ರಾಜಕೀಯ

ಬಳ್ಳಾರಿ ಉಪ ಚುನಾವಣೆ: ನಾಮಪತ್ರ ಹಿಂಪಡೆದ ತಿಪ್ಪೇಸ್ವಾಮಿ

Lingaraj Badiger
ಬಳ್ಳಾರಿ: ಬಳ್ಳಾರಿ ಲೋಕಸಭೆ ಉಪ ಚುನಾವಣೆಯಲ್ಲಿ ಪಕ್ಷೇತರ ಅಭ್ಯರ್ಥಿಯಾಗಿ ಸ್ಪರ್ಧಿಸಿದ್ದ ಮಾಜಿ ಶಾಸಕ ತಿಪ್ಪೇಸ್ವಾಮಿ ಅವರು ಶನಿವಾರ ತಮ್ಮ ನಾಮಪತ್ರ ಹಿಂಪಡೆದಿದ್ದಾರೆ.
ಎರಡು ದಿನಗಳ ಹಿಂದೆ ಬಿಜೆಪಿ ನಾಯಕ, ಶಾಸಕ ಬಿ ಶ್ರೀರಾಮುಲು ವಿರುದ್ಧ ಬಂಡಾಯವೆದ್ದು ಪಕ್ಷೇತರ ಅಭ್ಯರ್ಥಿಯಾಗಿ ತಿಪ್ಪೇಸ್ವಾಮಿ ನಾಮಪತ್ರ ಸಲ್ಲಿಸಿದ್ದರು. 
ನಾಮಪತ್ರ ಸಲ್ಲಿಸಿದ ಬಳಿಕ ಶ್ರೀರಾಮುಲು ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದ ತಿಪ್ಪೇಸ್ವಾಮಿ ಅವರು, ಶ್ರೀರಾಮುಲು ನಾಯಕ ಜನಾಂಗದವರೇ ಅಲ್ಲ. ಕರ್ನಾಟಕದವರೇ ಅಲ್ಲ. ಅವರು ಆಂಧ್ರ ಪ್ರದೇಶದ ಬೊಯಸ್ ಜನಾಂಗದವರು. ರಾಜಕೀಯ ಹಿತಾಸಕ್ತಿಗೆ ತಾವು ನಾಯಕ ಜನಾಂಗವರು ಅಂತಾ ಹೇಳಿಕೊಳ್ಳುತ್ತಿದ್ದಾರೆ. ಆದರೆ ಅದು ಸತ್ಯಕ್ಕೆ ದೂರವಾದ ಮಾತು. ಅವರು ಸುಳ್ಳು ಪ್ರಮಾಣ ಪತ್ರಗಳನ್ನು ಪಡೆದಿದ್ದಾರೆ ಎಂದು ಆರೋಪಿಸಿದ್ದರು.
ಕಳೆದ ವಿಧಾನಸಭಾ ಚುನಾವಣೆಯಲ್ಲಿ ಶ್ರೀರಾಮುಲು ಮೊಳಕಾಲ್ಮೂರು ಕ್ಷೇತ್ರದಿಂದ ಸ್ಪರ್ಧಿಸಿದ್ದರಿಂದ ತಿಪ್ಪೇಸ್ವಾಮಿ ಟಿಕೆಟ್ ಕಳೆದುಕೊಂಡಿದ್ದರು. ಹೀಗಾಗಿ ತಿಪ್ಪೇಸ್ವಾಮಿ ಅವರು ಬಿಜೆಪಿ ವಿರುದ್ಧವೇ ಕಿಡಿಕಾರುತ್ತಿದ್ದಾರೆ.
SCROLL FOR NEXT