ಸಿಎಂ ಕುಮಾರ ಸ್ವಾಮಿ ಮತ್ತು ರಮೇಶ್ ಜಾರಕಿಹೊಳಿ
ಬೆಳಗಾವಿ: ಬೆಳಗಾವಿ ರಾಜಕೀಯದಲ್ಲಿ ತಲೆ ಹಾಕದಂತೆ ಕಾಂಗ್ರೆಸ್ ಹೈಕಮಾಂಡ್ ಒಕ್ಕಲಿಗ ಪ್ರಭಾವಿ ನಾಯಕ ಡಿ.ಕೆ ಶಿವಕುಮಾರ್ ಅವರಿಗೆ ಎಚ್ಚರಿಕೆ ನೀಡಿದ ನಂತರ ಜಾರಕಿಹೊಳಿ ಸಹೋದರರ ಕೋಪ ಕೊಂಚ ಮಟ್ಟಿಗೆ ಕಡಿಮೆಯಾಗಿದೆ ಎನ್ನಲಾಗಿದೆ. ಒಂದು ವೇಳೆ ಮತ್ತೆ ಡಿ.ಕೆ ಶಿವಕುಮಾರ್ ತಮ್ಮ ಜಿಲ್ಲೆಯ ವಿಷಯದಲ್ಲಿ ಹಸ್ತಕ್ಷೇಪ ಮಾಡಿದರೇ ಹೈಕಮಾಂಡ್ ಜೊತೆ ಮಾತನಾಡುವುದಾಗಿ ಸತೀಶ್ ಜಾರಕಿಹೊಳಿ ಹೇಳಿದ್ದಾರೆ.
ಬೆಳಗಾವಿಯ ಬೇರೆ ಶಾಸಕರು ಕೂಡ ಶಿವಕುಮಾರ್ ಹಸ್ತಕ್ಷೇಪಕ್ಕೆ ಆಕ್ಷೇಪ ವ್ಯಕ್ತಪಡಿಸಿದ್ದು, ಮತ್ತೆ ಶಿವಕುಮಾರ್ ಬೆಳಗಾವಿ ರಾಜಕೀಯದಲ್ಲಿ ಮದ್ಯೆ ಪ್ರವೇಶಿಸಿದರೇ ಪಕ್ಷದ ಉನ್ನತ ಮಟ್ಟದ ನಾಯಕರ ಜೊತೆ ಚರ್ಚಿಸುವುದಾಗಿ ತಿಳಿಸಿದ್ದಾರೆ, ಮುಂದಿನ ದಿನಗಳಲ್ಲಿ ಪರಿಸ್ಥಿತಿ ಸುಧಾರಿಸಲಿದೆ ಎಂದು ಜಾರಕಿಹೊಳಿ ಹೇಳಿದ್ದಾರೆ.
ನಾವು ಆರಂಭದಿಂದಲೂ ಕಾಂಗ್ರೆಸ್ ಪಕ್ಷದ ಪರವಾಗಿಯೇ ಇದ್ದೇವೆ, ಬಿಜೆಪಿಯ ನಮಗೆ ಆಪರೇಷನ್ ಕಮಲದ ಬಗ್ಗೆ ಮಾಹಿತಿಯಿಲ್ಲ, ಪ್ರಕರಣ ಸಂಬಂಧ ಯಾವುದೇ ಬಿಜೆಪಿ ನಾಯಕರು ನನ್ನ ಸಂಪರ್ಕದಲ್ಲಿಲ್ಲ ಎಂದು ಹೇಳಿದ್ದಾರೆ.
ಸಮ್ಮಿಶ್ರ ಸರ್ಕಾರ ತನ್ನ ಐದು ವರ್ಷದ ಅವಧಿ ಪೂರೈಸಲಿದೆ ಮಾಜಿ ಸಿಎಂ ಸಿದ್ದರಾಮಯ್ಯ ಅವರ ಜೊತೆ ಯಾವುದೇ ಮಾತುಕತೆ ಏರ್ಪಡಿಸಿಲ್ಲ, ಇದೆಲ್ಲಾ ಮಾಧ್ಯಮದವರ ಊಹಾಪೋಹ ಎಂದು ಹೇಳಿದ್ದಾರೆ.
ಲಕ್ಷ್ಮಿ ಹೆಬ್ಬಾಳ್ಕರ್ ಮತ್ತು ಜಾರಕಿಹೊಳಿ ನಡುವಿನ ಪಿಎಲ್ ಡಿ ಬ್ಯಾಂಕ್ ಚುನಾವಣೆ ಮುಗಿದ ಅಧ್ಯಾಯ ಎಂದು ಹೇಳಿದ್ದಾರೆ. ಇನ್ನೂ ಕೆಎಲ್ ಎಸ್ ವಜ್ರ ಮಹೋತ್ಸವ ಕಾರ್ಯಕ್ರಮದ ವೇಳೆ ಲಕ್ಷ್ಮಿ ಹೆಬ್ಬಾಳ್ಕರ್ ಮತ್ತು ಸತೀಶ್ ಜಾರಕಿಹೊಳಿ ಅಕ್ಕಪಕ್ಕದಲ್ಲೇ ಕುಳಿತು ಉಭಯ ಕುಶಲೋಪರಿ ವಿಚಾರಿಸಿದ್ದು ಎಲ್ಲರ ಹುಬ್ಬೇರುವಂತೆ ಮಾಡಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics