ಸಚಿವ ಡಿ.ಕೆ.ಶಿವಕುಮಾರ್ 
ರಾಜಕೀಯ

'ಶೋ' ಮಾಡೋದು ಬಿಟ್ಟು ಕೆಲಸ ಮಾಡಿ: ಸಚಿವ ಡಿಕೆಶಿಗೆ ರಮೇಶ್ ಜಾರಕಿಹೊಳಿ

ಬೆಳಗಾವಿ ಜಿಲ್ಲೆ ರಾಜಕಾರಣದಲ್ಲಿ ಹಸ್ತಕ್ಷೇಪ ಮಾಡುತ್ತಿದ್ದಾರೆಂದು ಸಚಿವ ಡಿ.ಕೆ.ಶಿವಕುಮಾರ್ ವಿರುದ್ಧ ವಾಗ್ದಾಳಿ ನಡೆಸಿದ್ದ ಸಚಿವ ರಮೇಶ್ ಜಾರಕಿಹೊಳಿಯವರು ಇದೀಗ ಮತ್ತೆ ಡಿಕೆಶಿ ವಿರುದ್ಧ ಹರಿಹಾಯ್ದಿದ್ದಾರೆ...

ಬಳ್ಳಾರಿ: ಬೆಳಗಾವಿ ಜಿಲ್ಲೆ ರಾಜಕಾರಣದಲ್ಲಿ ಹಸ್ತಕ್ಷೇಪ ಮಾಡುತ್ತಿದ್ದಾರೆಂದು ಸಚಿವ ಡಿ.ಕೆ.ಶಿವಕುಮಾರ್ ವಿರುದ್ಧ ವಾಗ್ದಾಳಿ ನಡೆಸಿದ್ದ ಸಚಿವ ರಮೇಶ್ ಜಾರಕಿಹೊಳಿಯವರು ಇದೀಗ ಮತ್ತೆ ಡಿಕೆಶಿ ವಿರುದ್ಧ ಹರಿಹಾಯ್ದಿದ್ದಾರೆ. 
ಬಳ್ಳಾರಿ ಜಿಲ್ಲೆಯ ಕೂಡ್ಲಿಗಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸಚಿವ ಡಿ.ಕೆ.ಶಿವಕುಮಾರ್ ಅವರು ಶೋ ಮಾಡೋದು ಬಿಟ್ಟು ಕೆಲಸ ಮಾಡಿದರೆ ಒಳಿತ ಎಂದು ನೇರವಾಗಿ ವಾಗ್ದಾಳಿ ನಡೆಸಿದ್ದಾರೆ. 
ಲಿಂಗಾಯತ ಧರ್ಮಕದ ಕುರಿತು ಡಿ.ಕೆ.ಶಿವಕುಮಾರ್ ಅವರು ನೀಡಿರುವುದು ಅವರ ವೈಯಕ್ತಿಕ ಹೇಳಿಕೆ. ಆದರೆ, ಈ ಬಗ್ಗೆ ಆಕ್ಷೇಪ ಇದ್ದಿದ್ದರೆ, ಸಚಿವ ಸಂಪುಟ ಸಭೆಯಲ್ಲಿಯೇ ಚರ್ಚೆ ಮಾಡಬಹುದಿತ್ತಲ್ಲವೇ? ಯಾಕೆ ಮೌನ ವಹಿಸಿದ್ದರು? ಇದೀಗ ಬಹಿರಂಗ ಹೇಳಿಕೆ ನೀಡುವ ಉದ್ದೇಶವೇನು? ಅವರ ಹಿಂಬಾಲಕರಾದ ಶಾಸಕಿ ಲಕ್ಷ್ಮೀ ಹೆಬ್ಬಾಳ್ಕರ್ ಅವರು ಪ್ರತ್ಯೇಕ ಧರ್ಮದ ಬಗ್ಗೆ ಮಾತನಾಡುವಾಗ ಶಿವಕುಮಾರ್ ಎಲ್ಲಿಗೆ ಹೋಗಿದ್ದರು? ಪ್ರತಿ ಸಭೆಯಲ್ಲಿ ಮಾತನಾಡಿದರೂ ಏಕೆ ತಡೆಯಲಿಲ್ಲ ಎಂದು ಪ್ರಶ್ನಿಸಿದ್ದಾರೆ. 
ಅಲ್ಲದೆ ಲಿಂಗಾಯತ ಧರ್ಮದ ವಿಚಾರ ಕುರಿತು ಸಂಪುಟ ಸಭೆಗಳಲ್ಲಿ ಅಂದು ಸಚಿವರಾಗಿದ್ದ ಈಶ್ವರ ಖಂಡ್ರೆ ಮತ್ತು ಎಸ್.ಎಸ್.ಮಲ್ಲಿಕಾರ್ಜುನ ಅವರು ಮಾತ್ರ ಪರ ವಿರೋಧವಾಗಿ ಚರ್ಚಿಸಿದರೆ ವಿನಃ ಇವರೇಕೆ ಮೌನವಾಗಿದ್ದರು? ಎಂದು ಕೇಳಿದ್ದಾರೆ. 
ಪ್ರತ್ಯೇಕ ಧರ್ಮದ ಹೇಳಿಕೆಯನ್ನು ನಾವು ಪರಿಗಣಿಸಿದ್ದೇವೆ ಅಷ್ಟೇ. ಈ ವಿಚಾರದಲ್ಲಿ ಎಂ.ಬಿ. ಪಾಟೀಲ್ ಅವರಿಗೆ ನಮ್ಮ ಬೆಂಬಲವಿದೆ ಎಂದಿದ್ದಾರೆ. 

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

'ಮತಗಳ್ಳತನ' ನಡೆದಿರುವುದನ್ನು ಅಧ್ಯಕ್ಷೆ ದ್ರೌಪದಿ ಮುರ್ಮು ನಿರಾಕರಿಸಲಿಲ್ಲ, ನನಗೆ ಆಶ್ಚರ್ಯವಾಯಿತು: ರಾಹುಲ್ ಗಾಂಧಿ

ಬೆಂಗಳೂರು: ನಮ್ಮ ಮೆಟ್ರೋದಲ್ಲಿ Alt News ಸಹ ಸ್ಥಾಪಕ ಮೊಹಮ್ಮದ್ ಜುಬೈರ್ ಗೆ ಹಿಗ್ಗಾಮುಗ್ಗ ಥಳಿತ?, Video Viral

19ನೇ ಓವರ್‌ನಲ್ಲೇ 250 ರನ್ ಚೇಸ್: ಟಿ20 ಕ್ರಿಕೆಟ್‌ನಲ್ಲಿ ಭಾರತವನ್ನು ಸೋಲಿಸಿ ದಾಖಲೆ ಬರೆದ ವಿಂಡೀಸ್

CJP Protest: ಭಾರತದ ಯುವಕರು ದೆಹಲಿಗೆ ತಲುಪುವುದನ್ನು ತಡೆಯಲು ಯಾರಿಂದಲೂ ಸಾಧ್ಯವಿಲ್ಲ: ಚಿರಾಗ್ ಪಾಸ್ವಾನ್

24 ಗಂಟೆ ಇಂಟರ್ನೆಟ್ ಕಟ್, 57 ಮೆಟ್ರೋ ನಿಲ್ದಾಣ ಬಂದ್: ಸಿಜೆಪಿ ಪ್ರತಿಭಟನೆಗೂ ಮುನ್ನ ದೆಹಲಿ ಹೈ ಅಲರ್ಟ್