ಹೊಸ ಪಕ್ಷ ಸ್ಥಾಪಿಸಲಿರುವ ರಿಯಲ್ ಸ್ಟಾರ್ ಉಪೇಂದ್ರ; ಸೆ.18ಕ್ಕೆ ಅಧಿಕೃತ ಘೋಷಣೆ
ರಾಜಕೀಯಕ್ಕೆ ಪರ್ಯಾಯವಾಗಿ ಪ್ರಜಾಕೀಯ ಘೋಷಣೆಯೊಂದಿಗೆ ರಾಜಕೀಯ ...
ಬೆಂಗಳೂರು: ರಾಜಕೀಯಕ್ಕೆ ಪರ್ಯಾಯವಾಗಿ ಪ್ರಜಾಕೀಯ ಘೋಷಣೆಯೊಂದಿಗೆ ರಾಜಕೀಯ ಪಕ್ಷ ಹುಟ್ಟುಹಾಕಿ ನಂತರ ಭಿನ್ನಾಭಿಪ್ರಾಯಗಳಿಂದ ಹೊರ ಬಂದಿದ್ದ ಚಿತ್ರನಟ ಉಪೇಂದ್ರ ಇದೀಗ ಮತ್ತೊಮ್ಮೆ ರಾಜಕೀಯ ಪ್ರವೇಶ ಮಾಡುತ್ತಿದ್ದು ತಮ್ಮ ಹುಟ್ಟುಹಬ್ಬದ ದಿನ ಹೊಸ ಪಕ್ಷ ಘೋಷಣೆ ಮಾಡಲಿದ್ದಾರೆ.
ರಿಯಲ್ ಸ್ಟಾರ್ ಉಪೇಂದ್ರ ಅವರ ಹುಟ್ಟುಹಬ್ಬ ನಾಡಿದ್ದು ಮಂಗಳವಾರ ಅಂದರೆ ಸೆಪ್ಟೆಂಬರ್ 18ರಂದಾಗಿದ್ದು ಅಂದು ಉತ್ತಮ ಪ್ರಜಾಕೀಯ ಪಾರ್ಟಿಯನ್ನು ಅವರ ನಿವಾಸದಲ್ಲಿ ಲೋಕಾರ್ಪಣೆ ಮಾಡಲಿದ್ದಾರೆ. ಈ ವಿಷಯವನ್ನು ಸೋಷಿಯಲ್ ಮೀಡಿಯಾದ ಅವರ ಖಾತೆಯಲ್ಲಿ ಅವರೇ ಘೋಷಿಸಿಕೊಂಡಿದ್ದಾರೆ.
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.