ಮಾಜಿ ಸಿಎಂ ಸಿದ್ದರಾಮಯ್ಯ 
ರಾಜಕೀಯ

ಉಪಚುನಾವಣೆ: ಕಾಂಗ್ರೆಸ್-ಜೆಡಿಎಸ್ ಕಾರ್ಯಕರ್ತರ ಒಗ್ಗೂಡಿಸುವುದು ಸಿದ್ದರಾಮಯ್ಯಗೆ ಸದ್ಯದ ಸವಾಲು!

ಒಂದು ಸಮಯದಲ್ಲಿ ತಮ್ಮ ರಾಜಕೀಯ ಬದ್ಧ ವೈರಿ ಮಾಜಿ ಪ್ರಧಾನಿ ಹೆಚ್ ಡಿ ದೇವೇಗೌಡರ ಜೊತೆ ...

ಮೈಸೂರು: ಒಂದು ಸಮಯದಲ್ಲಿ ತಮ್ಮ ರಾಜಕೀಯ ಬದ್ಧ ವೈರಿ ಮಾಜಿ ಪ್ರಧಾನಿ ಹೆಚ್ ಡಿ ದೇವೇಗೌಡರ ಜೊತೆ ಒಗ್ಗಟ್ಟನ್ನು ಪ್ರದರ್ಶಿಸಿದ ನಂತರ ಇದೀಗ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಮತ್ತು ಜೆಡಿಎಸ್ ಕಾರ್ಯಕರ್ತರನ್ನು ಒಟ್ಟು ಸೇರಿಸುವುದು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಸವಾಲಾಗಿದೆ.

ಹಳೆ ಮೈಸೂರು, ಮಂಡ್ಯ ಲೋಕಸಭಾ ಕ್ಷೇತ್ರದಲ್ಲಿ ಕಾಂಗ್ರೆಸ್ ಮತ್ತು ಜೆಡಿಎಸ್ ಕಾರ್ಯಕರ್ತರನ್ನು ಒಟ್ಟು ಸೇರಿಸುವುದು ಕಠಿಣವೆಂದೇ ಹೇಳಲಾಗುತ್ತಿದೆ. ಇಲ್ಲಿ ಈ ಕೆಲಸಕ್ಕಾಗಿ ತಮ್ಮ ಸ್ನೇಹಿತರಾದ ಹೆಚ್ ಸಿ ಮಹದೇವಪ್ಪ ಮತ್ತು ಕೆ ಜೆ ಜಾರ್ಜ್ ಅವರನ್ನು ಮಂಡ್ಯ ಕ್ಷೇತ್ರದಲ್ಲಿ ಕೆಲಸ ಮಾಡಲು ನಿಯೋಜಿಸಿದ್ದಾರೆ. ಮಂಡ್ಯ ಕ್ಷೇತ್ರದಲ್ಲಿ ಜೆಡಿಎಸ್ ಅಭ್ಯರ್ಥಿ ಪರ ಕೆಲಸ ಮಾಡಿದರೆ ತಮ್ಮ ಅಸ್ತಿತ್ವ ಕಳೆದುಹೋಗಬಹುದು ಎಂಬ ಆತಂಕ ಕಾಂಗ್ರೆಸ್ ಕಾರ್ಯಕರ್ತರದ್ದು.

ಈ ಮಧ್ಯೆ, ಬಿಜೆಪಿಯನ್ನು ಸೋಲಿಸಲು ಸ್ಥಳೀಯ ಮಟ್ಟದ ಕಾರ್ಯಕರ್ತರು ಒಗ್ಗಟ್ಟನ್ನು ಪ್ರದರ್ಶಿಸಿ ಜೆಡಿಎಸ್ ಜೊತೆ ಕೆಲಸ ಮಾಡುವುದು ಅನಿವಾರ್ಯ ಎಂದು ಹಿರಿಯ ನಾಯಕರು ಮನವರಿಕೆ ಮಾಡುತ್ತಿದ್ದಾರೆ. ಮಂಡ್ಯ ಕ್ಷೇತ್ರದಲ್ಲಿನ ರಾಜಕೀಯ ಸವಾಲುಗಳನ್ನು ಮನಗಂಡು ಸ್ವತಃ ಸಿದ್ದರಾಮಯ್ಯನವರೇ ಅಲ್ಲಿ ಪ್ರಚಾರ ಕಾರ್ಯಕ್ಕೆ ಧುಮುಕಲು ನಿರ್ಧರಿಸಿದ್ದಾರೆ. ಇದೇ 24ರಂದು ಮಂಡ್ಯ ಮತ್ತು ಕೆ ಆರ್ ನಗರಗಳಲ್ಲಿ ಅವರು ಪ್ರಚಾರ ನಡೆಸಲಿದ್ದಾರೆ.

ನವೆಂಬರ್ 3ರಂದು ನಡೆಯುವ ಉಪ ಚುನಾವಣೆಯಲ್ಲಿ ಜೆಡಿಎಸ್ ಜೊತೆ ಕೈ ಜೋಡಿಸುವುದರಿಂದ ಪಕ್ಷದ ಭವಿಷ್ಯಕ್ಕೆ ದೀರ್ಘಾವಧಿಯಲ್ಲಿ ಸಮಸ್ಯೆಯಿದೆಯೇ ಎಂದು ಕೇಳಿದರೆ ಬಿಜೆಪಿಯನ್ನು ಸೋಲಿಸಲು ಕಾಂಗ್ರೆಸ್-ಜೆಡಿಎಸ್ ಒಟ್ಟಾಗಿ ಕೆಲಸ ಮಾಡಿ ಉಪ ಚುನಾವಣೆಯನ್ನು ಎದುರಿಸುವ ಅಗತ್ಯವಿದೆ ಎನ್ನುತ್ತಾರೆ ಸಿದ್ದರಾಮಯ್ಯನವರು.

ಜೆಡಿಎಸ್ ಜೊತೆ ಕೈ ಜೋಡಿಸುವುದು ಪಕ್ಷದ ಹೈಕಮಾಂಡ್ ಮತ್ತು ರಾಹುಲ್ ಗಾಂಧಿಯವರ ನಿರ್ಧಾರವಾಗಿದೆ. ಅದನ್ನು ನಾವು ಒಪ್ಪಿಕೊಳ್ಳಲೇಬೇಕು. ಇನ್ನು ಈ ಬಾರಿಯ ಉಪ ಚುನಾವಣೆಯಲ್ಲಿ ಶಿವಮೊಗ್ಗ, ಮಂಡ್ಯ ಮತ್ತು ರಾಮನಗರ ಕ್ಷೇತ್ರ ಸೇರಿದಂತೆ ಎಲ್ಲಾ 5 ಕ್ಷೇತ್ರಗಳಲ್ಲಿ ಜೆಡಿಎಸ್-ಕಾಂಗ್ರೆಸ್ ಜಯಭೇರಿ ಬಾರಿಸಲಿದೆ. ಜಮಖಂಡಿ ಮತ್ತು ಬಳ್ಳಾರಿಯಲ್ಲಿ ಕಾಂಗ್ರೆಸ್ ಸುಲಭವಾಗಿ ಗೆಲ್ಲಲಿದೆ. ಬಳ್ಳಾರಿಯಲ್ಲಿ ಇಂದು ನಂತರ ಶಿವಮೊಗ್ಗ, ಜಮಖಂಡಿಗಳಲ್ಲಿ ನಾಡಿದ್ದು 25ರಿಂದ ನವೆಂಬರ್ 1ರ ನಡುವೆ ಪ್ರಚಾರ ನಡೆಸುತ್ತೇನೆ ಎಂದಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ರಾಜ್‌ಘಟ್‌ನಲ್ಲಿ 'ಇಂಡಿಯಾ' ನಾಯಕರಿಂದ ಧರಣಿ; ಜ್ಞಾನೇಶ್ ಕುಮಾರ್ ರಾಜೀನಾಮೆ ನೀಡುವವರೆಗೂ 'ವೋಟ್ ಚೋರಿ' ಹೋರಾಟ ಮುಂದುವರಿಸಲು ಪ್ರತಿಜ್ಞೆ!

ಅಂಬಾನಿ ಭಾರತದ ನಿಜವಾದ ಬಾಸ್?: ಭಾರತದಲ್ಲಿ ಸ್ಟಾರ್ ಲಿಂಕ್ ಸೇವೆ ಆರಂಭ ವಿಳಂಬಕ್ಕೆ ಎಲಾನ್ ಮಸ್ಕ್ ಹತಾಶೆ!

SIR ಕಾನೂನುಬದ್ಧ: ಪ್ರತಿಪಕ್ಷಗಳ ಪ್ರತಿಭಟನೆ ನಡುವೆ CEC ಜ್ಞಾನೇಶ್ ಬೆಂಬಲಕ್ಕೆ ನಿಂತ 42 ನಿವೃತ್ತ ನ್ಯಾಯಾಧೀಶರು!

ಸರ್ಕಾರವನ್ನು ಅಸ್ಥಿರಗೊಳಿಸುವ ಪಿತೂರಿ: 'ಸ್ಟಿಂಗ್ ಆಪರೇಷನ್' ಕುರಿತು ಸಿಎಂ DKS ಎಚ್ಚರಿಕೆ ಕರೆಗೆ ಸಚಿವರಿಂದ ಬೆಂಬಲ

ರೇಣುಕಾಸ್ವಾಮಿ ಕೊಲೆ ಪ್ರಕರಣ: ನಟ ಚಿಕ್ಕಣ್ಣ, ಯಶಸ್ ಸೂರ್ಯಗೆ ಬಿಗ್ ಶಾಕ್‌; ಇಬ್ಬರಿಗೂ ಕೋರ್ಟ್ ಸಮನ್ಸ್