ಸಿದ್ದರಾಮಯ್ಯ 
ರಾಜಕೀಯ

ಸಿದ್ದರಾಮಯ್ಯ ಅವರೇ ನಮ್ಮ ನಾಯಕರು; ಜಾರಕಿ ಹೊಳಿ ಸಹೋದರರಿಗೆ ಪರಮ್, ದಿನೇಶ್ ಲೆಕ್ಕಕ್ಕೇ ಇಲ್ಲ!

ಸಮ್ಮಿಶ್ರ ಸರ್ಕಾರದಲ್ಲಿನ ಕೈ ಸಚಿವರು ದಿನಕ್ಕೊಂದು ಹೇಳಿಕೆ ನೀಡುತ್ತಿರುವ ಕಾರಣ ಕಾಂಗ್ರೆಸ್ ಪಕ್ಷ ತೀವ್ರ ಮುಜುಗರಕ್ಕೊಳಗಾಗುತ್ತಿದೆ,...

ಮೈಸೂರು: ಸಮ್ಮಿಶ್ರ ಸರ್ಕಾರದಲ್ಲಿನ ಕೈ ಸಚಿವರು ದಿನಕ್ಕೊಂದು ಹೇಳಿಕೆ ನೀಡುತ್ತಿರುವ ಕಾರಣ ಕಾಂಗ್ರೆಸ್ ಪಕ್ಷ ತೀವ್ರ ಮುಜುಗರಕ್ಕೊಳಗಾಗುತ್ತಿದೆ.
ಸಚಿವ ರಮೇಶ್ ಜಾರಕಿಹೊಳಿ, ಸಿದ್ದರಾಮಯ್ಯ ಅವರೇ ನಮ್ಮ ನಾಯಕರು, ಅವರು ವಿದೇಶ ಪ್ರವಾಸದಿಂದ ಬಂದ ಮೇಲೆ ಅವರ ಮೂಲಕವೇ ಎಲ್ಲಾ ಸಮಸ್ಯೆಗಳನ್ನು ಬಗೆಹರಿಸಿಕೊಳ್ಳುವುದಾಗಿ ಹೇಳಿದ್ದಾರೆ. 
ಇನ್ನೂ ಮತ್ತೊಬ್ಬ ಸಚಿವರಾದ ಪುಟ್ಟರಂಗ  ಶೆಟ್ಟಿ ಕೂಡ ಅಸಮಾಧಾನದಿಂದ ಕೊತ ಕೊತ ಕುದಿಯುತ್ತಿದ್ದಾರೆ, ದಸರಾ ಸಮಿತಿ ಉಪಾಧ್ಯಕ್ಷನನ್ನಾಗಿ ಮಾಡಿಲ್ಲ, ಹಾಗೂ ದಸರಾ ಪೋಸ್ಟರ್ ಗಳಲ್ಲಿ ತಮ್ಮ ಹೆಸರು ಹಾಕಿಲ್ಲ ಎಂದು ಶೆಟ್ಟಿ ಗರಂ ಆಗಿದ್ದು ಸಭೆಯಿಂದ ಎದ್ದು ಹೊರ ನಡೆದಿದ್ದಾರೆ.
ಪುಟ್ಟರಂಗಶೆಟ್ಟಿ, ಇಂದಿಗೂ ಸಿದ್ದರಾಮಯಾಯ ಅವರೇ ನಮಗೆ ಮುಖ್ಯಮಂತ್ರಿಗಳು, ಸಿದ್ದರಾಮಯ್ಯ ಅವರು ಬಂದ ಮೇಲೆ ತಮ್ಮ ಸಮಸ್ಯೆ ಬಗೆಹರಿಸುವಂತೆ ಕೇಳಿಕೊಳ್ಳುವುದಾಗಿ ತಿಳಿಸಿದ್ದಾರೆ. ಈ ಇಬ್ಬರು ನಾಯಕರು ಹಲವು ಸಂದರ್ಭಗಳಲ್ಲಿ ಈ ರೀತಿ ನೀಡಿರುವ ಹೇಳಿಕೆಯಿಂದಾಗಿ ಉಪಮುಖ್ಯಮಂತ್ರಿ ಪರಮೇಶ್ವರ್ ಅವರಿಗೆ ತೀವ್ರ ಮುಜುಗರ ಉಂಟು ಮಾಡಿದೆ.
ಈ ಇಬ್ಬರು ತಮ್ಮ ಸಮಸ್ಯೆಗಳನ್ನು ಪರಮೇಶ್ವರ್  ಅಥವಾ ಕೆಪಿಸಿಸಿ ಅಧ್ಯಕ್ಷ ದಿನೇಶ್ ಗುಂಡೂರಾವ್ ಬಳಿ ಹೇಳಿಕೊಂಡಿಲ್ಲ, ಇದು ಈ ಇಬ್ಬರು ನಾಯಕರ ಕೆಂಗಣ್ಣಿಗೆ ಕಾರಣವಾಗಿದೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಮಾತುಕತೆಗೆ ವ್ಯಾನ್ಸ್ ನೇತೃತ್ವದ ಅಮೆರಿಕಾ ತಂಡ ಇಸ್ಲಾಮಾಬಾದ್ ಗೆ ಆಗಮನ, ಲೆಬನಾನ್ ಕದನ ವಿರಾಮ, ಆಸ್ತಿ ಬಿಡುಗಡೆ ಪ್ರಮುಖ ಅಜೆಂಡಾ-Video

ಇರಾನ್‌ ಸರ್ವೋಚ್ಚ ನಾಯಕ ಮೊಜ್ತಾಬಾ ಖಮೇನಿ ಮುಖ ವಿರೂಪಗೊಂಡಿದೆ, ಕಾಲುಗಳಿಗೆ ತೀವ್ರ ಗಾಯವಾಗಿದೆ: ವರದಿ

ತೀವ್ರ ಕುತೂಹಲ ಘಟ್ಟಕ್ಕೆ ತಲುಪಿದ ಪಶ್ಚಿಮ ಏಷ್ಯಾ ಸಂಘರ್ಷ: ಇಂದು ಪಾಕಿಸ್ತಾನ ಮಧ್ಯಸ್ಥಿಕೆಯಲ್ಲಿ ಇರಾನ್-ಅಮೆರಿಕ ನಡುವೆ ಸಂಧಾನ ಮಾತುಕತೆ-Video

PSL ನಲ್ಲಿ ಮತ್ತೊಂದು ಹೈಡ್ರಾಮಾ: ಇದ್ಯಾವ್ ಸೀಮೆ ಬೌಲಿಂಗ್?.. ಮೈದಾನದಲ್ಲೇ Daryl Mitchell vs Usman Tariq ಜಟಾಪಟಿ, ಇಷ್ಟಕ್ಕೂ ಆಗಿದ್ದೇನು?

5 ದಶಕಗಳ ಬಳಿಕ ದಾಖಲೆ ನಿರ್ಮಿಸಿದ ಚಂದ್ರಯಾನ: ಯಶಸ್ವಿಯಾಗಿ ಭೂಮಿಗೆ ಮರಳಿದ Artemis II ಗಗನ ಯಾತ್ರಿಗಳು-Video

SCROLL FOR NEXT