ರಾಜಕೀಯ

ಸ್ಥಳೀಯ ಸಂಸ್ಥೆ ಚುನಾವಣೆ: ಲಿಂಗಾಯತ ಪ್ರಾಬಲ್ಯ ಕ್ಷೇತ್ರಗಳಲ್ಲಿ ಕಾಂಗ್ರೆಸ್ ಎದುರು ಮಂಕಾದ ಬಿಜೆಪಿ

Sumana Upadhyaya

ಬೆಳಗಾವಿ: ಇತ್ತೀಚಿನ ವಿಧಾನಸಭೆ ಚುನಾವಣೆಯಲ್ಲಿ ಮುಂಬೈ-ಕರ್ನಾಟಕ ಭಾಗದಲ್ಲಿ ಬಿಜೆಪಿ ಹೆಚ್ಚು ಸ್ಥಾನಗಳನ್ನು ಗೆದ್ದಿದ್ದರೂ ಸಹ ನಗರ ಸ್ಥಳೀಯ ಸಂಸ್ಥೆ ಚುನಾವಣೆಯಲ್ಲಿ ಎಡವಿದೆ ಎನ್ನಬಹುದು, ಅದು ಕಾಂಗ್ರೆಸ್ ನಿಂದ ಕಠಿಣ ಸ್ಪರ್ಧೆಯನ್ನು ಎದುರಿಸಿದೆ.

ಲಿಂಗಾಯತಕ್ಕೆ ಪ್ರತ್ಯೇಕ ಧರ್ಮದ ಸ್ಥಾನಮಾನ ನೀಡಿ ಲಿಂಗಾಯತ  ಪ್ರಾಬಲ್ಯ ಹೆಚ್ಚು ಇರುವ ಕ್ಷೇತ್ರಗಳಲ್ಲಿ ಇತ್ತೀಚಿನ ವಿಧಾನಸಭೆ ಚುನಾವಣೆಯಲ್ಲಿ ಸೋಲು ಕಂಡಿದ್ದ ಕಾಂಗ್ರೆಸ್ ಗೆ ನಿನ್ನೆಯ ಸ್ಥಳೀಯ ಸಂಸ್ಥೆ ಚುನಾವಣೆ ಫಲಿತಾಂಶ ಸ್ವಲ್ಪ ನಿರಾಳತೆಯನ್ನು ನೀಡಿತ್ತು.

ಉತ್ತರ ಕರ್ನಾಟಕದ 6 ಜಿಲ್ಲೆಗಳಾದ ಬೆಳಗಾವಿ, ಧಾರವಾಡ, ಬಾಗಲಕೋಟೆ, ಹಾವೇರಿ, ಗದಗ ಮತ್ತು ವಿಜಯಪುರಗಳಲ್ಲಿ ಬಿಜೆಪಿ 438 ಸ್ಥಾನಗಳನ್ನು ಮತ್ತು ಕಾಂಗ್ರೆಸ್ 413 ಸ್ಥಾನಗಳನ್ನು ಪಡೆದುಕೊಂಡಿವೆ. ಅನೇಕ ಕಡೆಗಳಲ್ಲಿ ಸ್ವತಂತ್ರ ಅಭ್ಯರ್ಥಿಗಳ ಕೈ ಮೇಲಾಗಿವೆ. ಬೆಳಗಾವಿಯಲ್ಲಿ ಪಟ್ಟಣ ಪಂಚಾಯತಿ ಚುನಾವಣೆಯಲ್ಲಿ ಎಲ್ಲಾ ಸ್ಥಾನಗಳನ್ನು ಸ್ವತಂತ್ರ ಅಭ್ಯರ್ಥಿಗಳು ಪಡೆದುಕೊಂಡಿದ್ದಾರೆ. ಗೋಕಾಕ್ ನಲ್ಲಿ ಕೂಡ 31 ಸ್ಥಾನಗಳಲ್ಲಿ 30 ಸ್ಥಾನಗಳನ್ನು ಸ್ವತಂತ್ರ ಅಭ್ಯರ್ಥಿಗಳು ಗಳಿಸಿದ್ದಾರೆ.

ಹಾವೇರಿ ಜಿಲ್ಲೆಯ ಐದು ಸ್ಥಳೀಯ ಸಂಸ್ಥೆಗಳಲ್ಲಿ ನಾಲ್ಕರಲ್ಲಿ ಕಾಂಗ್ರೆಸ್ ಅಧಿಕಾರ ಪಡೆದುಕೊಳ್ಳಲು ಮುಂದಾಗಿದೆ. ಇಲ್ಲಿ ಈ ಹಿಂದೆ ಬಿಜೆಪಿ ರಾಜ್ಯಾಧ್ಯಕ್ಷ ಬಿ ಎಸ್ ಯಡಿಯೂರಪ್ಪ ಪ್ರಭಾವಶಾಲಿಯಾಗಿದ್ದರು. ಗದಗದಲ್ಲಿ ಕೂಡ ಸ್ಥಳೀಯ ಸಂಸ್ಥೆ ಚುನಾವಣೆಯಲ್ಲಿ ಕಾಂಗ್ರೆಸ್ ಭಾರೀ ಸ್ಥಾನ ಗಳಿಸಿದೆ. ಉತ್ತರ ಕನ್ನಡ ಜಿಲ್ಲೆಯಲ್ಲಿ ಮೂರು ಸ್ಥಳೀಯ ಸಂಸ್ಥೆ ಚುನಾವಣೆಯಲ್ಲಿ ಬಿಜೆಪಿ ಮತ್ತು ಕಾಂಗ್ರೆಸ್ ಸಮಬಲ ಸಾಧಿಸಿವೆ. ಬಾಗಲಕೋಟೆ ಜಿಲ್ಲೆಯಲ್ಲಿ ಬಿಜೆಪಿ ಮುನ್ನಡೆ ಕಂಡಿದೆ. ವಿಜಯಪುರ ಜಿಲ್ಲೆಯಲ್ಲಿ ಕಾಂಗ್ರೆಸ್ ಮತ್ತು ಬಿಜೆಪಿ ತಲಾ 8 ಸ್ಥಾನಗಳನ್ನು ಪಡೆದಿವೆ.

ಬಾದಾಮಿಯಲ್ಲಿ ಸಿದ್ದು ಮುನ್ನಡೆ: ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಸ್ವಲ್ಪ ನಿರಾಳರಾಗಿದ್ದಾರೆ. ಏಕೆಂದರೆ ಬಾದಾಮಿ ಪಟ್ಟಣ ಪಂಚಾಯತಿ ಚುನಾವಣೆಯಲ್ಲಿ ಕಾಂಗ್ರೆಸ್ ಗೆದ್ದಿದೆ. ಅಲ್ಲಿ ಅವರ ಪ್ರಭಾವ ಕೆಲಸ ಮಾಡಿದೆ ಎನ್ನಬಹುದು.

SCROLL FOR NEXT