ಸಾಂದರ್ಭಿಕ ಚಿತ್ರ 
ರಾಜಕೀಯ

ಉಪಚುನಾವಣೆ: ಬಿಜೆಪಿ ಅಪಪ್ರಚಾರ ತಡೆಯಲು ಸೂಕ್ತ ಬಂದೋಬಸ್ತ್- ಸಿದ್ದರಾಮಯ್ಯ

ಶಿವಮೊಗ್ಗದಲ್ಲಿ ಇಂದು ಸುದ್ದಿಗೋಷ್ಠಿಯನ್ನುದ್ದೇಶಿಸಿ ಮಾತನಾಡಿದ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ , ಬಿಜೆಪಿ ಹಾಗೂ ಯಡಿಯೂರಪ್ಪ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದರು.

ಶಿವಮೊಗ್ಗ :ನವೆಂಬರ್ 3 ರಂದು ನಡೆಯಲಿರುವ ಶಿವಮೊಗ್ಗ, ಬಳ್ಳಾರಿ ಹಾಗೂ ಮಂಡ್ಯ ಲೋಕಸಭಾ ಹಾಗೂ ಜಮಖಂಡಿ , ರಾಮನಗರ ವಿಧಾನಸಭಾ ಉಪಚುನಾವಣೆ ಪ್ರಚಾರದ ಅಖಾಡ ದಿನದಿಂದ ದಿನಕ್ಕೆ ರಂಗುಪಡೆದುಕೊಳ್ಳುತ್ತಿದೆ.
ಶಿವಮೊಗ್ಗದಲ್ಲಿ ಜೆಡಿಎಸ್- ಕಾಂಗ್ರೆಸ್ ಅಭ್ಯರ್ಥಿ ಪರ ಬಿರುಸಿನ ಮತಯಾಚಿಸುತ್ತಿರುವ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪಚುನಾವಣೆಯಲ್ಲಿ ಬಿಜೆಪಿ ಪಕ್ಷದವರ ಅಪಪ್ರಚಾರ ತಜೆಯಲು ಸೂಕ್ತ ಬಂದೋಬಸ್ತ್ ಮಾಡಲಾಗಿದೆ ಎಂದು ತಿಳಿಸಿದರು.
ಶಿವಮೊಗ್ಗದಲ್ಲಿ ಇಂದು ಸುದ್ದಿಗೋಷ್ಠಿಯನ್ನುದ್ದೇಶಿಸಿ ಮಾತನಾಡಿದ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ , ಬಿಜೆಪಿ ಹಾಗೂ ಯಡಿಯೂರಪ್ಪ ವಿರುದ್ಧ ತೀವ್ರ ವಾಗ್ದಾಳಿ  ನಡೆಸಿದರು.
ಕಳೆದ ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿ ಪಕ್ಷದ ಅಪ್ರಚಾರದಿಂದ  ಕಾಂಗ್ರೆಸ್ ಸೋಲಬೇಕಾಯಿತು. ಕಾಂಗ್ರೆಸ್  ಪಕ್ಷಕ್ಕೆ ಸಾಪ್ಟ್, ಹಾರ್ಡ್ ಹಿಂದೂತ್ವ ಎಂಬುದು ಇಲ್ಲ, ಕರಾವಳಿ ಹಿಂದುತ್ವದ ಲ್ಯಾಬೋರೇಟರಿ ಇದ್ದ ಹಾಗೆ. ಹೀಗಿದ್ದರೂ 2013ರಲ್ಲಿ ಹೆಚ್ಚಿನ ಕ್ಷೇತ್ರಗಳಲ್ಲಿ ಗೆಲುವು ಸಾಧಿಸಿದ್ದೇವು. ಉಪಚುನಾವಣೆಯಲ್ಲಿ ಬಿಜೆಪಿಯವರ ಅಪಪ್ರಚಾರ ತಡೆಯಲು ಸೂಕ್ತ ಬಂದೋಬಸ್ತ್ ಮಾಡಲಾಗಿದೆ ಎಂದು ಸಿದ್ದರಾಮಯ್ಯ ತಿಳಿಸಿದರು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ಕಾಗ್ನಿಜಂಟ್, ಇನ್ಫೋಸಿಸ್, ಟಿಸಿಎಸ್, ವಿಪ್ರೋ ಎಚ್‌ಸಿಎಲ್ ಗೆ ಅಮೆರಿಕ ಶಾಕ್: ಗ್ರೀನ್ ಕಾರ್ಡ್ ಕಾರ್ಯಕ್ರಮದಿಂದ ಅಮಾನತು!

ರಿಯಾದ್ ವಿಮಾನ ನಿಲ್ದಾಣದ ಮೇಲೆ ದಾಳಿ: ರಿಯಾದ್ ಗೆ ತೆರಳಬೇಕಿದ್ದ ಭಾರತೀಯ ವಿಮಾನಗಳು ರದ್ದು

ರಾಜ್‌ಘಟ್‌ನಲ್ಲಿ 'ಇಂಡಿಯಾ' ನಾಯಕರಿಂದ ಧರಣಿ; ಜ್ಞಾನೇಶ್ ಕುಮಾರ್ ರಾಜೀನಾಮೆ ನೀಡುವವರೆಗೂ 'ವೋಟ್ ಚೋರಿ' ಹೋರಾಟ ಮುಂದುವರಿಸಲು ಪ್ರತಿಜ್ಞೆ!

ಅಂಬಾನಿ ಭಾರತದ ನಿಜವಾದ ಬಾಸ್?: ಭಾರತದಲ್ಲಿ ಸ್ಟಾರ್ ಲಿಂಕ್ ಸೇವೆ ಆರಂಭ ವಿಳಂಬಕ್ಕೆ ಎಲಾನ್ ಮಸ್ಕ್ ಹತಾಶೆ!

SIR ಕಾನೂನುಬದ್ಧ: ಪ್ರತಿಪಕ್ಷಗಳ ಪ್ರತಿಭಟನೆ ನಡುವೆ CEC ಜ್ಞಾನೇಶ್ ಬೆಂಬಲಕ್ಕೆ ನಿಂತ 42 ನಿವೃತ್ತ ನ್ಯಾಯಾಧೀಶರು!