ಎಐಸಿಸಿ ಪ್ರಧಾನ ಕಾರ್ಯದರ್ಶಿ ಕೆ.ಸಿ.ವೇಣುಗೋಪಾಲ್
ಬೆಂಗಳೂರು: ರಾಜ್ಯದಲ್ಲಿ ಆಡಳಿತ ನಡೆಸುತ್ತಿರುವ ಕಾಂಗ್ರೆಸ್-ಜೆಡಿಎಸ್ ಮೈತ್ರಿ ಸರ್ಕಾರ ಶೇ.100ರಷ್ಟು ಸುರಕ್ಷಿತವಾಗಿದ್ದು, 5 ವರ್ಷಗಳ ಕಾಲ ಆಡಳಿತವನ್ನು ಪೂರ್ಣಗೊಳಿಸಲಿದೆ ಎಂದು ಎಐಸಿಸಿ ಪ್ರಧಾನ ಕಾರ್ಯದರ್ಶಿ ಕೆ.ಸಿ.ವೇಣುಗೋಪಾಲ್ ಅವರು ಭಾನುವಾರ ಹೇಳಿದ್ದಾರೆ.
ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಜೊತೆಗೆ ಮಾತುಕತೆ ನಡೆಸಿದ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸರ್ಕಾರವನ್ನು ಉರುಳಿಸಲು ಬಿಜೆಪಿ ಯತ್ನ ನಡೆಸುತ್ತಿದೆ. ಸರ್ಕಾರ ಶೇ.100ರಷ್ಟು ಸುರಕ್ಷಿತವಾಗಿದೆ. ನಮ್ಮ ಶಾಸಕರ ಮೇಲೆ ನಮಗೆ ಸಂಪೂರ್ಣ ನಂಬಿಕೆಯಿದೆ. ಯಾರೊಬ್ಬರೂ ಪಕ್ಷವನ್ನು ತೊರೆಯುತ್ತಿಲ್ಲ. ಪಕ್ಷ ಶಾಸಕರಿಗೆ ಬಿಜೆಪಿ ಆಮಿಷವೊಡ್ಡುವ ಪ್ರಯತ್ನಗಳನ್ನು ನಡೆಸುತ್ತಿದೆ ಎಂದು ಆರೋಪಿಸಿದ್ದಾರೆ.
ಬಳಿಕ ಮಾತನಾಡಿದ ಕೆಪಿಸಿಸಿ ಅಧ್ಯಕ್ಷ ದಿನೇಶ್ ಗುಂಡೂರಾವ್ ಅವರು, ಕಾಂಗ್ರೆಸ್ ಶಾಸಕರು ಬಿಜೆಪಿ ಸಂಪರ್ಕದಲ್ಲಿದ್ದಾರೆಂಬುದು ಶುದ್ಧ ಸುಳ್ಳು. ಸರ್ಕಾರ ಅಸ್ಥಿರಗೊಳಿಸಲು ಯಡಿಯೂರಪ್ಪ ಅವರ ಒಂದು ಗುಂಪು ಮಾತ್ರ ಪ್ರಯತ್ನ ನಡೆಸುತ್ತಿದ್ದು, ಸರ್ಕಾರವನ್ನು ಹೇಗೆ ಅಸ್ಥಿರಗೊಳಿಸುತ್ತಾರೋ ನಾವು ನೋಡುದ್ದೇವೆಂದು ಸವಾಲು ಹಾಕಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics