ಎ.ಮಂಜು 
ರಾಜಕೀಯ

ದೇವೇಗೌಡ ಕುಟುಂಬದ ವಿರುದ್ಧ ಭೂಕಬಳಿಕೆ ಆರೋಪ: ಸಮ್ಮಿಶ್ರ ಸರ್ಕಾರಕ್ಕೆ ಮುಜುಗರ ತಂದ ಎ.ಮಂಜು!

ಮಾಜಿ ಪ್ರಧಾನಿ ಎಚ್.ಡಿ ದೇವೇಗೌಡ ಕುಟುಂಬದ ವಿರುದ್ಧ ಭೂ ಕಬಳಿಕೆ ಆರೋಪ ಮಾಡಿರುವ ಮಾಜಿ ಸಚಿವ ಎ ಮಂಜು ತನಿಖೆ ನಡೆಸುವಂತೆ ಒತ್ತಾಯಿಸಿ ....

ಹಾಸನ/ಬೆಂಗಳೂರು:  ಮಾಜಿ ಪ್ರಧಾನಿ ಎಚ್.ಡಿ ದೇವೇಗೌಡ ಕುಟುಂಬದ ವಿರುದ್ಧ ಭೂ ಕಬಳಿಕೆ ಆರೋಪ ಮಾಡಿರುವ ಮಾಜಿ ಸಚಿವ ಎ ಮಂಜು ತನಿಖೆ ನಡೆಸುವಂತೆ ಒತ್ತಾಯಿಸಿ ಸಮ್ಮಿಶ್ರ ಸರ್ಕಾರಕ್ಕೆ ಮುಜುಗರ ತಂದಿಟ್ಟಿದ್ದಾರೆ,
ಹಾಸನ ತಾಲೂಕಿನ ದುದ್ದ ಹೋಬಳಿಯ ಗೌರಿ ಪುರದ ಸೋಮನಹಳ್ಳಿ ಗ್ರಾಮದಲ್ಲಿ ದೇವೇಗೌಡರ ಕುಟುಂಬ 54.29 ಎಕರೆ ಸರ್ಕಾರಿ ಜಮೀನನ್ನು ಕಬಳಿಸಿದ್ದಾರೆ ಎಂದು ಆರೋಪಿಸಿದ್ದಾರೆ
2014 ಸೆಪ್ಟಂಬರ್ 19 ರಂದು ದೇವೇಗೌಡರ ಅತ್ತೆ ಕಾಳಮ್ಮ ಹಾಗೂ ಮೊಮ್ಮಗ ಪ್ರಜ್ವಲ್ ರೇವಣ್ಣ ಹೆಸರಿಗೆ ವರ್ಗಾಯಿಸಲಾಗಿದೆ ಎಂದು ಮಂಜು ಮಾಹಿತಿ ನೀಡಿದ್ದಾರೆ.
ಈ ಅವ್ಯವಹಾರಕ್ಕೆ ರೇವಣ್ಣ ತಮ್ಮ ರಾಜಕೀಯ ಪ್ರಭಾಲ ಬಳಸಿದ್ದಾರೆ, ಕಂದಾಯ ಇಲಾಖೆ ಅಧಿಕಾರಿಗಳು ಸಹ ಕೈ ಜೋಡಿಸಿದ್ದಾರೆ ಎಂದು ಮಂಜು ದೂರಿದ್ದಾರೆ.ಜಿಲ್ಲಾಧಿಕಾರಿ ರೋಹಿಣಿ ಸಿಂಧೂರಿ ಮತ್ತು ಕಂದಾಯ ಸಚಿವರಿಗೆ ದೂರು ನೀಡುವುದಾಗಿ ಹೇಳಿದ್ದಾರೆ.
15 -20 ದಿನಗಳಲ್ಲಿ  ತನಿಖೆ ನಡೆಸಿ ತಪ್ಪಿತಸ್ಥರ ವಿರುದ್ದ  ಕ್ರಮ ಕೈಗೊಳ್ಳಬೇಕೆಂದು ಅವರು ಒತ್ತಾಯಿಸಿದ್ದಾರೆ.
ಇನ್ನೂ ಮಂಜು ಆರೋಪಕ್ಕೆ ಪ್ರತಿಕ್ರಿಯಿಸಿರುವ ಸಚಿವ ಎಚ್.ಡಿ ರೇವಣ್ಣ, ಅವರ ಆರೋಪಗಳೆಲ್ಲಾ ನಿರಾಧಾರ ಎಂದು ಹೇಳಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ಭಾರತೀಯ ನಾವಿಕರ ಸುರಕ್ಷತೆ ಮುಖ್ಯ; ನಾಗರಿಕ ಮೂಲಸೌಕರ್ಯಗಳ ಮೇಲಿನ ದಾಳಿ ಸ್ವೀಕಾರಾರ್ಹವಲ್ಲ: ಇರಾನ್‌ಗೆ ಅಜಿತ್ ದೋವಲ್

ಜರ್ಮನಿಯ ವಸತಿ ಕಟ್ಟಡದಲ್ಲಿ ಶಂಕಿತ ಬೆಂಕಿ ಅವಘಡ: 3 ಭಾರತೀಯರು ಸಾವು!

ಹನಿಟ್ರ್ಯಾಪ್ ಪಿತೂರಿ ಪ್ರಶ್ನಿಸಿದ್ದಕ್ಕೆ ಕಿರುಕುಳ; JDS ಕಾರ್ಯಕರ್ತ CCB ವಶಕ್ಕೆ: ಕುಮಾರಸ್ವಾಮಿ ಆಕ್ರೋಶ

ಕಾಂಗ್ರೆಸ್‌ನ ಆಂತರಿಕ ಕಲಹದಿಂದ 'ಮೂರನೇ ಮುಖ್ಯಮಂತ್ರಿ' ಬಂದರೂ ಅಚ್ಚರಿ ಇಲ್ಲ: ಬಿ.ವೈ ವಿಜಯೇಂದ್ರ; Video

ಯೂಟ್ಯೂಬರ್ ಧ್ರುವ್ ರಾಠಿಗೆ ಸಂಕಷ್ಟ: 8 ವರ್ಷಗಳ ಹಿಂದಿನ ಪ್ರಕರಣಕ್ಕೆ ಮರುಜೀವ; ದೆಹಲಿ ಕೋರ್ಟ್ ಸಮನ್ಸ್!