ಮಾಡಲು ಚುನಾವಣೆಗೆ ನಿಲ್ಲಲೇ ಬೇಕು ಎಂದಿಲ್ಲ ಎಂದು ಅಭಿಪ್ರಾಯ ವ್ಯಕ್ತಪಡಿಸಿದ ಸಿದ್ದರಾಮಯ್ಯ ಅವರು, ಬಾದಾಮಿ ಶಾಸಕನಾಗಿರುವುದರಿಂದ ನಾನು ಉತ್ತರ ಕರ್ನಾಟಕದವನೇ ಎಂದು ಮುಗುಳು ನಕ್ಕರು.
ಲೋಕಸಭೆ ಚುನಾವಣೆಯಲ್ಲಿ ಸ್ಪರ್ಧಿಸದಿರಲು ಈಗಾಗಲೇ ಸಿದ್ದರಾಮಯ್ಯ ನಿರ್ಧರಿಸಿದ್ದಾರೆ, ಈ ವಿಷಯವನ್ನು ಎಐಸಿಸಿ ಅಧ್ಯಕ್ಷ ರಾಹುಲ್ ಗಾಂಧಿ ಅವರಿಗೂ ತಿಳಿಸಿದ್ದಾರೆ ಎಂದು ಸಿದ್ದರಾಮಯ್ಯ ಆಪ್ತರೊಬ್ಬರು ಹೇಳಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics