ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್.ಯಡಿಯೂರಪ್ಪ 
ರಾಜಕೀಯ

ಬಿಜೆಪಿ ಕಾರ್ಯಕಾರಣಿ ಸಭೆಗೆ ಗೈರು: ದೆಹಲಿಯಿಂದ ದಿಢೀರ್ ವಾಪಸ್ಸಾದ ಬಿ.ಎಸ್.ಯಡಿಯೂರಪ್ಪ

ರಾಜ್ಯ ರಾಜಕೀಯದಲ್ಲಿ ಕುತೂಹಲಕಾರಿ ಬೆಳವಣಿಗೆಯೊಂದು ಕಂಡು ಬಂದಿದ್ದು, ಬಿಜೆಪಿ ರಾಷ್ಟ್ರೀಯ ಕಾರ್ಯಕಾರಣಿ ಸಭೆಗೆ ಗೈರು ಹಾಜರಾಗಿರುವ ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್.ಯಡಿಯೂರಪ್ಪ ಅವರು ಹಠಾತ್ ಬೆಂಗಳೂರಿಗೆ ವಾಪಸ್ಸಾಗಿದ್ದಾರೆ...

ಬೆಂಗಳೂರು: ರಾಜ್ಯ ರಾಜಕೀಯದಲ್ಲಿ ಕುತೂಹಲಕಾರಿ ಬೆಳವಣಿಗೆಯೊಂದು ಕಂಡು ಬಂದಿದ್ದು, ಬಿಜೆಪಿ ರಾಷ್ಟ್ರೀಯ ಕಾರ್ಯಕಾರಣಿ ಸಭೆಗೆ ಗೈರು ಹಾಜರಾಗಿರುವ ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್.ಯಡಿಯೂರಪ್ಪ ಅವರು ಹಠಾತ್ ಬೆಂಗಳೂರಿಗೆ ವಾಪಸ್ಸಾಗಿದ್ದಾರೆ. 
ರಾಜಧಾನಿ ದೆಹಲಿಯಲ್ಲಿ ಇಂದಿನಿಂದ ಎರಡು ದಿನಗಳ ಕಾಲ ಬಿಜೆಪಿ ರಾಷ್ಟ್ರೀಯ ಕಾರ್ಯಕಾರಣಿ ಸಭೆ ನಡೆಯಲಿದೆ. ಕಾರ್ಯಕಾರಣಿ ಸಭೆ ಹಿನ್ನಲೆಯಲ್ಲಿ ಯಡಿಯೂರಪ್ಪ ಅವರು ರಾಜಧಾನಿ ದೆಹಲಿಗೆ ಭೇಟಿ ನಿನ್ನೆ ಸಂಜೆಯಷ್ಟೇ ತೆರಳಿದ್ದರು. 
ದೆಹಲಿಗೆ ತೆರಳಿದ 12 ತಾಸಿನಲ್ಲಿಯೇ ಯಡಿಯೂರಪ್ಪ ಅವರು ಇದೀಗ ಬೆಂಗಳೂರಿಗೆ ಹಠಾತ್ ವಾಪಸ್ಸಾಗಿರುವುದು ಹಲವು ಅನುಮಾನ ಗಳಿಗೆ ಎಡೆಮಾಡಿಕೊಟ್ಟಿದೆ. 
ಯಡಿಯೂರಪ್ಪ ಅವರ ಕುಟುಂಬದ ಮೂಲಗಳ ಪ್ರಕಾರ, ಸ್ವಾಮೀಜಿಯೊಬ್ಬರನ್ನು ಭೇಟಿ ಮಾಡುವ ಸಲುವಾಗಿ ಯಡಿಯೂರಪ್ಪ ಅವರು ವಾಪಸ್ಸಾಗುತ್ತಿದ್ದಾರೆಂದು ಹೇಳಲಾಗುತ್ತಿದೆ. ಆದರೆ, ಬಿಜೆಪಿ ರಾಷ್ಟ್ರೀಯ ಕಾರ್ಯಕಾರಣಿ ತೊರೆಗು ವಾಪಸ್ಸಾಗಿರುವುದು ಕೇವಲ ಸ್ವಾಮೀಜಿ ಭೇಟಿ ಮಾತ್ರವಷ್ಟೇ ಅಲ್ಲ ಎನ್ನಲಾಗುತ್ತಿದೆ. 

ರಾಜ್ಯದಲ್ಲಿ ಸಮ್ಮಿಶ್ರ ಸರ್ಕಾರದಲ್ಲಿ ಶೀಘ್ರದಲ್ಲಿಯೇ ಬದಲಾವಣೆಗಳಾಗಲಿದ್ದು, ಈ ಹಿನ್ನಲೆಯಲ್ಲಿ ಯಡಿಯೂರಪ್ಪ ಅವರು ಬಿಜೆಪಿ ವರಿಷ್ಠರ ನಿರ್ದೇಶನದ ಮೇರೆಗೆ ಬೆಂಗಳೂರಿಗೆ ವಾಪಸ್ಸಾಗುತ್ತಿದ್ದಾರೆಂದು ಹೇಳಲಾಗುತ್ತಿದೆ. 

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ದೆಹಲಿಯಲ್ಲಿ ಹೈಡ್ರಾಮಾ: ವಿಮಾನ ನಿಲ್ದಾಣದಲ್ಲಿ ಬಂಧನಕ್ಕೊಳಗಾಗಿದ್ದ CJP ನಾಯಕರಾದ ದೀಪ್ಕೆ, ರಾಂಕಾ, ದಾಸ್ ಕೊನೆಗೂ ಬಿಡುಗಡೆ..!

Riyadh ವಿಮಾನ ನಿಲ್ದಾಣದ ಮೇಲೆ ಕ್ಷಿಪಣಿ ದಾಳಿ: 12 ಮಂದಿ ಸಾವು, 300ಕ್ಕೂ ಹೆಚ್ಚು ಜನರಿಗೆ ಗಾಯ

Operation Sindoor ನಮ್ಮ ಆತ್ಮರಕ್ಷಣೆಯ ಕ್ರಮ, ಪರಮಾಣು ಬೆದರಿಕೆಗೆ ಎಂದಿಗೂ ಮಣಿಯಲ್ಲ: 3 'ಲಕ್ಷ್ಮಣ ರೇಖೆ' ಎಳೆದು ಪಾಕ್'ಗೆ ಭಾರತ ಖಡಕ್ ಎಚ್ಚರಿಕೆ..!

ದೆಹಲಿಯಲ್ಲಿ ನಾಯಕರ ಬಂಧನ, ಮೆಟ್ರೋ ಸ್ಥಗಿತ ಕುರಿತ ನ್ಯಾಯಾಂಗ ನಿಂದನೆ: ಭಾನುವಾರವೂ 'ಸುಪ್ರೀಂ' ವಿಶೇಷ ಪೀಠದಿಂದ ವಿಚಾರಣೆ!

CJP ಪ್ರತಿಭಟನೆಗೆ ದೇಶವಿರೋಧಿ ಶಕ್ತಿಗಳ ಸಾಥ್‌: ಭಾರತದ ವರ್ಚಸ್ಸಿಗೆ ಮಸಿ ಬಳಿಯುವ ಪ್ರಯತ್ನ..!