ಹೆಚ್ ಡಿ ದೇವೇಗೌಡ-ಸಿದ್ದರಾಮಯ್ಯ 
ರಾಜಕೀಯ

ಒಗ್ಗಟ್ಟಿಗೆ ವೇದಿಕೆ ಸೃಷ್ಟಿಯಾಗಿದೆ ದೇವೇಗೌಡ-ಸಿದ್ದರಾಮಯ್ಯ ಸುದ್ದಿಗೋಷ್ಠಿ

ಈ ತಿಂಗಳು ನಡೆಯುವ ಉಪ ಚುನಾವಣೆಯಲ್ಲಿ ಐದು ಕ್ಷೇತ್ರಗಳಿಗೆ ಸಹಕಾರವನ್ನು ಪರಸ್ಪರ ನೀಡಲು ...

ಬೆಂಗಳೂರು: ಈ ತಿಂಗಳು ನಡೆಯುವ ಉಪ ಚುನಾವಣೆಯಲ್ಲಿ ಐದು ಕ್ಷೇತ್ರಗಳಿಗೆ ಸಹಕಾರವನ್ನು ಪರಸ್ಪರ ನೀಡಲು ಕಾಂಗ್ರೆಸ್-ಜೆಡಿಎಸ್ ಎರಡೂ ಮೈತ್ರಿ ಪಕ್ಷಗಳು ನಿರಾಕರಿಸುತ್ತಿರುವ ಸಂದರ್ಭದಲ್ಲಿ ಕಾಂಗ್ರೆಸ್, ಜೆಡಿಎಸ್ ನಾಯಕರು ಮಾದರಿಯಾಗಿ ನಿಲ್ಲಲು ಮುಂದಾಗಿದ್ದಾರೆ.

ಮೈತ್ರಿ ಸರ್ಕಾರದಲ್ಲಿ ಎಲ್ಲವೂ ಸರಿಯಾಗಿದೆ ಎಂದು ಕಾರ್ಯಕರ್ತರು ಮತ್ತು ಶಾಸಕರಿಗೆ ತೋರಿಸಲು ಕಾಂಗ್ರೆಸ್ ಶಾಸಕಾಂಗ ಪಕ್ಷದ ನಾಯಕ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಜೆಡಿಎಸ್ ವರಿಷ್ಠ ಹೆಚ್ ಡಿ ದೇವೇಗೌಡ ಇಂದು ಜಂಟಿ ಪತ್ರಿಕಾಗೋಷ್ಠಿಯನ್ನುದ್ದೇಶಿಸಿ ಮಾತನಾಡಲಿದ್ದಾರೆ. ಈ ಮೂಲಕ ಎರಡೂ ಪಕ್ಷಗಳ ಶಾಸಕರು, ಕಾರ್ಯಕರ್ತರು, ನಾಯಕರ ಮಧ್ಯೆ ಇರುವ ಭಿನ್ನಾಭಿಪ್ರಾಯಗಳನ್ನು ಬಗೆಹರಿಸು ಉಪ ಚುನಾವಣೆಯಲ್ಲಿ ಒಗ್ಗಟ್ಟಿನಿಂದಿದ್ದೇವೆ ಎಂಬ ಸಂದೇಶ ಸಾರಲು ಮುಂದಾಗಿದ್ದಾರೆ.

ಪಕ್ಷದಲ್ಲಿ ತಳಮಟ್ಟದಲ್ಲಿ ಇರುವ ಗೊಂದಲವನ್ನು ಬಗೆಹರಿಸಲು ಈ ಇಬ್ಬರು ಅಗ್ರಗಣ್ಯ ನಾಯಕರು ಮನಸ್ಸು ತೋರಿದರೆ ಎಲ್ಲ ಸಮಸ್ಯೆ ಬಗೆಹರಿಯುತ್ತದೆ ಎಂಬ ಅಭಿಪ್ರಾಯ ನಾಯಕರದ್ದು.

ಮಂಡ್ಯ, ಶಿವಮೊಗ್ಗ ಮತ್ತು ರಾಮನಗರ ಕ್ಷೇತ್ರಗಳಲ್ಲಿ ಜೆಡಿಎಸ್ ಅಭ್ಯರ್ಥಿಗಳನ್ನು ಸ್ಪರ್ಧಿಸಲು ಬಿಟ್ಟಿರುವುದು ಕಾಂಗ್ರೆಸ್ ನಲ್ಲಿ ಕೆಲವು ನಾಯಕರಿಗೆ ಅಸಮಾಧಾನ ತಂದಿದೆ. ಮಂಡ್ಯ ಮತ್ತು ಶಿವಮೊಗ್ಗ ಜಿಲ್ಲಾ ಕಾಂಗ್ರೆಸ್ ಘಟಕದಲ್ಲಿ ಜೆಡಿಎಸ್ ಗೆ ವಿರೋಧ ಕೇಳಿಬಂದಿದೆ. ರಾಮನಗರದಲ್ಲಿ ಅನಿತಾ ಕುಮಾರಸ್ವಾಮಿಯವರನ್ನು ಕಣಕ್ಕಿಳಿಸಿರುವುದು ಕೂಡ ಜೆಡಿಎಸ್ ಬಗ್ಗೆ ಅಪಸ್ವರ ಕೇಳಿಬಂದಿದೆ.

ಉಪ ಚುನಾವಣೆ ನಂತರ ಎರಡೂ ಪಕ್ಷಗಳ ಮೇಲೆ ಪರಿಣಾಮ ಬೀರಬಹುದಾದ ವಿಷಯಗಳ ಕುರಿತು ನಾವು ಮಾತುಕತೆ ನಡೆಸಲಿದ್ದೇವೆ. ನಾವು ಜೆಡಿಎಸ್ ಗೆ ಅಗತ್ಯವಿರುವಷ್ಟು ಪ್ರಚಾರ ಮಾಡುತ್ತೇವೆ. ನಮ್ಮ ಪಕ್ಷ ಮತ್ತು ಕಾರ್ಯಕರ್ತರನ್ನು ರಕ್ಷಿಸಲಿದ್ದೇವೆ ಎನ್ನುತ್ತಾರೆ ಮಾಜಿ ಸಂಸದ ಎನ್ ಚೆಲುವರಾಯ ಸ್ವಾಮಿ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

'ನಿಮ್ಮ ಭಾಷಣ ನಾಚಿಕೆಯಿಲ್ಲದೆ ಸಮರ್ಥನೆ ಮಾಡಿಕೊಂಡಂತೆ ಇತ್ತು': 1947ರ ಐನ್ ಸ್ಟೈನ್ ನೆಹರೂಗೆ ಬರೆದ ಪತ್ರ ಉಲ್ಲೇಖಿಸಿ Modi ಟೀಕಿಸಿದ ಕಾಂಗ್ರೆಸ್

'ಇಸ್ರೇಲ್‌ ಜೊತೆ ನಮ್ಮ ಸಂಬಂಧ 'ರಕ್ತ ಮತ್ತು ತ್ಯಾಗ'ದಲ್ಲಿ ಬರೆಯಲ್ಪಟ್ಟಿದೆ, ನಾನು ಹುಟ್ಟಿದ ವರ್ಷ ಭಾರತ ಇಸ್ರೇಲ್ ಗೆ ಮಾನ್ಯತೆ ನೀಡಿತು': ಪ್ರಧಾನಿ ಮೋದಿ-Video

ಹಗರಣ ರಹಿತ ಹುದ್ದೆ ಭರ್ತಿಗೆ ಕ್ರಮ: ಯುವಕರು ಧೈರ್ಯವಾಗಿರಿ, ನಿಮ್ಮ ಸಮಸ್ಯೆ ಬಗೆಹರಿಸುತ್ತೇವೆ, ಸದ್ಯದಲ್ಲೇ ಸಂದೇಶ ನೀಡುತ್ತೇವೆ; ಡಿ ಕೆ ಶಿವಕುಮಾರ್

ದಲಿತಾಸ್ತ್ರದ ಮೂಲಕ ಕಟ್ಟಿಹಾಕಲು ಸಿದ್ದು ಬಣ ಕಸರತ್ತು: ತೆರಮರೆಯಲ್ಲಿ ಡಿಕೆಶಿ ಬೆಂಬಲಿಗರ ಮಸಲತ್ತು; ಅಂತರ್ಯುದ್ಧದಲ್ಲಿ ಯಾರಿಗಿದೆ ಗೆಲ್ಲುವ ತಾಕತ್ತು?

Gold Rate Today: ಬೆಂಗಳೂರಿನಲ್ಲಿ ಇಂದಿನ ಚಿನ್ನ, ಬೆಳ್ಳಿ ದರ ಎಷ್ಟಿದೆ? ಇಲ್ಲಿದೆ ವಿವರ...

SCROLL FOR NEXT