ರಾಜಕೀಯ

ಮೈಸೂರು ಮಹಾನಗರ ಪಾಲಿಕೆ ಮತ್ತೆ ಅತಂತ್ರ, ಕಾಂಗ್ರೆಸ್ - ಜೆಡಿಎಸ್ ಮೈತ್ರಿ ಸಾಧ್ಯತೆ

Lingaraj Badiger
ಮೈಸೂರು: ಮೈಸೂರು ಮಹಾನಗರ ಪಾಲಿಕೆಯ ಚುನಾವಣೆ ಫಲಿತಾಂಶ ಸೋಮವಾರ ಪ್ರಕಟವಾಗಿದ್ದು, ಮತ್ತೆ ಅತಂತ್ರ ಸ್ಥಿತಿ ನಿರ್ಮಾಣವಾಗಿದೆ.
ಮೈಸೂರು ಮಹಾನಗರ ಪಾಲಿಕೆಯ ಒಟ್ಟು 65 ವಾರ್ಡ್ ಗಳ ಪೈಕಿ ಬಿಜೆಪಿ 22 ಸ್ಥಾನ, ಕಾಂಗ್ರೆಸ್ 19, ಜೆಡಿಎಸ್18, 1 ಬಿಎಸ್ಪಿ ಹಾಗೂ ಪಕ್ಷೇತರರು 6 ಸ್ಥಾನಗಳಲ್ಲಿ ಗೆಲುವು ಸಾಧಿಸಿದ್ದಾರೆ. ಬಹುಮತಕ್ಕೆ 33 ಸ್ಥಾನಗಳ ಅಗತ್ಯವಿದೆ.
ಮೈಸೂರು ಮಹಾನಗರ ಪಾಲಿಕೆಯಲ್ಲಿ ಈ ಹಿಂದೆ ಜೆಡಿಎಸ್ ಹಾಗೂ ಬಿಜೆಪಿ ಮೈತ್ರಿಮಾಡಿಕೊಂಡು ಅಧಿಕಾರ ನಡೆಸಿದ್ದವು. ಆದರೆ ಈ ಬಾರಿ ರಾಜ್ಯದಲ್ಲಿ ಜೆಡಿಎಸ್ - ಕಾಂಗ್ರೆಸ್ ಮೈತ್ರಿ ಸರ್ಕಾರವಿರುವುದರಿಂದ ಮೈಸೂರು ಪಾಲಿಕೆಯಲ್ಲೂ ಹೊಂದಾಣಿಕೆ ಮಾಡಿಕೊಂಡು ಅಧಿಕಾರ ಹಿಡಿಯುವ ಸಾಧ್ಯತೆ ಇದೆ.
SCROLL FOR NEXT