ಮಂಗಳೂರು: ನಡೆದ 105 ಸ್ಥಳೀಯ ಸಂಸ್ಥೆಗಳಿಗೆ ಆಗಸ್ಟ್ 31 ರಂದು ಮತದಾನ ನಡೆದಿದ್ದು, ಇಂದು ಫಲಿತಾಂಶ ಪ್ರಕಟವಾಗಿದೆ. ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಗಳ ಫಲಿತಾಂಶ ಶೀಘ್ರವೇ ಪ್ರಕಟಗೊಂಡಿದ್ದು, ಪುತ್ತೂರು ಮತ್ತು ಕುಂದಾಪುರ ಮುನಿಸಿಪಾಲಿಟಿ ಕೌನ್ಸಿಲ್ ನಲ್ಲಿ ಬಿಜೆಪಿ ಬಹುಮತ ಗಳಿಸಿದೆ, ಉಲ್ಲಾಳ ಮತ್ತು ಬಂಟ್ವಾಳಗಳಲ್ಲಿ ಅತಂತ್ರ ಸ್ಥಿತಿ ನಿರ್ಮಾಣವಾಗಿದೆ.
ಉಡುಪಿ ನಗರಸಭೆಯಲ್ಲಿ ಬಿಜೆಪಿ ಪಾರಮ್ಯ ಗೆಲುವು ಸಾಧಿಸಿದ್ದು, ಕಾಂಗ್ರೆಸ್ ನಿಂದ ಅಧಿಕಾರವನ್ನು ಕಸಿದುಕೊಂಡಿದೆ. ಮಾಜಿ ಸಚಿವ ಪ್ರಮೋದ್ ಮಧ್ವರಾಜ್ ಗೆ ಭಾರೀ ಮುಖಭಂಗವಾಗಿದ್ದು, ಪ್ರಮೋದ್ ಮಧ್ವರಾಜ್ ವಾರ್ಡ್ ನಲ್ಲೂ ಬಿಜೆಪಿ ಗೆಲುವು ಸಾಧಿಸಿದೆ.
ನಗರಸಭಾ ಮಾಜಿ ಅಧ್ಯಕ್ಷೆ ಮೀನಾಕ್ಷಿ ಬನ್ನಂಜೆಗೆ ಸೋಲಾಗಿದೆ. ಈ ನಗರ ಸಭೆಯಲ್ಲಿ ಬಿಜೆಪಿ 31 ಮತ್ತು ಕಾಂಗ್ರೆಸ್4 ಸ್ಥಾನಗಳನ್ನು ಗಳಿಸಿದೆ.
ಸಾಲಿಗ್ರಾಮ ಪಟ್ಟಣ ಪಂಚಾಯತ್ ನಲ್ಲಿ ಬಿಜೆಪಿ 10, ಕಾಂಗ್ರೆಸ್ 5 ಹಾಗು ಪಕ್ಷೇತರ 1 ಸ್ಥಾನವನ್ನು ಗಳಿಸಿದ್ದು, ಒಂದು ಅಂಚೆ ಮತದಿಂದ ಕಾಂಗ್ರೆಸ್ ಅಭ್ಯರ್ಥಿ ಗೆಲುವು ಸಾಧಿಸಿದ್ದಾರೆ. ಇವರು ಪುನೀತ್ ಪೂಜಾರಿ 4ನೇ ವಾರ್ಡ್ ಅಭ್ಯರ್ಥಿಯಾಗಿದ್ದಾರೆ.
ಕಳೆದ ಮೂರು ದಶಕಗಳಲ್ಲಿ ಇದೇ ಮೊದಲ ಬಾರಿಗೆ ಕಾಂಗ್ರೆಸ್ ಸ್ಛಳೀಯ ಸಂಸ್ಥೆ ಚುನಾವಣೆಯಲ್ಲಿ ಬಹುಮತ ಸಾಬೀತು ಪಡಿಸಲು ವಿಫಲವಾಗಿದೆ. ಸಚಿವ ಯು.ಟಿ ಖಾದರ್ ಅವರಿಗೆ ಇದು ಆಘಾತ ತಂದಿದೆ. ಅವರ ಕೆಲವೊಬ್ಬ ಆಪ್ತರು ಜಯ ಸಾಧಿಸುವಲ್ಲಿ ವಿಫಲರಾಗಿದ್ದಾರೆ.
ಬಂಟ್ವಾಳದ 27 ಸೀಟುಗಳ ಪೈಕಿ ಕಾಂಗ್ರೆಸ್ 12ರಲ್ಲಿ ಗೆಲುವು ಸಾಧಿಸಿದೆ, ಬಿಜೆಪಿ 11 ಮತ್ತು ಎಸ್ ಡಿಪಿಐ 4, ಪುತ್ತೂರು ಸಿಎಂಸಿಯಲ್ಲಿ 31ರಲ್ಲಿ ಬಿಜೆಪಿ 25 ಸ್ಥಾನ ಗಳಿಸಿದೆ, ಕಾಂಗ್ರೆಸ್ ಕೇವಲ 5 ಹಾಗೂ ಎಸ್ ಡಿ ಪಿಐ ಖಾತೆ ತೆರೆಯುವಲ್ಲಿ ಯಶಸ್ವಿಯಾಗಿದೆ,. ಕುಂದಾಪುರದಲ್ಲೂ ಇದೇ ರೀತಿಯ ಫಲಿತಾಂಶ ಬಂದಿದ್ದು, 23 ರಲ್ಲಿ ಬಿಜೆಪಿ 13ರಲ್ಲಿ ಜಯ ಸಾಧಿಸಿದೆ.
Follow KannadaPrabha channel on WhatsApp
Download the KannadaPrabha News app to follow the latest news updates
Subscribe and Receive exclusive content and updates on your favorite topics
Subscribe to KannadaPrabha YouTube Channel and watch Videos