ರಾಜಕೀಯ

ಲೋಕಸಭೆ ಚುನಾವಣೆಯಲ್ಲಿ ಮಿಷನ್ 25: ಪರಿಶೀಲನೆಗಾಗಿ ಅಮಿತ್ ಶಾ ರಾಜ್ಯ ಭೇಟಿ!

Shilpa D
ಬೆಂಗಳೂರು: ಮುಂಬರುವ ಲೋಕಸಭೆ  ಚುನಾವಣೆಯಲ್ಲಿ  ರಾಜ್ಯದ 28 ಕ್ಷೇತ್ರಗಳ ಪೈಕಿ 25 ರಲ್ಲಿ ಗೆಲ್ಲಲೇಬೇಕು ಎಂದು ಬಿಜೆಪಿ  ನಿರ್ಧರಿಸಿದೆ.  ಹೀಗಾಗಿ ಸೆಪ್ಟಂಬರ್ ತಿಂಗಳ ಅಂತ್ಯದಲ್ಲಿ ಅಥವಾ ಅಕ್ಟೋಬರ್ ತಿಂಗಳ ಮೊದಲ ವಾರದಲ್ಲಿ ಬಿಜೆಪಿ ರಾಷ್ಚ್ರೀಯ ಅಧ್ಯಕ್ಷ ಅಮಿತ್ ಶಾ ರಾಜ್ಯಕ್ಕೆ ಆಗಮಿಸಲಿದ್ದಾರೆ.
ದೆಹಲಿಯಲ್ಲಿ ನಡೆಯುತ್ತಿರುವ ಎರಡು ದಿನಗಳ ಬಿಜೆಪಿ ಕಾರ್ಯಕಾರಿಣಿಯಲ್ಲಿ ರಾಜ್ಯಾಧ್ಯಕ್ಷ ಯಡಿಯೂರಪ್ಪ ಅವರ ಜೊತೆಗೆ ಚರ್ಚಿಸಿ ದಿನಾಂಕ ನಿಗದಿ ಮಾಡಲಾಗುವುದು. ದೆಹಲಿಯಲ್ಲಿ ನಡೆಯುತ್ತಿರುವ ಬಿಜೆಪಿ ಕಾರ್ಯಕಾರಿಣಿಗಾಗಿ ಸಿಟಿ ರವಿ, ಅರವಿಂದ ಲಿಂಬಾವಳಿ ಸೇರಿದಂತೆ ಹಲವು ಬಿಜೆಪಿ ನಾಯಕರು ಶುಕ್ರವಾರವೇ ದೆಹಲಿಗೆ ತೆರಳಿದ್ದಾರೆ,
ರಾಜಸ್ತಾನ, ಮಧ್ಯಪ್ರದೇಶ ಮತ್ತು ಚತ್ತೀಸ್ ಗಡದಲ್ಲಿ ವಿಧಾನಸಭೆ ಚುನಾವಣೆಗಳು ನಡೆಯಲಿದ್ದು, ಈ ಸಂಬಂಧ ಕಾರ್ಯಕಾರಿಣಿಯಲ್ಲಿ ಚರ್ಚಿಸಲಾಗುವುದು, ಹಾಗೇಯೇ  ಕರ್ನಾಟಕ ರಾಜ್ಯ ರಾಜಕೀಯ ಬೆಳವಣಿಗೆಗಳ ಹಿನ್ನೆಲೆಯಲ್ಲಿ  ಯಡಿಯೂರಪ್ಪ ಜೊತೆ ಅಮಿತ್ ಶಾ ಪ್ರತ್ಯೇಕ ಮಾತುಕತೆ ನಡೆಸಲಿದ್ದಾರೆ ಎನ್ನಲಾಗಿದೆ.
ಇತ್ತೀಚೆಗೆ ನಡೆದ ಸ್ಥಳೀಯ ಸಂಸ್ಥೆ ಚುನಾವಣೆಗಳಲ್ಲಿ ಬಿಜೆಪಿ ಸಾಧನೆ ಕುರಿತು ಅಮಿತ್ ಶಾ ಯಡಿಯೂರಪ್ಪ ಅವರನ್ನು ಹೊಗಳಲಿದ್ದಾರೆ ಎಂದು ಮೂಲಗಳು ತಿಳಿಸಿವೆ.  ಕೇಂದ್ರ ನಾಯಕರು ಕರ್ನಾಟಕ ಲೋಕಸಭೆ ಚುನಾವಣೆ ಮೇಲೆ ಹೆಚ್ಚು ನಿರೀಕ್ಷೆ ಇಟ್ಟು ಕೊಂಡಿದ್ದಾರೆ.ದಕ್ಷಿಣ ಭಾರತದಲ್ಲಿ ಅಧಿಕಾರ ಹೊಂದಲು ಕರ್ನಾಟಕ ಹೆಬ್ಬಾಗಿಲು ಆಗಿದೆ ಎಂದು ಬಿಜೆಪಿ ರಾಷ್ಚ್ರೀಯ ಪ್ರಧಾನ ಕಾರ್ಯದರ್ಶಿ ಎನ್ ರವಿ ಕುಮಾರ್ ಹೇಳಿದ್ದಾರೆ.
SCROLL FOR NEXT