ಜಿ ಪರಮೇಶ್ವರ 
ರಾಜಕೀಯ

ಡಿಸಿಎಂ ಪರಮೇಶ್ವರ ವಿದೇಶ ಪ್ರವಾಸಕ್ಕೆ ಕೈಕಮಾಂಡ್ ಬ್ರೇಕ್

ಉಪ ಮುಖ್ಯಮಂತ್ರಿ ಡಾ. ಜಿ. ಪರಮೇಶ್ವರ ಅವರು ಸೋಮವಾರ ದಿಢೀರ್ ತಮ್ಮ ವಿದೇಶ ಪ್ರವಾಸ ರದ್ದುಗೊಳಿಸಿದ್ದಾರೆ.

ಬೆಂಗಳೂರು: ಉಪ ಮುಖ್ಯಮಂತ್ರಿ ಡಾ. ಜಿ. ಪರಮೇಶ್ವರ ಅವರು ಸೋಮವಾರ ದಿಢೀರ್ ತಮ್ಮ  ವಿದೇಶ ಪ್ರವಾಸ ರದ್ದುಗೊಳಿಸಿದ್ದಾರೆ.
ಪರಮೇಶ್ವರ ಅವರು ಜಾಗತಿಕ ತಾಪಮಾನಕ್ಕೆ ಸಂಬಂಧಿಸಿದ ಸಮ್ಮೇಳನದಲ್ಲಿ ಭಾಗವಹಿಸುವುದ್ಕಾಗಿ ಇಂದು ಅಮೆರಿಕದ ಸ್ಯಾನ್ ಫ್ರಾನ್ಸಿಸ್ಕೋಗೆ ತೆರಳಬೇಕಿತ್ತು. ಆದರೆ ಹೈಕಮಾಂಡ್ ಏಕಾಏಕಿ ಪರಮೇಶ್ವರ ಅವರ ಪ್ರವಾಸಕ್ಕೆ ಬ್ರೇಕ್ ಹಾಕಿದ್ದು, ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ವಿದೇಶ ಪ್ರವಾಸದಿಂದ ವಾಪಸ್ ಬರುವವರೆಗೆ ಬೆಂಗಳೂರಿನಲ್ಲಿಯೇ ಇದ್ದು ಶಾಸಕರ ಚಲನವಲನದ ನಿಗಾ ವಹಿಸುವಂತೆ ಸೂಚಿಸಿದೆ.
ರಾಜ್ಯದಲ್ಲಿ ರಾಜಕೀಯ ಪರಿಸ್ಥಿತಿ ಅಷ್ಟು ಚೆನ್ನಾಗಿಲ್ಲ. ಬಿಜೆಪಿ ಸದ್ದಿಲ್ಲದೇ ರಹಸ್ಯ ಚಟುವಟಿಕೆ ನಡೆಸುತ್ತಿದೆ. ಆಪರೇಷನ್ ಕಮಲ ನಡೆಸಲು ಬಿಜೆಪಿ ಪ್ಲಾನ್ ಮಾಡುತ್ತಿದೆ. ಈ ಮಧ್ಯೆ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಕೂಡ ವಿದೇಶ ಪ್ರವಾಸದಲ್ಲಿದ್ದಾರೆ. ಹೀಗಾಗಿ ಕಾಂಗ್ರೆಸ್ ಶಾಸಕರ ಮೇಲೆ ನಿಗಾ ಇಡಲು ನಾಯಕರೇ ಇಲ್ಲದಾದರೆ ಕಷ್ಟ ಅಂತ ಹೈಕಮಾಂಡ್ ಪರಮೇಶ್ವರಗೆ ಹೇಳಿದೆ ಎಂದು ಮೂಲಗಳು ತಿಳಿಸಿವೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Operation Sindoor; Kirana Hills ಪರಮಾಣು ನೆಲೆಗೆ ಅಪ್ಪಳಿಸಿದ ಭಾರತದ ಡ್ರೋನ್? ಬೆಚ್ಚಿಬಿದ್ದ ಪಾಕಿಸ್ತಾನ..! Indian Army ಹೇಳಿದ್ದೇನು?

ನೀಟ್ ಪ್ರತಿಭಟನಾಕಾರರ ಮೇಲೆ ಪೊಲೀಸ್ ದೌರ್ಜನ್ಯ ಆರೋಪ: ಚರ್ಚೆಗೆ ವಿಪಕ್ಷಗಳ ಪಟ್ಟು, ಸಂಸದೀಯ ಸಮಿತಿ ಸಭೆಯಲ್ಲಿ ತೀವ್ರ ವಾಗ್ವಾದ!

2nd Test: ‘ಶ್ರೀಲಂಕಾ ಆಟಗಾರರ ವರ್ತನೆ ವೃತ್ತಿಪರವಾಗಿರಲಿಲ್ಲ’: ಬ್ಯಾಡ್ ಲೈಟ್ ವಿವಾದಕ್ಕೆ Sanjay Manjrekar ಕಿಡಿ

‘ಪ್ರಸಿದ್ಧ್ ಕೃಷ್ಣ ವಿಶ್ವದರ್ಜೆಯ ಬೌಲರ್ ಆಗಿ ಮಾರ್ಪಟ್ಟಿದ್ದಾರೆ’: ಕನ್ನಡಿಗನ ಶ್ಲಾಘಿಸಿದ ದಕ್ಷಿಣ ಆಫ್ರಿಕಾ ಮಾಜಿ ವೇಗಿ Morne Morkel

ಮಂಡ್ಯ ಜೈಲಿನ ಕರ್ಮಕಾಂಡ ಬಯಲು: ಆಸ್ಪತ್ರೆ​​ ವಾರ್ಡ್​​​ನಲ್ಲಿ ಮಹಿಳೆ​​ ಜೊತೆ ಸಿಕ್ಕಿಬಿದ್ದ ವಿಚಾರಣಾಧೀನ ಸರ್ಕಾರಿ ಅಧಿಕಾರಿ!