ರಾಜ್ಯ ಕಾಂಗ್ರೆಸ್ ಉಸ್ತುವಾರಿ ಕೆ.ವೇಣುಗೋಪಾಲ್ 
ರಾಜಕೀಯ

ಕೇಂದ್ರದ ನೀತಿಗಳ ವಿರುದ್ಧ ರಾಜ್ಯದ ಪ್ರತಿ ಜಿಲ್ಲೆಯಲ್ಲೂ ಆಂದೋಲನ: ಕಾಂಗ್ರೆಸ್

ವಿವಾದ ರಫೇಲ್ ಯುದ್ಧ ವಿಮಾನದ ಹಗರಣ ಸೇರಿದಂತೆ ಕೇಂದ್ರ ಸರ್ಕಾರದ ವೈಫಲ್ಯಗಳ ಕುರಿತು ಸೆ.6ರಿಂದ 15ರವರೆಗೆ ರಾಜ್ಯದ ಪ್ರತಿ ಜಿಲ್ಲೆಯಲ್ಲಿ ಜಾಗೃತಿ ಮತ್ತು ಪ್ರತಿಭಟನೆ ನಡೆಸಲು ಕಾಂಗ್ರೆಸ್ ಭಾನುವಾರ ನಿರಧರಿಸಿದೆ...

ಬೆಂಗಳೂರು: ವಿವಾದ ರಫೇಲ್ ಯುದ್ಧ ವಿಮಾನದ ಹಗರಣ ಸೇರಿದಂತೆ ಕೇಂದ್ರ ಸರ್ಕಾರದ ವೈಫಲ್ಯಗಳ ಕುರಿತು ಸೆ.6ರಿಂದ 15ರವರೆಗೆ ರಾಜ್ಯದ ಪ್ರತಿ ಜಿಲ್ಲೆಯಲ್ಲಿ ಜಾಗೃತಿ ಮತ್ತು ಪ್ರತಿಭಟನೆ ನಡೆಸಲು ಕಾಂಗ್ರೆಸ್ ಭಾನುವಾರ ನಿರಧರಿಸಿದೆ. 
ಕೆಪಿಸಿಸಿ ಕಚೇರಿಯಲ್ಲಿ ಜಂಟಿ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ರಾಜ್ಯ ಕಾಂಗ್ರೆಸ್ ಉಸ್ತುವಾರಿ ಕೆ.ವೇಣುಗೋಪಾಲ್ ಅವರು, ರಫೇಲ್ ಹಗರಣದ ಬಗ್ಗೆ ಕಳೆದ ವಿಧಾನಸಭೆ ಚುನಾವಣೆಯಲ್ಲಿ ಕಾಂಗ್ರೆಸ್ ಅಧ್ಯಕ್ಷ ರಾಹುಲ್ ಗಾಂಧಿ ಎತ್ತಿದ್ದ ಪ್ರಶ್ನೆಗೆ ಪ್ರಧಾನಿ ಮೋದಿಯವರು ಉತ್ತರ ಕೊಡಲಿಲ್ಲ. ರಫೇಲ್ ಬಗ್ಗೆ ಪ್ರಶ್ನಿಸಿದರೆ ಬೋಫೋರ್ಸ್ ವಿಚಾರದಲ್ಲಿ ಸುಳ್ಳು ಆರೋಪ ಮಾಡುತ್ತಿದ್ದಾರೆ. ರಫೇಲ್ ಪ್ರಕರಣ ದೇಶದ ಬಹುದೊಡ್ಡ ಹಗರಣವಾಗಿದ್ದು, ಈ ಕುರಿತು ಮೋದಿ ಸ್ಪಷ್ಟೀಕರಣ ನೀಡುವಂತೆ ಒತ್ತಾಯಿಸಿ ದೇಶದಾದ್ಯಂತ ಪ್ರತಿಭಟನೆ ನಡೆಸುತ್ತೇವೆಂದು ಹೇಳಿದರು. 
ಯುಪಿಎ ಒಪ್ಪಂದದಂತೆ ಹೆಚ್ಎಎಲ್'ಗೆ ಯುದ್ಧ ವಿಮಾನ ತಂತ್ರಜ್ಞಾನ ಸಿಗಬೇಕಿತ್ತು. ಜೊತೆಗೆ ಬೆಂಗಳೂರಿನಲ್ಲಿಯೇ ಯುದ್ಧ ವಿಮಾನ ಉತ್ಪಾದನೆಯಾಗಬೇಕಿತ್ತು. ಅದಕ್ಕಾಗಿ ಶೇ.50 ಹಣ ಹೂಡಿಕೆ ಮಾಡಿದ್ದರೆ, ಲಕ್ಷಾಂತರ ಮಂದಿ ಯುವಕರಿಗೆ ಉದ್ಯೋಗ ಸಿಗುತ್ತಿತ್ತು. ಆದರೆ ಅಸಲಿ ಬೆಲೆಗಿಂತ ಮೂರು ಪಟ್ಟು ಅಧಿಕ ಬೆಲೆಗೆ ರಫೇಲ್ ಏರ್ ಕ್ರಾಫ್ಟ್ ಖರೀದಿ ಮಾಡಲಾಗುತ್ತಿದ್ದು, ಹೆಚ್ಎಎಲ್'ಗೆ ಸಿಗಬೇಕಿದ್ದ ತಂತ್ರಜ್ಞಾನವೂ ಕೈತಪ್ಪಿದೆ. ಈ ಕುರಿತು ಜಂಟಿ ಸದನ ಸಮತಿಯಿಂದ ತನಿಕೆ ನಡೆಸಬೇಕೆಂದು ಒತ್ತಾಯಿಸುತ್ತಿದ್ದೇವೆ. ಆದರೆ, ಕೇಂದ್ರ ಸರ್ಕಾರ ತನಿಖೆಗೆ ಮುಂದಾಗುತ್ತಿಲ್ಲ. ಆದ್ದರಿಂದ ಪ್ರಕರಣವನ್ನು ಜನರ ಬಳಿಗೆ ತೆಗೆದುಕೊಂಡು ಹೋಗಲು ತೀರ್ಮೀನಿಸಿದ್ದು, ರಾಷ್ಟ್ರ ಮತ್ತು ರಾಜ್ಯ ಮಟ್ಟದಲ್ಲಿ ಹೋರಾಟ ಮಾಡುತ್ತೇವೆಂದು ತಿಳಿಸಿದ್ದಾರೆ. 

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ಕಾಗ್ನಿಜಂಟ್, ಇನ್ಫೋಸಿಸ್, ಟಿಸಿಎಸ್, ವಿಪ್ರೋ ಎಚ್‌ಸಿಎಲ್ ಗೆ ಅಮೆರಿಕ ಶಾಕ್: ಗ್ರೀನ್ ಕಾರ್ಡ್ ಕಾರ್ಯಕ್ರಮದಿಂದ ಅಮಾನತು!

ರಿಯಾದ್ ವಿಮಾನ ನಿಲ್ದಾಣದ ಮೇಲೆ ದಾಳಿ: ರಿಯಾದ್ ಗೆ ತೆರಳಬೇಕಿದ್ದ ಭಾರತೀಯ ವಿಮಾನಗಳು ರದ್ದು

ರಾಜ್‌ಘಟ್‌ನಲ್ಲಿ 'ಇಂಡಿಯಾ' ನಾಯಕರಿಂದ ಧರಣಿ; ಜ್ಞಾನೇಶ್ ಕುಮಾರ್ ರಾಜೀನಾಮೆ ನೀಡುವವರೆಗೂ 'ವೋಟ್ ಚೋರಿ' ಹೋರಾಟ ಮುಂದುವರಿಸಲು ಪ್ರತಿಜ್ಞೆ!

ಅಂಬಾನಿ ಭಾರತದ ನಿಜವಾದ ಬಾಸ್?: ಭಾರತದಲ್ಲಿ ಸ್ಟಾರ್ ಲಿಂಕ್ ಸೇವೆ ಆರಂಭ ವಿಳಂಬಕ್ಕೆ ಎಲಾನ್ ಮಸ್ಕ್ ಹತಾಶೆ!

SIR ಕಾನೂನುಬದ್ಧ: ಪ್ರತಿಪಕ್ಷಗಳ ಪ್ರತಿಭಟನೆ ನಡುವೆ CEC ಜ್ಞಾನೇಶ್ ಬೆಂಬಲಕ್ಕೆ ನಿಂತ 42 ನಿವೃತ್ತ ನ್ಯಾಯಾಧೀಶರು!