ಎಚ್ ಡಿ ಕುಮಾರಸ್ವಾಮಿ 
ರಾಜಕೀಯ

ಸರ್ಕಾರಿ ಕಡತಗಳೆಲ್ಲಾ ಕನ್ನಡದಲ್ಲಿರಬೇಕು, ಇಲ್ಲದಿದ್ದರೆ ಸಹಿ ಮಾಡಲ್ಲ: ಸಿಎಂ ಕುಮಾರಸ್ವಾಮಿ ಖಡಕ್ ಸಂದೇಶ

2018ರ ನವೆಂಬರ್ 1 ಕನ್ನಡ ರಾಜ್ಯೋತ್ಸವದಿಂದ ಸರ್ಕಾರದ ಎಲ್ಲಾ ಕಡತಗಳು ಕನ್ನಡದಲ್ಲಿರಬೇಕು, ಇಲ್ಲದಿದ್ದರೆ ಸಹಿ ಹಾಕುವುದಿಲ್ಲ ಎಂದು ಮುಖ್ಯಮಂತ್ರಿ ಎಚ್ ಡಿ ಕುಮಾರಸ್ವಾಮಿ...

ಬೆಂಗಳೂರು: 2018ರ ನವೆಂಬರ್ 1 ಕನ್ನಡ ರಾಜ್ಯೋತ್ಸವದಿಂದ ಸರ್ಕಾರದ ಎಲ್ಲಾ ಕಡತಗಳು ಕನ್ನಡದಲ್ಲಿರಬೇಕು, ಇಲ್ಲದಿದ್ದರೆ ಸಹಿ ಹಾಕುವುದಿಲ್ಲ ಎಂದು ಮುಖ್ಯಮಂತ್ರಿ ಎಚ್ ಡಿ ಕುಮಾರಸ್ವಾಮಿ ಅವರು ಅಧಿಕಾರಿಗಳಿಗೆ ಖಡಕ್ ಸಂದೇಶ ನೀಡಿದ್ದಾರೆ. 
ರಾಜ್ಯ ಸರ್ಕಾರದ ಎಲ್ಲಾ ಕಡತಗಳಲ್ಲಿ ಕನ್ನಡ ಕಡ್ಡಾಯ ಜಾರಿಗೆ ಮಾಡಲು ಕುಮಾರಸ್ವಾಮಿ ನೇತೃತ್ವದ ಸಮ್ಮಿಶ್ರ ಸರ್ಕಾರ ನಿರ್ಧರಿಸಿದೆ. ನವೆಂಬರ್ 1ರ ಬಳಿಕ ರಾಜ್ಯ ಸರ್ಕಾರದ ಕಡತಗಳಲ್ಲಿ ಕನ್ನಡ ಅನುಸರಿಸದಿದ್ದರೆ ಅಂತಹ ಕಡತಗಳನ್ನು ಪರಿಶೀಲಿಸಲಾಗುವುದಿಲ್ಲ ಎಂದು ಖಡಕ್ ಸೂಚನೆ ನೀಡಿದ್ದಾರೆ. 
ರಾಜ್ಯ ಸರ್ಕಾರದ ಕಡತಗಳು ಹಾಗೂ ಅಂತರ ರಾಜ್ಯ ವಿಷಯಗಳಿಗೆ ಸಂಬಂಧಿಸಿದ ಎಲ್ಲಾ ಆಡಳಿತಾತ್ಮಕ ಕಡತಗಳು ಕೇಂದ್ರ, ಹೈಕೋರ್ಟ್ ಮತ್ತು ಸುಪ್ರೀಂ ಕೋರ್ಟ್ ಕಡತಗಳಲ್ಲೂ ಕನ್ನಡ ಕಡ್ಡಾಯವಾಗಿ ಜಾರಿಗೆ ತರಬೇಕು ಎಂದು ಕುಮಾರಸ್ವಾಮಿ ತಿಳಿಸಿದ್ದಾರೆ.
ಒಟ್ಟಿನಲ್ಲಿ ಕನ್ನಡ ರಾಜ್ಯೋತ್ಸವ ದಿನದಿಂದ ರಾಜ್ಯದ ಎಲ್ಲಾ ಸರ್ಕಾರಿ ಕಡತಗಳೂ ಕನ್ನಡಮಯವಾಗಲಿದೆಯೇ ಎಂಬುದನ್ನು ಕಾದುನೋಡಬೇಕಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ಸಿಇಸಿ ವಿರುದ್ಧದ ವಿಪಕ್ಷಗಳ ಪ್ರತಿಭಟನೆ: ವಶಕ್ಕೆ ಪಡೆದ ಬೆನ್ನಲ್ಲೇ ರಾಹುಲ್, ಪ್ರಿಯಾಂಕಾ ಗಾಂಧಿ ಬಿಡುಗಡೆ

ಅಧಿಕಾರಿಯಂತೆ ನಟಿಸಿ ಆಪ್ ನಾಯಕನಿಗೆ ಧೋಕಾ; ಮದುವೆಯಾಗಿ ಆಭರಣಗಳೊಂದಿಗೆ ಮಹಿಳೆ ಪರಾರಿ!

ಆಪರೇಷನ್ ಸಿಂಧೂರ್, ರಕ್ಷಕ್‌ನಲ್ಲಿ ಪ್ರಮುಖ ಪಾತ್ರವಹಿಸಿದ್ದ ಅಶುತೋಷ್ ದೀಕ್ಷಿತ್ ವಾಯುಪಡೆಯ ನೂತನ ಮುಖ್ಯಸ್ಥ!

ಮಚ್ಛಾರ್ ಆರೋಗ್ಯಯಲ್ಲಿ 'ಸ್ಥಿರ ಸುಧಾರಣೆ': ಭಾರತೀಯ ರಾಯಭಾರ ಕಚೇರಿ

KPSC ನೇಮಕಾತಿ ಹಗರಣ: EDಯಿಂದ ಮಾಜಿ ಅಧ್ಯಕ್ಷ ಶಿವಶಂಕರಪ್ಪ ಸಾಹುಕಾರ್‌, ಸದಸ್ಯೆ ಗೀತಾ ಬಂಧನ!