ಬೆಂಗಳೂರು: ಮುಖ್ಯಮಂತ್ರಿ ಎಚ್ ಡಿ ಕುಮಾರಸ್ವಾಮಿ ಅವರ ದಂಗೆ ಹೇಳಿಕೆ ಬೆನ್ನಲ್ಲೇ ಪ್ರತಿಪಕ್ಷ ನಾಯಕ ಬಿಎಸ್ ಯಡಿಯೂರಪ್ಪ ಅವರ ಡಾಲರ್ಸ್ ಕಾಲೊನಿಯ ನಿವಾಸಕ್ಕೆ ನೂರಾರು ಕಾಂಗ್ರೆಸ್ ಕಾರ್ಯಕರ್ತರು ಮುತ್ತಿಗೆ ಹಾಕಿದ ಘಟನೆ ಗುರುವಾರ ನಡೆದಿದೆ.
ಇಂದು ಯಡಿಯೂರಪ್ಪ ಅವರ ನಿವಾಸಕ್ಕೆ ಮುತ್ತಿಗೆ ಹಾಕಿದ ಯುವ ಕಾಂಗ್ರೆಸ್ ಕಾರ್ಯಕರ್ತರು, ಯಡಿಯೂರಪ್ಪ ಡೌನ್ ಡೌನ್ ಎಂದು ಘೋಷಣೆಗಳನ್ನ ಕೂಗಿದರು.
ಈ ವೇಳೆ ಬಿಎಸ್ ವೈ ನಿವಾಸದ ಬಳಿ ಇದ್ದ ಬಿಜೆಪಿ ಕಾರ್ಯಕರ್ತರು ಹಾಗೂ ಕಾಂಗ್ರೆಸ್ ಕಾರ್ಯಕರ್ತರ ನಡುವೆ ಮಾತಿನ ಚಕಮಕಿ ನಡೆಯಿತು. ಸ್ಥಳದಲ್ಲಿದ್ದ ಬಿಜೆಪಿ ಶಾಸಕರಾದ ಎಂ.ಪಿ. ರೇಣುಕಾಚಾರ್ಯ, ಎಸ್.ಆರ್. ವಿಶ್ವನಾಥ್, ಮಾಡಾಳು ವಿರೂಪಾಕ್ಷಪ್ಪ, ದೊಡ್ಡಪ್ಪ ಗೌಡ ಪಾಟೀಲ್, ಹರೀಶ್ ಪೂಂಜಾ, ರವಿಕುಮಾರ್ ಮತ್ತು ಆಯನೂರು ಮಂಜುನಾಥ್ ಅವರು ಕಾಂಗ್ರೆಸ್ ಕಾರ್ಯಕರ್ತರನ್ನು ಸಂಭಾಳಿಸಲು ಯತ್ನಿಸಿದರು.
ಸ್ವಲ್ಪ ಹೊತ್ತಿನ ಬಳಿಕ ಸ್ಥಳಕ್ಕೆ ಆಗಮಿಸಿದ ಪೊಲೀಸರು ಕಾಂಗ್ರೆಸ್ ಕಾರ್ಯಕರ್ತರನ್ನು ಚದುರಿಸಿ, ಯಡಿಯೂರಪ್ಪ ಮನೆ ಪಕ್ಕದ ರಸ್ತೆಗೆ ಬ್ಯಾರಿಕೇಡ್ ನಿರ್ಮಾಣ ಮಾಡಿದರು.
ಶಮ್ಮಿಶ್ರ ಸರ್ಕಾರ ಅಸ್ಥಿರಗೊಳಿಸುವ ಯತ್ನ ಮುಂದುವರೆಸಿದರೆ ಬಿಜೆಪಿ ವಿರುದ್ಧ ದಂಗೆ ಏಳುವಂತೆ ರಾಜ್ಯದ ಜನತೆಗೆ ಕರೆ ನೀಡಬೇಕಾಗುತ್ತದ ಎಂದು ಸಿಎಂ ಕುಮಾರಸ್ವಾಮಿ ಇಂದು ಬೆಳಗ್ಗೆ ಹಾಸನದಲ್ಲಿ ಹೇಳಿದ್ದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics