ಸಂಗ್ರಹ ಚಿತ್ರ 
ರಾಜಕೀಯ

ಸಿದ್ದರಾಮಯ್ಯ ಆಗಮನಕ್ಕೂ ಮುನ್ನ ಬಿಕ್ಕಟ್ಟಿಗೆ ಅಂತ್ಯ ಹಾಡಲು ಶಾಸಕರಿಂದ ಪರೇಡ್ ನಡೆಸಿದ ಕಾಂಗ್ರೆಸ್

ರಾಜ್ಯ ರಾಜಕಾರಣದಲ್ಲಿ ಸಂಚಲನ ಮೂಡಿಸಿರುವ ಜಾರಕಿಹೊಳಿ ಸಹೋದರರ ಪ್ರಹಸನ ಬಗೆಹರಿಸಲು ಹಾಗೂ ಬಿಜೆಪಿ ತನ್ನತ್ತ ಸೆಲೆಯಲು ಯತ್ನಿಸುತ್ತಿರುವ ಪಕ್ಷದ ಶಾಸಕರನ್ನು ಭದ್ರಪಡಿಸಿಕೊಳ್ಳುವ ಸಲುವಾಗಿ ಕಾಂಗ್ರೆಸ್ ಹಿರಿಯ ನಾಯಕರು...

ಬೆಂಗಳೂರು: ರಾಜ್ಯ ರಾಜಕಾರಣದಲ್ಲಿ ಸಂಚಲನ ಮೂಡಿಸಿರುವ ಜಾರಕಿಹೊಳಿ ಸಹೋದರರ ಪ್ರಹಸನ ಬಗೆಹರಿಸಲು ಹಾಗೂ ಬಿಜೆಪಿ ತನ್ನತ್ತ ಸೆಲೆಯಲು ಯತ್ನಿಸುತ್ತಿರುವ ಪಕ್ಷದ ಶಾಸಕರನ್ನು ಭದ್ರಪಡಿಸಿಕೊಳ್ಳುವ ಸಲುವಾಗಿ ಕಾಂಗ್ರೆಸ್ ಹಿರಿಯ ನಾಯಕರು ಬುಧವಾರ ಭರ್ಜರಿ ಸಂಧಾನ ಹಾಗೂ ಸಮಾಧಾನ ಪ್ರಕ್ರಿಯೆಗಳನ್ನು ನಡೆಸಿದರು. 
ಪಿಎಲ್'ಡಿ ಬ್ಯಾಂಕ್ ಚುನಾವಣೆ ಬಳಿಕ ಭುಗಿಲೆದ್ದಿರುವ ಸತೀಶ್ ಜಾರಕಿಹೊಳಿ ಹಾಗೂ ರಮೇಶ್ ಜಾರಕಿಹೊಳಿ ಅವರ ಅಸಮಾಧಾನ ಶಮನಗೊಳಿಸಲು ಹಾಗೂ ಬಿಜೆಪಿ ನಾಯಕರು ಕಾಂಗ್ರೆಸ್ ಶಾಸಕರನ್ನು ಸೆಳೆಯಲು ತೆರೆಮನರೆಯ ಪ್ರಯತ್ನ ನಡೆಸುತ್ತಿರುವ ಹಿನ್ನಲೆಯಲ್ಲಿ ಕಾಂಗ್ರೆಸ್ ಶಾಸಕರನ್ನು ಭದ್ರಪಡಿಸಿಕೊಳ್ಳಲು ಕೆಪಿಸಿಸಿ ಅಧ್ಯಕ್ಷ ದಿನೇಶ್ ಗುಂಡೂರಾವ್ ಅವರು ಶಾಸಕರಿಗೆ ರಾಜಧಾನಿಗೆ ಬರುವಂತೆ ಬುಲವ್ ನೀಡಿ ಒಗ್ಗಟ್ಟು ಪ್ರದರ್ಶಿಸಿದ್ದಾರೆ. 
ಇದಲ್ಲದೆ ಬಿಜೆಪಿಯಿಂದಗ ಆಮಿಷವೊಡ್ಡಿದ್ದಾರೆನ್ನಲಾದ ಮಸ್ಕಿ ಶಾಸಕ ಪ್ರತಾಪ್ ಗೌಡ ಪಾಟೀಲ್, ಸಿ.ಎಸ್.ಶಿವಳ್ಳಿ, ವಿಜಯನಗರ ಶಾಸಕ ಆನಂದ್ ಸಿಂಗ್, ಬಳ್ಳಾರಿ ಗ್ರಾಮಾಂತರ ಶಾಸಕ ನಾಗೇಂದ್ರ, ಹೆಚ್.ಡಿ.ಕೋಟೆ ಶಾಸಕ ಅನಿಲ್ ಚಿಕ್ಕಮಾದು, ಹಗರಿಬೊಮ್ಮನಹಳ್ಳಿ ಶಾಸಕ ಭೀಮಾನಾಯಕ್ ಅವರನ್ನು ಸಮಾಧಾನಪಡಿಸಲು ದಿನೇಶ್ ಗುಂಡೂರಾವ್ ಅವರು ತೀವ್ರ ಕಸರತ್ತು ನಡೆಸಿದರು. 
ಈ ನಡುವೆ ಅಸಮಾಧಾನ ಶಮನಗೊಳಿಸಲು ಲೋಕಸಭೆ ಕಾಂಗ್ರೆಸ್ ನಾಯಕ ಮಲ್ಲಿಕಾರ್ಜುನ ಖರ್ಗೆಯವರೇ ಕಣಕ್ಕಿಳಿದಿದ್ದಾರೆಂದು ಹೇಳಲಾಗುತ್ತಿದ್ದು, ಇದರ ಬೆನ್ನಲ್ಲೇ ರಮೇಶ್ ಜಾರಕಿಹೊಳಿಯವರು ಖರ್ಗೆಯವರನ್ನು ಭೇಟಿಯಾಗಿ ಮಾತುಕತೆ ನಡೆಸಿದ್ದಾರೆಂದು ತಿಳಿದುಬಂದಿದೆ. 
ಖರ್ಗೆಯವರ ಭೇಟಿಗೂ ಮುನ್ನ ಹೇಳಿಕೆ ನೀಡಿದ್ದ ರಮೇಶ್ ಅವರು, ಸಮಸ್ಯೆಗಳು ಬಗೆಹರಿದಿವೆ. ನನ್ನ ತಂದೆಯಂತಿರುವ ಖರ್ಗೆಯವರನ್ನು ನಾನು ಭೇಟಿ ಮಾಡಿ, ಮಾತುಕತೆ ನಡೆಸುತ್ತಿದ್ದೇನೆಂದು ಹೇಳಿದ್ದಾರೆ. 

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Super Emergency: ತಾರಕಕ್ಕೇರಿದ ದೆಹಲಿ ಪ್ರತಿಭಟನೆ, ಬರೊಬ್ಬರಿ 3 ಸಾವಿರ ಮಂದಿ ವಶಕ್ಕೆ, ವಿಪಕ್ಷಗಳ ಆಕ್ರೋಶ!

'vote chori' ಹೇಗಿರತ್ತೆ ನಮ್ಗೆ ಗೊತ್ತು, ಸಿನಿಮಾದಲ್ಲಿ ತೋರಿಸಿದ್ದ ರಿಗ್ಗಿಂಗ್ ವಾತಾವರಣ ನಿಜವಾಗಿಯೂ ನೋಡಿದ್ದೇವೆ: SIR ಗೆ 124 ಮಾಜಿ ಅಧಿಕಾರಿಗಳು, ರಾಜತಾಂತ್ರಿಕರಿಂದ ಬೆಂಬಲ

ಹೃದಯವಿದ್ರಾವಕ: 'ಚಿಕಿತ್ಸೆಗೆ ಹಣವಿಲ್ಲ'.. 6 ವರ್ಷದ ಮಗಳನ್ನೇ ಕೆರೆಗೆ ಎಸೆದ ತಾಯಿ; ಆಟೋ ಚಾಲಕನಿಂದ ರಕ್ಷಣೆ

'ನಿಮಗೆ ನಾಚಿಕೆಯಾಗಬೇಕು': CJP ನಾಯಕರ ವಿರುದ್ಧ ವಿಮಾನದಲ್ಲಿ ಪ್ರಯಾಣಿಕರ ಆಕ್ರೋಶ, Video!

ಅಭಿಜೀತ್ ದೀಪ್ಕೆ ಸಂಪರ್ಕಿಸಲು ಸಾಧ್ಯವಾಗುತ್ತಿಲ್ಲ; ಅಜ್ಜಿ ಸಾವಿನ ಸುದ್ದಿ ತಿಳಿಸುವುದು ಹೇಗೆ? ಪೊಲೀಸ್ ಕ್ರಮಕ್ಕೆ ಪೋಷಕರ ಆಕ್ರೋಶ