ಸಂಗ್ರಹ ಚಿತ್ರ 
ರಾಜಕೀಯ

ಶಿವಮೊಗ್ಗ ಉಪಚುನಾವಣೆ: ದಕ್ಷಿಣ ಭಾರತದ ಬಿಜೆಪಿ ಹೆಬ್ಬಾಗಿಲಿಗೆ ಶೀಘ್ರ ಬೀಗ- ಎಚ್ ಡಿ ದೇವೇಗೌಡ

ಉಪ ಚುನಾವಣೆ ಕಣ ರಂಗೇರಿದ್ದು, ಇದೀಗ ಚುನಾವಣಾ ಕಣಕ್ಕೆ ಜೆಡಿಎಸ್ ವರಿಷ್ಠ ಎಚ್ ಡಿ ದೇವೇಗೌಡ ಧುಮುಕಿದ್ದು, ದಕ್ಷಿಣ ಭಾರತದ ಬಿಜೆಪಿ ಹೆಬ್ಬಾಗಿಲಿಗೆ ಶೀಘ್ರ ಬೀಗ ಬೀಳಲಿದೆ ಎಂದು ಹೇಳಿದ್ದಾರೆ.

ಶಿವಮೊಗ್ಗ: ಉಪ ಚುನಾವಣೆ ಕಣ ರಂಗೇರಿದ್ದು, ಇದೀಗ ಚುನಾವಣಾ ಕಣಕ್ಕೆ ಜೆಡಿಎಸ್ ವರಿಷ್ಠ ಎಚ್ ಡಿ ದೇವೇಗೌಡ ಧುಮುಕಿದ್ದು, ದಕ್ಷಿಣ ಭಾರತದ ಬಿಜೆಪಿ ಹೆಬ್ಬಾಗಿಲಿಗೆ ಶೀಘ್ರ ಬೀಗ ಬೀಳಲಿದೆ ಎಂದು ಹೇಳಿದ್ದಾರೆ.
ಉಪ ಚುನಾವಣೆಯ ಮತದಾನಕ್ಕೆ ಕೆಲವೇ ದಿನಗಳು ಬಾಕಿ ಇದ್ದು, ಇಂದು ಪ್ರಮುಖ ಪಕ್ಷಗಳ ನಾಯಕರು ಭರ್ಜರಿ ಪ್ರಚಾರ ನಡೆಸುವ ಮೂಲಕ ಚುನಾವಣಾ ಕಾವು ಏರತೊಡಗಿದೆ. ರಾಜ್ಯದ ಮೂರು ಲೋಕಸಭೆ ಹಾಗೂ ಎರಡು ವಿಧಾನಸಭೆ ಕ್ಷೇತ್ರಗಳಲ್ಲಿ ಕಣಕ್ಕಿಳಿದಿರುವ ಕಾಂಗ್ರೆಸ್ -ಜೆಡಿಎಸ್ ನೇತೃತ್ವದ ದೋಸ್ತಿ ಅಭ್ಯರ್ಥಿಗಳು ಹಾಗೂ ಬಿಜೆಪಿ ಪರ ಪ್ರಮುಖ ನಾಯಕರು ಕ್ಷೇತ್ರದಾದ್ಯಂತ ಬೆಂಬಲಿಗರು ಮತ್ತು ಮುಖಂಡರ ಜತೆ ಬಿರುಸಿನ ಪ್ರಚಾರ ನಡೆಸಿದರು.
ಇನ್ನು ಚುನಾವಣಾ ಪ್ರಚಾರಕ್ಕೆ ಇದೀಗ ಮಾಜಿ ಪ್ರಧಾನಿ ಹಾಗೂ ಜೆಡಿಎಸ್ ವರಿಷ್ಠ ಎಚ್.ಡಿ.ದೇವೇಗೌಡರು ಧುಮುಕಿದ್ದು, ಇಂದು ಶಿವಮೊಗ್ಗದಲ್ಲಿ ತಮ್ಮ ಅಭ್ಯರ್ಥಿ ಮಧು ಬಂಗಾರಪ್ಪ ಅವರ ಪರವಾಗಿ ದೇವೇಗೌಡರು ಭರ್ಜರಿ ಪ್ರಚಾರ ಮಾಡಿದರು. ಇಂದು ಜಿಲ್ಲೆಯ ವಿವಿಧ ಭಾಗಗಳಲ್ಲಿ ಮತಯಾಚನೆ ಮಾಡಿ ಮಾತನಾಡಿದ ಎಚ್ ಡಿ ದೇವೇಗೌಡ ಅವರು, ದಕ್ಷಿಣ ಭಾರತದ ಬಿಜೆಪಿ ಹೆಬ್ಬಾಗಿಲಿಗೆ ಶೀಘ್ರ ಬೀಗ ಬೀಳಲಿದೆ. ಈ ಬಾರಿ ಮತದಾರರು ಮಧು ಬಂಗಾರಪ್ಪ ಅವರನ್ನು ಬೆಂಬಲಿಸಲಿದ್ದಾರೆ ಎಂದು ಹೇಳಿದರು.
ಬಳಿಕ ದೇವೇಗೌಡ ಅವರು ಶಿವಮೊಗ್ಗ ಜಿಲ್ಲೆಯ ತೀರ್ಥಹಳ್ಳಿ, ಶಿವಮೊಗ್ಗ ನಗರ, ಸಾಗರ ಸೇರಿದಂತೆ ಮತ್ತಿತರ ಕಡೆ ಜೆಡಿಎಸ್ ಅಭ್ಯರ್ಥಿಯನ್ನು ಹೆಚ್ಚಿನ ಮತಗಳ ಅಂತರದಿಂದ ಗೆಲ್ಲಿಸಿ ಲೋಕಸಭೆಗೆ ಆಯ್ಕೆ ಮಾಡಬೇಕೆಂದು ಮತಬಾಂಧವರಿಗೆ ಮನವಿ ಮಾಡಿದರು. ಈ ವೇಳೆ ಜಿಲ್ಲಾ ಜೆಡಿಎಸ್ ಮುಖಂಡರಾದ ಮಂಜುನಾಥ್‍ಗೌಡ, ಅಪ್ಪಾಜಿಗೌಡ, ಶ್ರೀಕಾಂತ್, ಮಧುಬಂಗಾರಪ್ಪ, ಮಾಜಿ ಸಚಿವರಾದ ಕಾಗೋಡು ತಿಮ್ಮಪ್ಪ, ಕಿಮ್ಮನೆ ರತ್ನಾಕರ ಸೇರಿದಂತೆ ಮತ್ತಿತರರು ಸಾಥ್ ನೀಡಿದರು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

'ಮತದಾನದ ಹಕ್ಕನ್ನೇ ಕಸಿದರೆ ಯಾವ ಪಕ್ಷವೂ ಸುರಕ್ಷಿತವಾಗಿರಲ್ಲ': SIR ವಿರುದ್ಧ ದೇಶಾದ್ಯಂತ ಹೋರಾಟಕ್ಕೆ CJP ಕರೆ

ಸ್ಟಿಂಗ್‌ ಆಪರೇಷನ್ ಆರೋಪ: ಶಾಂಗ್ರೀಲಾ ಹೋಟೆಲ್‌ನಲ್ಲಿ ಯಾರ ಜೊತೆ ಕುಳಿತಿದ್ರಿ; ಸಿಎಂ ಶಿವಕುಮಾರ್ ವಿರುದ್ಧ HDK ಹೊಸ ಬಾಂಬ್

ಒಂದು ಕ್ಷಣದ ನಿರ್ಲಕ್ಷ್ಯ, ವಿಚಿತ್ರ ರನೌಟ್‌ಗೆ ತಿಲಕ್ ವರ್ಮಾ ಬಲಿ; ಗಂಭೀರ್ ಫುಲ್ ಗರಂ! ಆಗಿದ್ದೇನು? Video

3rd T20I: ಆಲೌಟ್ ನಲ್ಲೂ ವಿಚಿತ್ರ ದಾಖಲೆ ಬರೆದ ಟೀಂ ಇಂಡಿಯಾ!

"ಜಗತ್ತಿಗೆ ಅಗತ್ಯವಿರುವ ಪರಿಹಾರಗಳು ನಿಮ್ಮಲ್ಲಿವೆ": ಚೆನ್ನೈನಲ್ಲಿ 'Gen Z ಯನ್ನುದ್ದೇಶಿಸಿ ಪ್ರಧಾನಿ ಮೋದಿ ಮಾತು