ಬಿಜೆಪಿ ರಾಜ್ಯಾಧ್ಯಕ್ಷ ಯಡಿಯೂರಪ್ಪ 
ರಾಜಕೀಯ

ಕರ್ನಾಟಕ ಉಪಚುನಾವಣೆ: ಅ.23ರಿಂದ ಮಂಡ್ಯದಲ್ಲಿ ಯಡಿಯೂರಪ್ಪ ಪ್ರಚಾರ

ರಾಜ್ಯ ಉಪಚುನಾವಣೆ ಕದನ ಹತ್ತಿರ ಬರುತ್ತಿರವ ಹಿನ್ನಲೆಯಲ್ಲಿ ಭಾರೀ ತಂತ್ರಗಳನ್ನು ರೂಪಿಸುತ್ತಿರುವ ಬಿಜೆಪಿ, ಅ.23ರಿಂದ ಮಂಡ್ಯ ಲೋಕಸಭಾ ಕ್ಷೇತ್ರದಲ್ಲಿ ಪ್ರಚಾರ ನಡೆಸಲು ನಿರ್ಧರಿಸಿದೆ...

ಮೈಸೂರು: ರಾಜ್ಯ ಉಪಚುನಾವಣೆ ಕದನ ಹತ್ತಿರ ಬರುತ್ತಿರವ ಹಿನ್ನಲೆಯಲ್ಲಿ ಭಾರೀ ತಂತ್ರಗಳನ್ನು ರೂಪಿಸುತ್ತಿರುವ ಬಿಜೆಪಿ, ಅ.23ರಿಂದ ಮಂಡ್ಯ ಲೋಕಸಭಾ ಕ್ಷೇತ್ರದಲ್ಲಿ ಪ್ರಚಾರ ನಡೆಸಲು ನಿರ್ಧರಿಸಿದೆ. 
ಈ ಕುರಿತಂತೆ ಮಾಹಿತಿ ನೀಡಿರುವ ಮಾಜಿ ಉಪ ಮುಖ್ಯಮಂತ್ರಿ ಹಾಗೂ ಬಿಜೆಪಿ ನಾಯಕ ಆ.ಅಶೋಕ್ ಅವರು, ಮಂಡ್ಯ ಲೋಕಸಭಾ ಕ್ಷೇತ್ರದಲ್ಲಿ ಮಂಗಳವಾರದಿಂದ ಬಿಜೆಪಿ ರಾಜ್ಯಾಧ್ಯಕ್ಷ ಯಡಿಯೂರಪ್ಪ ಅವರು ಪ್ರಚಾರ ಕಾರ್ಯ ಆರಂಭಿಸಲಿದ್ದಾರೆಂದು ಹೇಳಿದ್ದಾರೆ. 
ಶ್ರೀರಂಗಪಟ್ಟಣ, ಪಾಂಡವಪುರ, ಕೆಆರ್ ಪೇಟೆ ಹಾಗೂ ಕೆಆರ್ ನಗರದಲ್ಲಿ ಪ್ರಚಾರ ನಡೆಸಿದ ಬಳಿದ ಶುಕ್ರವಾರ ಮಳವಳ್ಳಿ, ಮದ್ದೂರು ಹಾಗೂ ನಾಗಮಂಗಲ ತಾಲೂಕುಗಳಲ್ಲಿ ಪ್ರಚಾರ ನಡೆಸಲಿದ್ದಾರೆ. 
ಮತದಾರರನ್ನು ತಲುಪಲು ಪ್ರತೀ ತಾಲೂಕಿನಲ್ಲಿಯೂ ಒಂದು ರಾಜ್ಯಗಳ ನಾಯಕರು, ಮಾಜಿ ಸಚಿವರು ಹಾಗೂ ಪಕ್ಷದ ಹಿರಿಯ ನಾಯಕರನ್ನು ಬಿಜೆಪಿ ನೇಮಕ ಮಾಡಿದೆ. ಮೋದಿ ಅಲೆಯಲ್ಲಿ ಸಿಲುಕಿರುವ ಕಾಂಗ್ರೆಸ್ ಸೋಲು ಕಾಣಲಿದೆ. ಲೋಕಸಭಾ ಚುನಾವಣೆಯಲ್ಲಿ ರಾಜ್ಯ ಬಿಜೆಪಿ 18 ಕ್ಷೇತ್ರಗಳಲ್ಲಿ ಗೆಲವು ಸಾಧಿಸಲಿದೆ. ಕಾಂಗ್ರೆಸ್ ಹಾಗೂ ಜೆಡಿಎಸ್ ಮೈತ್ರಿ ಸರ್ಕಾರದಿಂದ ಜನರು ಬೇಸತ್ತು ಹೋಗಿದ್ದು, ಯಡಿಯೂರಪ್ಪ ಅವರು ಯಾವಾಗ ಮುಖ್ಯಮಂತ್ರಿಯಾಗುತ್ತಾರೋ ಎಂದು ಕಾಯುತ್ತಿದ್ದಾರೆಂದು ಅಶೋಕ್ ಅವರು ತಿಳಿಸಿದ್ದಾರೆ. 

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ಉಪ ಚುನಾವಣೆ ಫಲಿತಾಂಶ| ಅಸ್ಸಾಂ, ಪ.ಬಂಗಾಳ, ತಮಿಳುನಾಡು, ಪುದುಚೇರಿಯ ಆರು ಕ್ಷೇತ್ರಗಳಲ್ಲಿ ಮತ ಎಣಿಕೆ ಪ್ರಗತಿಯಲ್ಲಿ

Sting operation ಮೂಲಕ ನಿಮ್ಮನ್ನು ಸಿಲುಕಿಸಲು ಯತ್ನಿಸಿರುವುದು ನಿಜವೇ ಆಗಿದ್ದರೆ ತನಿಖೆಗೆ ಆದೇಶಿಸಿ: ಸಿಎಂ ಡಿಕೆ.ಶಿವಕುಮಾರ್'ಗೆ HDK ಸವಾಲು

ಮತ ಕಳ್ಳತನದಿಂದಲೇ ಮೋದಿ ಪ್ರಧಾನಿಯಾಗಿದ್ದು, ಗೆಲ್ಲಲಾಗದ ರಾಜ್ಯಗಳಲ್ಲೂ BJP ಗೆಲುವು: ಅಭಿಜೀತ್ ದೀಪ್ಕೆ

ರಾಜ್ಯದ ಬಾಕಿ ಹಣದ ಬಗ್ಗೆ ನಿರ್ಮಲಾ ಸೀತಾರಾಮನ್ ಜೊತೆ ಚರ್ಚೆ: GST ಮಂಡಳಿ ಸಭೆ ಬಳಿಕ CM ಡಿಕೆ.ಶಿವಕುಮಾರ್ ಹರ್ಷ

ಉತ್ತರ ಭಾರತ ವ್ಯಕ್ತಿಯಿಂದ ಡಿಕೆಶಿ ಸಿಲುಕಿಸಲು ಯತ್ನ: ಸಚಿವ ಸತೀಶ್ ಜಾರಕಿಹೊಳಿ