ಬಸವನಗೌಡ ಪಾಟೀಲ್ ಯತ್ನಾಳ್ 
ರಾಜಕೀಯ

ರಾಹುಲ್ ಗಾಂಧಿ ಅಯೋಗ್ಯ, ನಕಲಿ ಬ್ರಾಹ್ಮಣ: ಬಿಜೆಪಿ ಶಾಸಕ ಯತ್ನಾಳ್

ಕಾಂಗ್ರೆಸ್ ಅಧ್ಯಕ್ಷ ರಾಹುಲ್ ಗಾಂಧಿ ಒಬ್ಬ ಅಯೋಗ್ಯ, ನಕಲಿ ಬ್ರಾಹ್ಮಣ ಎಂದು ಬಿಜೆಪಿ ಶಾಸಕ ಬಸವನಗೌಡ...

ವಿಜಯಪುರ: ಕಾಂಗ್ರೆಸ್ ಅಧ್ಯಕ್ಷ ರಾಹುಲ್ ಗಾಂಧಿ ಒಬ್ಬ ಅಯೋಗ್ಯ, ನಕಲಿ ಬ್ರಾಹ್ಮಣ ಎಂದು ಬಿಜೆಪಿ ಶಾಸಕ ಬಸವನಗೌಡ ಪಾಟೀಲ್ ಯತ್ನಾಳ್ ಅವರು ಶನಿವಾರ ವಿವಾದಾತ್ಮಕ ಹೇಳಿಕೆ ನೀಡಿದ್ದಾರೆ.
ಇಂದು ವಿಜಯಪುರ ಜಿಲ್ಲೆಯ ಸಿಂಧಗಿಯಲ್ಲಿ ವಿಧಾನ ಪರಿಷತ್​ ಉಪ ಚುನಾವಣಾ ಪ್ರಚಾರದಲ್ಲಿ ಭಾಗವಹಿಸಿ ಮಾತನಾಡಿದ ಯತ್ನಾಳ್, ರಾಹುಲ್ ಗಾಂಧಿ ಕರೆಯದಿದ್ದರೂ ವಿದೇಶಗಳಿಗೆ ಭೇಟಿ ನೀಡುತ್ತಿದ್ದು, ಚೀನಾ ಹಾಗೂ ಪಾಕಿಸ್ತಾನ ಮಧ್ಯವರ್ತಿಯಾಗಿದ್ದಾರೆ ಎಂದು ಆರೋಪಿಸಿದರು.
ರಾಹುಲ್ ಗಾಂಧಿ ತಾವು ಜನಿವಾರ ಬ್ರಾಹ್ಮಣರು ಅಂತಾ ಹೇಳಿಕೊಳ್ಳುತ್ತಾರೆ. ಆದರೆ ಈಗ ಅವರಿಗೆ ದೇವರ ನೆನಪಾಗಿದೆ. ಇಂತಹ ಅಯೋಗ್ಯ ಈ ದೇಶದ ಪ್ರಧಾನಿಯಾದರೆ ಅದೊಂದು ದುರಂತ ಎಂದರು.
ಭಾರತದ ಸೈನಿಕರನ್ನು ಪಾಕಿಸ್ತಾನಿಯರು ಹತ್ಯೆ ಮಾಡುತ್ತಿದ್ದಾರೆ. ಇದನ್ನು ಮರೆತು ಕಾಂಗ್ರೆಸ್ ಮುಖಂಡ ನವಜೋತ್ ಸಿಂಗ್ ಸಿಧು ಪಾಕಿಸ್ತಾನದ ಪ್ರಧಾನಿ ಇಮ್ರಾನ್ ಖಾನ್ ಪ್ರಮಾಣ ವಚನ ಕಾರ್ಯಕ್ರಮಕ್ಕೆ ಹೋಗಿ ಬಂದರು. ಅಷ್ಟೇ ಅಲ್ಲದೆ ಕಾಂಗ್ರೆಸ್ ನವರು ಕಾಶ್ಮೀರವನ್ನು ಪಾಕಿಸ್ತಾನಕ್ಕೆ ಕೊಡಲು ಮುಂದಾಗುತ್ತಿದ್ದಾರೆ ಎಂದು ಯತ್ನಾಳ್ ದೂರಿದರು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

Goa nightclub fire: ರೆಸ್ಟೋರೆಂಟ್‌ ಮಾಲೀಕ, ಕಾರ್ಯಕ್ರಮ ಆಯೋಜಕರ ವಿರುದ್ಧ FIR, ಸರಪಂಚ್ ಬಂಧನ!

40 ಸೆಕೆಂಡ್ ನಲ್ಲಿ ಎಲ್ಲವೂ ಭಸ್ಮ; 25 ಜನರ ಸಾವಿಗೆ ಕಾರಣವಾದ ಗೋವಾ ನೈಟ್‌ಕ್ಲಬ್ ಅಗ್ನಿ ಅವಘಡದ ಭಯಾನಕ ಕ್ಷಣ, Video

ದಂಪತಿಗಳು ಒಂದು ಅಥವಾ ಎರಡು ಮಕ್ಕಳ ಮಾತ್ರ ಮಾಡಿಕೊಳ್ಳಬೇಕು: ಸಿಎಂ ಸಿದ್ದರಾಮಯ್ಯ

ಮೂರು ವರ್ಷಗಳಿಂದ 'ಮನೆಯ ವಿದ್ಯುತ್ ಬಿಲ್' ಕಟ್ಟದ ತೇಜ್ ಪ್ರತಾಪ್! ಬಾಕಿ ಇರುವ ಮೊತ್ತ ಎಷ್ಟು ಗೊತ್ತಾ?

ಫೀಲ್ಡ್ ಮಾರ್ಷಲ್ ಅಸಿಮ್ ಮುನೀರ್ ಉಲ್ಲೇಖಿಸಿ ಜೈಶಂಕರ್ ಹೇಳಿಕೆ: ಉರಿದುಬಿದ್ದ ಪಾಕಿಸ್ತಾನ, ಹೇಳಿದ್ದೇನು?

SCROLL FOR NEXT