ವಿಜಯಪುರ-ಬಾಗಲಕೋಟೆ ಪರಿಷತ್ ಉಪ ಚುನಾವಣೆ: ಸುನೀಲ್ ಪಾಟೀಲ್ ಗೆಲವು
ವಿಜಯಪುರ-ಬಾಗಲಕೋಟೆ ಅವಳಿ ಜಿಲ್ಲೆಗಳ ಸ್ಥಳೀಯ ಸಂಸ್ಥೆಗಳ ಮೇಲ್ಮನೆ ಉಪ ಚುನಾವಣೆಯ ಮತ ಎಣಿಕೆ ಮಂಗಳವಾರ ನಡೆದಿದ್ದು, ಕಾಂಗ್ರೆಸ್ನ ಸುನೀಲಗೌಡ ಪಾಟೀಲ ...
ವಿಜಯಪುರ: ವಿಜಯಪುರ-ಬಾಗಲಕೋಟೆ ಅವಳಿ ಜಿಲ್ಲೆಗಳ ಸ್ಥಳೀಯ ಸಂಸ್ಥೆಗಳ ಮೇಲ್ಮನೆ ಉಪ ಚುನಾವಣೆಯ ಮತ ಎಣಿಕೆ ಮಂಗಳವಾರ ನಡೆದಿದ್ದು, ಕಾಂಗ್ರೆಸ್ನ ಸುನೀಲಗೌಡ ಪಾಟೀಲ ಭರ್ಜರಿ ಜಯ ಸಾಧಿಸಿದ್ದಾರೆ.
ಬಿಜೆಪಿ ಅಭ್ಯರ್ಥಿ ಗೂಳಪ್ಪ ಶಟಗಾರ ಅವರನ್ನು 1975 ಮತಗಳ ಅಂತರದಲ್ಲಿ ಸೋಲಿಸಿದ್ದಾರೆ. ಒಟ್ಟು 7 ಅಭ್ಯರ್ಥಿಗಳು ಕಣದಲ್ಲಿದ್ದರು. ಕಾಂಗ್ರೆಸ್ ಪಕ್ಷಕ್ಕೆ ಜೆಡಿಎಸ್ ಬೆಂಬಲ ನೀಡಿತ್ತು.
ಬಸನಗೌಡ ಪಾಟೀಲ ಯತ್ನಾಳ ರಾಜೀನಾಮೆಯಿಂದ ತೆರವಾಗಿದ್ದ ವಿಜಯಪುರ-ಬಾಗಲಕೋಟೆ ಸ್ಥಳೀಯ ಸಂಸ್ಥೆಗಳಿಂದ ವಿಧಾನ ಪರಿಷತ್ತಿನ ಒಂದು ಸ್ಥಾನಕ್ಕೆ ಸೆಪ್ಟಂಬರ್ 6 ರಂದು ಚುನಾವಣೆ ನಡೆದಿತ್ತು.
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.