ಕಲಬುರಗಿ: ಒಳ್ಳೆಯ ನಡೆತೆಯಿಂದಾಗಿ ಮುಂಬರುವ ದಿನಗಳಲ್ಲಿ ನಾನು ಕೂಡ ಮುಖ್ಯಮಂತ್ರಿಯಾಗುತ್ತೇನೆ ಎಂದು ಜಲಸಂಪನ್ಮೂಲ ಸಚಿವ ಡಿ.ಕೆ ಶಿವಕುಮಾರ್ ಹೇಳಿದ್ದಾರೆ.
ಭಾನುವಾರ ಕಲಬುರಗಿ ಜಿಲ್ಲೆಯ ಅಫ್ಜಲ ಪುರ ತಾಲೂಕಿನಲ್ಲಿರುವ ದೇವಲಗಾಣಗಾಪುರ ದತ್ತಾತ್ರೇಯ ದೇವಾಲಯಕ್ಕೆ ಭೇಟಿ ನೀಡಿದ ನಂತರ ಮಾಧ್ಯಮಗಳ ಜೊತೆ ಮಾತನಾಡಿದ ಡಿ.ಕೆ ಶಿವಕುಮಾರ್, ತಾವು ಸಿಎಂ ಆಗಲು ಇನ್ನೂ ಸಮಯವಿದೆ, ಅದಕ್ಕೆ ಈಗಲೇ ಆತುರವಿಲ್ಲ ಎಂದು ಹೇಳಿದ್ದಾರೆ.
ಇನ್ನೂ ಕಾಂಗ್ರೆಸ್ -ಜೆಡಿಎಸ್ ಸಮ್ಮಿಶ್ರ ಸರ್ಕಾರ ಸ್ಥಿರವಾಗಿದ್ದು, ಯಾರು ಆತಂಕ ಪಡುವ ಅಗತ್ಯವಿಲ್ಲ, ಬಿಜೆಪಿ ಕಾಂಗ್ರೆಸ್ ಶಾಸಕರನ್ನು ತನ್ನತ್ತೆ ಸೆಳೆಯಲು ಪ್ರಯತ್ನಿಸುತ್ತಿದೆ, ಆದರೇ ಕೇಸರಿ ಪಕ್ಷದ ಯಾವುದೇ ಪ್ರಯತ್ನಗಳು ಫಲ ನೀಡುವುದಿಲ್ಲ ಎಂದು ಶಿವಕುಮಾರ್ ಸ್ಪಷ್ಟ ಪಡಿಸಿದ್ದಾರೆ.