ಸಿದ್ದರಾಮಯ್ಯ 
ರಾಜಕೀಯ

ಕಾಂಗ್ರೆಸ್ ನಲ್ಲಿ ಮಾಜಿ ಸಿಎಂ ಪಾರುಪತ್ಯ; ಸಾಬೀತುಪಡಿಸಲು ಸಿದ್ದರಾಮಯ್ಯಗೆ ವೇದಿಕೆ ಸದ್ಯದ ರಾಜಕೀಯ !

ಮಾಜಿ ಸಿಎಂ ಸಿದ್ದರಾಮಯ್ಯ ಅವರ ಆಶೀರ್ವಾದ ಇಲ್ಲದೇ ಸಮ್ಮಿಶ್ರ ಸರ್ಕಾರ ಸುಗಮವಾಗಿ ನಡೆಯುವುದಿಲ್ಲ ಎಂಬುದಕ್ಕೆ ಸದ್ಯದ ರಾಜಕೀಯ ಬಿಕ್ಕಟ್ಟು ಜೀವಂತ ...

ಬೆಂಗಳೂರು: ಮಾಜಿ ಸಿಎಂ ಸಿದ್ದರಾಮಯ್ಯ ಅವರ ಆಶೀರ್ವಾದ ಇಲ್ಲದೇ ಸಮ್ಮಿಶ್ರ ಸರ್ಕಾರ ಸುಗಮವಾಗಿ ನಡೆಯುವುದಿಲ್ಲ ಎಂಬುದಕ್ಕೆ ಸದ್ಯದ ರಾಜಕೀಯ ಬಿಕ್ಕಟ್ಟು ಜೀವಂತ ಸಾಕ್ಷಿಯಾಗಿದೆ. ಸ್ವತಃ ಕಾಂಗ್ರೆಸ್ ಹೈ ಕಮಾಂಡ್ ಪರಿಸ್ಥಿತಿ ಸುಧಾರಿಸುವ ಹೊಣೆಯನ್ನು ಸಿದ್ದರಾಮಯ್ಯ ಅವರ ಹೆಗಲಿಗೆ ನೀಡಿದೆ.
ಯೂರೋಪ್ ಪ್ರವಾಸದಿಂದ ಆಗಮಿಸಿದ ದಿನವೇ ಬಿಕ್ಕಟ್ಟು ಶಮನಗೊಳಿಸಲು ಸಿದ್ದರಾಮಯ್ಯಗೆ ಜವಾಬ್ದಾರಿ ನೀಡಿದೆ, ಸಮನ್ವಯ ಸಮಿತಿ ಮುಖ್ಯಸ್ಥ ಹಾಗೂ ಕಾಂಗ್ರೆಸ್ ಶಾಸಕಾಂಗ ಸಮಿತಿ ಅಧ್ಯಕ್ಷರೂ ಆಗಿರುವ ಸಿದ್ದರಾಮಯ್ಯ ಅವರ ಹಿಂಬಾಲಕರು ಸಮ್ಮಿಶ್ರ ಸರ್ಕಾರದ ನಡವಳಿಕೆಯಿಂದ ಬೇಸತ್ತಿದ್ದಾರೆ. ಸರ್ಕಾರದಲ್ಲ ತಮ್ಮ ಮಾತುಗಳಿಗೆ ಕವಡೆ ಕಾಸಿನ ಕಿಮ್ಮತ್ತಿಲ್ಲ ಎಂದು ಸಿದ್ದರಾಮಯ್ಯ ಬಳಿ ತಮ್ಮ ಅಳಲು ತೋಡಿಕೊಂಡಿದ್ದಾರೆ.
ಸಿದ್ದರಾಮಯ್ಯ ಕೂಡ, ಏರುತ್ತಿರುವ ಇಂಧನ ಬೆಲೆ, ಅನ್ನಭಾಗ್ಯ ಯೋಜನೆ, ವಿವಿಗಳ ಸಿಂಡಿಕೇಟ್ ಸದಸ್ಯರ ನೇಮಕ ಹಾಗೂ ಮತ್ತಿತರರ ಸಮಸ್ಯೆಗಳ ಬಗ್ಗೆ  ಮುಖ್ಯಮಂತ್ರಿ ಅವರಿಗೆ ಪತ್ರ ಬರೆದಿದ್ದರು. ಆದರೆ ಸಿದ್ದು ಪತ್ರಕ್ಕೆ ಯಾವುದೇ ಪ್ರತಿಕ್ರಿಯೆ ದೊರೆತಿರಲಿಲ್ಲ, ಹೀಗಾಗಿ ತಮ್ಮನ್ನು ಸಮ್ಮಿಶ್ರ ಸರ್ಕಾರದಲ್ಲಿ ಕಡಗಣಿಸಲಾಗುತ್ತಿದೆ ಎಂದು ಸಿದ್ದರಾಮಯ್ಯ ಅವರಿಗೆ ಮನವರಿಕೆಯಾಗಿತ್ತು.
ಸಿದ್ದರಾಮಯ್ಯ 12 ದಿನಗಳ ಯೂರೋಪ್ ಪ್ರವಾಸ ಮುಗಿಸಿ ಬಂದ ಕೂಡಲೇ ಸಮಸ್ಯೆ ಬಗೆ ಹರಿಸುವಂತೆ ಸಿದ್ದರಾಮಯ್ಯ ಅವರಿಗೆ ಹೊಣೆಗಾರಿಕೆ ನೀಡಿದೆ. ಸೋಮವಾರ ಬೆಳಗ್ಗಿನಿಂದಲೇ ಸಿದ್ದರಾಮಯ್ಯ ತಮ್ಮ ಮನೆಯಲ್ಲಿ ಅಸಮಾಧಾನಿತ ಶಾಸಕರ ಜೊತೆಹಲವು ಸುತ್ತಿನ ಮಾತುಕತೆ ನಡೆಸಿದರು. 
ಕಾಂಗ್ರೆಸ್ ಶಾಸಕರನ್ನು ತನ್ನತ್ತ ಸೆಳೆಯಲು ಪ್ರಯತ್ನಿಸುತ್ತಿರುವ ಬಿಜೆಪಿಗೆ ಎದಿರೇಟು ನೀಡುವುದು ಸದ್ಯ. ಸಿದ್ದರಾಮಯ್ಯ ಅವರ ಮುಂದಿರುವ ದೊಡ್ಡ ಸವಾಲು, ಇದರ ಜೊತೆಗೆ ಖಾಲಿ ಇರುವ ಆರು ಸಚಿವ ಸ್ಥಾನಕ್ಕೆ ಹಲವು ಆಕಾಂಕ್ಷಿಗಳಿದ್ದು ಅದನ್ನು ಸರಿದೂಗಿಸುವ ಹೊಣೆ ಸಿದ್ದು ಮೇಲಿದೆ. ಇದು ನಿಜವಾಗಿಯೂ ಸಿದ್ದರಾಮಯ್ಯ ಅವರಿಗೆ ಬಹುದೊಡ್ಡ ಸವಾಲಾಗಿದೆ.
ಸಿಎಂ ಆಗಿದ್ದಾಗ ಸಿದ್ದರಾಮಯ್ಯ ತಮ್ಮ ಸ್ಥಾನ ಭದ್ರ ಮಾಡಿಕೊಂಡಿದ್ದರು, ಹೀಗಾಗಿ ಈಗಲೂ ಕೂಡ ಪಕ್ಷದ ಶಾಸಕರ ಬೆಂಬಲ ಅವರಿಗೆ ಅಪಾರವಾಗಿದೆ, ಸಿದ್ದರಾಮಯ್ಯ ಅವರನ್ನು ಹೊರಗಿಡಬೇಕು ಎಂದು ಗ್ರಹಿಸಿಕೊಳ್ಳುತ್ತಿರುವಾಗಲೇ ಮತ್ತೆ ಸಿದ್ದರಾಮಯ್ಯ ಅವರ ಉಪಸ್ಥಿತಿ ಅನಿವಾರ್ಯ ವಾಗುತ್ತಿದೆ ಎಂದು ರಾಜಕೀಯ ವಿಶ್ಲೇಷಕ ಸಂದೀಪ್ ಶಾಸ್ತ್ರಿ ಹೇಳಿದ್ದಾರೆ.
ಅಧಿಕಾರಕ್ಕಾಗಿ  ಕಾಂಗ್ರೆಸ್ ನಲ್ಲಿ ಸದ್ಯ  ಹೋರಾಟ ನಡೆಯುತ್ತಿದೆ, ವಿಧಾನಸಭೆ ಚುನಾವಣೆಯಿಂದಲೂ, ಅಧಿಕಾರಕ್ಕಾಗಿ ರಾಜ್ಯ ಕಾಂಗ್ರೆಸ್ ಘಟಕದಲ್ಲಿ ಒಳಜಗಳ ನಡೆಯುತ್ತಲೇ ಇವೆ. ಡಿಸಿಎಂ, ಸಮನ್ವಯ ಸಮಿತಿ ಅಧ್ಯಕ್ಷ ಅಥವಾ ಕೆಪಿಸಿಸಿ ಅಧ್ಯಕ್ಷ ಇವರಲ್ಲಿ ಯಾರು ರಾಜ್ಯ ಘಟಕದ ಪ್ರಮುಖರು ಎಂದು ಇಂದಿಗೂ ತಿಳಿಯುತ್ತಿಲ್ಲ ಎಂದು ರಾಜಕೀಯ ವಿಶ್ಲೇಶಕ ಪ್ರೊ. ಹರೀಶ್ ರಾಮಸ್ವಾಮಿ ಹೇಳಿದ್ದಾರೆ, 
ಇಂತಹ ಬಿಕ್ಕಟ್ಟು ಎದುರಾದಾಗ ಪಕ್ಷ ಸಿದ್ದರಾಮಯ್ಯ ಅವರ ಮೇಲೆ ಅವಲಂಬಿತವಾಗುತ್ತದೆ, ಸಮಸ್ಯೆ ಬಗೆಹರಿಸುತ್ತಾರೆ ಅದರ ಎಲ್ಲಾ ಕ್ರೆಡಿಟ್ ಸಿದ್ದರಾಮಯ್ಯ ಗೆ ಸಲ್ಲುತ್ತದೆ ಎಂದು ಹೇಳಿದ್ದಾರೆ,
ಸದ್ಯಕ್ಕೆ ಸಮ್ಮಿಶ್ರ ಸರ್ಕಾರಕ್ಕೆ ನಿಜವಾಗಿಯೂ ಬೆದರಿಕೆಯಿಲ್ಲ,. ರಾಜಿನಾಮೆ ನೀಡಿ ಮತ್ತೆ ಚುನಾವಣೆಗೆ ಹೋಗುವ ಮನಸ್ಥಿತಿ ಯಾವ ಶಾಸಕರಿಗೂ ಇಲ್ಲ ಎಂದು ಹೇಳಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ಕಾಗ್ನಿಜಂಟ್, ಇನ್ಫೋಸಿಸ್, ಟಿಸಿಎಸ್, ವಿಪ್ರೋ ಎಚ್‌ಸಿಎಲ್ ಗೆ ಅಮೆರಿಕ ಶಾಕ್: ಗ್ರೀನ್ ಕಾರ್ಡ್ ಕಾರ್ಯಕ್ರಮದಿಂದ ಅಮಾನತು!

ರಿಯಾದ್ ವಿಮಾನ ನಿಲ್ದಾಣದ ಮೇಲೆ ದಾಳಿ: ರಿಯಾದ್ ಗೆ ತೆರಳಬೇಕಿದ್ದ ಭಾರತೀಯ ವಿಮಾನಗಳು ರದ್ದು

ರಾಜ್‌ಘಟ್‌ನಲ್ಲಿ 'ಇಂಡಿಯಾ' ನಾಯಕರಿಂದ ಧರಣಿ; ಜ್ಞಾನೇಶ್ ಕುಮಾರ್ ರಾಜೀನಾಮೆ ನೀಡುವವರೆಗೂ 'ವೋಟ್ ಚೋರಿ' ಹೋರಾಟ ಮುಂದುವರಿಸಲು ಪ್ರತಿಜ್ಞೆ!

ಅಂಬಾನಿ ಭಾರತದ ನಿಜವಾದ ಬಾಸ್?: ಭಾರತದಲ್ಲಿ ಸ್ಟಾರ್ ಲಿಂಕ್ ಸೇವೆ ಆರಂಭ ವಿಳಂಬಕ್ಕೆ ಎಲಾನ್ ಮಸ್ಕ್ ಹತಾಶೆ!

SIR ಕಾನೂನುಬದ್ಧ: ಪ್ರತಿಪಕ್ಷಗಳ ಪ್ರತಿಭಟನೆ ನಡುವೆ CEC ಜ್ಞಾನೇಶ್ ಬೆಂಬಲಕ್ಕೆ ನಿಂತ 42 ನಿವೃತ್ತ ನ್ಯಾಯಾಧೀಶರು!