ಸಿದ್ದರಾಮಯ್ಯ 
ರಾಜಕೀಯ

ಶಿಕಾರಿಪುರದಲ್ಲಿ ಕುರುಬ ಮತಗಳ ಮೇಲೆ ಸಿದ್ದರಾಮಯ್ಯ ಕಣ್ಣು, ಬಂಜಾರ ಸಮುದಾಯದ ಬೆಂಬಲ ಬಯಸುತ್ತಿರುವ ಬಿಎಸ್ ವೈ

ಶಿವಮೊಗ್ಗ ಲೋಕಸಭಾ ಉಪಚುನಾವಣೆ ಹಿನ್ನೆಲೆಯಲ್ಲಿ ಶಿಕಾರಿಪುರದಲ್ಲಿ ಕಾಂಗ್ರೆಸ್ ಹಾಗೂ ಬಿಜೆಪಿ ನಾಯಕರು ತಮ್ಮ ಪಕ್ಷದ ಅಭ್ಯರ್ಥಿಗಳ ಪರವಾಗಿ ಬಿರುಸಿನ ಮತ ಯಾಚಿಸುತ್ತಿದ್ದಾರೆ.

ಶಿಕಾರಿಪುರ: ಶಿವಮೊಗ್ಗ ಲೋಕಸಭಾ ಉಪಚುನಾವಣೆ ಹಿನ್ನೆಲೆಯಲ್ಲಿ  ಶಿಕಾರಿಪುರದಲ್ಲಿ ಕಾಂಗ್ರೆಸ್ ಹಾಗೂ ಬಿಜೆಪಿ ನಾಯಕರು ತಮ್ಮ ಪಕ್ಷದ ಅಭ್ಯರ್ಥಿಗಳ ಪರವಾಗಿ ಬಿರುಸಿನ ಮತ ಯಾಚಿಸುತ್ತಿದ್ದಾರೆ.

ಶಿಕಾರಿಪುರ ವಿಧಾನಸಭಾ ಕ್ಷೇತ್ರದಲ್ಲಿ ಲಿಂಗಾಯಿತ ಸಮುದಾಯದ ನಂತರ ಬಂಜಾರ ಸಮುದಾಯ ಅತಿ ಹೆಚ್ಚಿನ ಸಂಖ್ಯೆಯಲ್ಲಿದ್ದು, ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್. ಯಡಿಯೂರಪ್ಪ , ಆ ಮತಗಳ ಬೆಂಬಲ ಪಡೆಯಲು ಯತ್ನಿಸುತ್ತಿದ್ದರೆ,  ಮಾಜಿ  ಮುಖ್ಯಮಂತ್ರಿ ಸಿದ್ದರಾಮಯ್ಯ ಕುರುಬ ಸಮುದಾಯಗಳ ಮೇಲೆ ಕಣ್ಣಿಟ್ಟಿದ್ದಾರೆ.

ಮಂಗಳ ಭವನದಲ್ಲಿ ಆಯೋಜಿಸಿದ್ದ ಲಂಬಾಣಿ ಮತ್ತು ಬಂಜಾರ ಸಮುದಾಯದ  ಬಿಜೆಪಿ ಕಾರ್ಯಕರ್ತರ ಸಭೆಯಲ್ಲಿ ಮಾತನಾಡಿದ ಯಡಿಯೂರಪ್ಪ,  ಮೈತ್ರಿ ಸರ್ಕಾರದಲ್ಲಿ ಬಂಜಾರ ಸಮುದಾಯದ ಯಾವುದೇ ಶಾಸಕರನ್ನು ಸಚಿವರನ್ನಾಗಿ ಮಾಡಿಲ್ಲ ಎಂದು ಆರೋಪಿಸಿದರು.

ಈಡಿಗ, ಒಕ್ಕಲಿಗ, ಮತ್ತು ಮುಸ್ಲಿಂ ಮತಗಳ ನೆರವಿನಿಂದ ಚುನಾವಣೆಯಲ್ಲಿ ಗೆಲುವು ಸಾಧಿಸಿದ್ದರೂ  ಜೆಡಿಎಸ್ ಮತ್ತು ಕಾಂಗ್ರೆಸ್ ಪಕ್ಷದ ಶಾಸಕರು ಶೋಷಣೆ ಅನುಭವಿಸುತ್ತಿದ್ದಾರೆ. ಆದರೆ , ಬಿಜೆಪಿ ಹಾಗೇ ಇಲ್ಲ, ಎಲ್ಲರನ್ನೂ ಸಮಾನವಾಗಿ ಕಾಣಲಾಗುತ್ತದೆ ಎಂದು ಬಿಜೆಪಿ ಹಿರಿಯ ನಾಯಕ ಕೆ. ಎಸ್. ಈಶ್ವರಪ್ಪ ಹೇಳಿದರು.

ಈ ಮಧ್ಯೆ ಕನಕ ಪೀಠ  ಸ್ಥಾಪನೆ ವಿಚಾರದಲ್ಲಿ ಆಸಕ್ತಿ ತೋರದ ಈಶ್ವರಪ್ಪ ವಿರುದ್ಧ ಸಿದ್ದರಾಮಯ್ಯ ನೇತೃತ್ವದ  ಕಾಂಗ್ರೆಸ್ - ಜೆಡಿಎಸ್ ನಾಯಕರ ತಂಡ ವಾಗ್ದಾಳಿ ನಡೆಸಿತು. ಈ ಸಂಬಂಧ ನಡೆದ ಸಭೆಯಲ್ಲಿ ಈಶ್ವರಪ್ಪ  ಒಂದು ಬಾರಿಯೂ ಪಾಲ್ಗೊಂಡಿಲ್ಲ. ಹಿಂದುಳಿದ ವರ್ಗದವರ ಅಭಿವೃದ್ದಿಗಾಗಿ ಯಡಿಯೂರಪ್ಪ ಏನೂ ಮಾಡಿಲ್ಲ ಎಂದು ಸಿದ್ದರಾಮಯ್ಯ ಆರೋಪಿಸಿದರು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Super Emergency: ತಾರಕಕ್ಕೇರಿದ ದೆಹಲಿ ಪ್ರತಿಭಟನೆ, ಬರೊಬ್ಬರಿ 3 ಸಾವಿರ ಮಂದಿ ವಶಕ್ಕೆ, ವಿಪಕ್ಷಗಳ ಆಕ್ರೋಶ!

'vote chori' ಹೇಗಿರತ್ತೆ ನಮ್ಗೆ ಗೊತ್ತು, ಸಿನಿಮಾದಲ್ಲಿ ತೋರಿಸಿದ್ದ ರಿಗ್ಗಿಂಗ್ ವಾತಾವರಣ ನಿಜವಾಗಿಯೂ ನೋಡಿದ್ದೇವೆ: SIR ಗೆ 124 ಮಾಜಿ ಅಧಿಕಾರಿಗಳು, ರಾಜತಾಂತ್ರಿಕರಿಂದ ಬೆಂಬಲ

ಹೃದಯವಿದ್ರಾವಕ: 'ಚಿಕಿತ್ಸೆಗೆ ಹಣವಿಲ್ಲ'.. 6 ವರ್ಷದ ಮಗಳನ್ನೇ ಕೆರೆಗೆ ಎಸೆದ ತಾಯಿ; ಆಟೋ ಚಾಲಕನಿಂದ ರಕ್ಷಣೆ

'ನಿಮಗೆ ನಾಚಿಕೆಯಾಗಬೇಕು': CJP ನಾಯಕರ ವಿರುದ್ಧ ವಿಮಾನದಲ್ಲಿ ಪ್ರಯಾಣಿಕರ ಆಕ್ರೋಶ, Video!

ಅಭಿಜೀತ್ ದೀಪ್ಕೆ ಸಂಪರ್ಕಿಸಲು ಸಾಧ್ಯವಾಗುತ್ತಿಲ್ಲ; ಅಜ್ಜಿ ಸಾವಿನ ಸುದ್ದಿ ತಿಳಿಸುವುದು ಹೇಗೆ? ಪೊಲೀಸ್ ಕ್ರಮಕ್ಕೆ ಪೋಷಕರ ಆಕ್ರೋಶ