ಶಿವಮೊಗ್ಗ: ಶಿವಮೊಗ್ಗದಲ್ಲಿ ಲೋಕಸಭಾ ಉಪಚುನಾವಣೆಗೂ ಮುನ್ನ ಬಿಜೆಪಿ ಆಘಾತ ಅನುಭವಿಸಿದ್ದು, ಜಿಲ್ಲಾ ಪಂಚಾಯತ್ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಭರ್ಜರಿ ಗೆಲುವು ಸಾಧಿಸಿದೆ.
ಸಾಗರ ತಾಲೂಕಿನ ಆವಿನಹಳ್ಳಿ ಜಿಲ್ಲಾ ಪಂಚಾಯತ್ ಕ್ಷೇತ್ರಕ್ಕೆ ನಡೆದ ಉಪ ಚುನಾವಣೆಯ ಫಲಿತಾಂಶ ಇಂದು ಪ್ರಕಟವಾಗಿದ್ದು, ಕಾಂಗ್ರೆಸ್ ಅಭ್ಯರ್ಥಿ ಭೀಮನೇರಿ ಶಿವಪ್ಪ ಅವರು ಶಾಸಕ ಹರತಾಳು ಹಾಲಪ್ಪ ಅವರ ಸಹೋದರನ ಪುತ್ರ ಬಿ.ಟಿ.ರವಿ ಅವರ ವಿರುದ್ಧ 530 ಮತಗಳ ಅಂತರದಿಂದ ಜಯ ಗಳಿಸಿದ್ದಾರೆ.
ಮಾಜಿ ಸಚಿವ ಕಾಗೋಡು ತಿಮ್ಮಪ್ಪ ಅವರ ಅಣ್ಣನ, ಕಾಂಗ್ರೆಸ್ ಸದಸ್ಯ ಕಾಗೋಡು ಅಣ್ಣಾಜಿ ಅವರ ನಿಧನದಿಂದಾಗಿ ಈ ಕ್ಷೇತ್ರಕ್ಕೆ ಉಪ ಚುನಾವಣೆ ನಡೆದಿತ್ತು.
ಬಿಜೆಪಿಯ ಭದ್ರಕೋಟೆ ಎನ್ನಲಾದ ಶಿವಮೊಗ್ಗದಲ್ಲಿ ನವೆಂಬರ್ 3 ರಂದು ಲೋಕಸಭಾ ಕ್ಷೇತ್ರಕ್ಕೆ ಉಪ ಚುನಾವಣೆ ನಡೆಯಲಿದ್ದು, ಬಿಜೆಪಿ ರಾಜ್ಯಾಧ್ಯಕ್ಷ ಬಿಎಸ್ ಯಡಿಯೂರಪ್ಪ ಅವರ ಪುತ್ರ, ಮಾಜಿ ಸಂಸದ ಬಿ.ವೈ .ರಾಘವೇಂದ್ರ ಮತ್ತು ಕಾಂಗ್ರೆಸ್ ಬೆಂಬಲಿತ ಜೆಡಿಎಸ್ ಅಭ್ಯರ್ಥಿ ಮಧು ಬಂಗಾರಪ್ಪ ಅವರ ನಡುವೆ ತೀವ್ರ ಸ್ಪರ್ಧೆ ಏರ್ಪಡುವ ಸಾಧ್ಯತೆಗಳಿವೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics