ರಾಜಕೀಯ

ಜಾರಕೀಹೊಳಿ ಬ್ರದರ್ಸ್ ಬೇಡಿಕೆಗಳಿಗೆ ಮನ್ನಣೆ ನೀಡಲು ಕಾಂಗ್ರೆಸ್ ಒಲವು!

Shilpa D
ಬೆಳಗಾವಿ: ಜೆಡಿಎಸ್-ಕಾಂಗ್ರೆಸ್ ಸಮ್ಮಿಶ್ರ ಸರ್ಕಾರಕ್ಕೆ ತೊಂದರೆಯಾಗದಂತೆ  ರಾಜ್ಯ ರಾಜಕಾರಣದಲ್ಲಿ ತಲೆದೋರಿದ್ದ ರಾಜಕೀಯ ಬಿಕ್ಕಟ್ಟನ್ನು ಕಾಂಗ್ರೆಸ್ ಹೈಕಮಾಂಡ್ ಬಗೆಹರಿಸಿದೆ. ಜಾರಕಿಹೊಳಿ ಸಹೋದರರು ಬೇಡಿಕೆ ಈಡೇರಿಸಿಕೊಳ್ಳುವಲ್ಲಿ ಯಶಸ್ವಿಯಾಗಿದ್ದಾರೆ.  ಬಳ್ಳಾರಿಯ ಮೂವರು ಶಾಸಕರಲ್ಲಿ  ನಾಗೇಂದ್ರ ಅವರಿಗೆ ಸಚಿವ ಸ್ಥಾನ ನೀಡುವಂತೆ ಜಾರಕಿಹೊಳಿ ಲಾಬಿ ನಡೆಸುತ್ತಿದ್ದಾರೆ ಎಂದು ಮೂಲಗಳು ತಿಳಿಸಿವೆ.
ಎಚ್.ಡಿ ಕುಮಾರ ಸ್ವಾಮಿ ನೇತೃತ್ವದ  ಸರ್ಕಾರವನ್ನು ಅಲುಗಾಡದಂತೆ ನೋಡಿಕೊಳ್ಳಲು ಕಾಂಗ್ರೆಸ್ ಮುಂದಾಗಿದೆ, ಬುಧವಾರದಿಂದ ಸತೀಶ್ ಜಾರಕಿಹೊಳಿ ಸರಣಿ ಸಭೆಗಳನ್ನು ನಡೆಸಿದ್ದಾರೆ, ಕೆಲವು ಹೊಂದಾಣಿಕೆ ಮಾಡಿಕೊಳ್ಳುವ ಮೂಲಕ ಸೌಹಾರ್ದಯುತವಾಗಿ ಸಮಸ್ಯೆ ಬಗೆಹರಿಸಿಕೊಳ್ಳಲು ಬೆಳಗಾವಿ ಶಾಸಕರು ಯಶಸ್ವಿಯಾಗಿದ್ದಾರೆ.
ಬುಧವಾರ ರಾತ್ರಿ ಮಾಜಿ ಸಿಎಂ ಸಿದ್ದರಾಮಯ್ಯ ಅವರನ್ನು ಭೇಟಿ ಮಾಡಿದ ಸತೀಶ್ ಜಾರಕಿಹೊಳಿ, ಗುರುವಾರ ಕಾಂಗ್ರೆಸ್ ಉಸ್ತುವಾರಿ ಕೆ.ಸಿ ವೇಣುಗೋಪಾಲ್ ಅವರನ್ನು ಬೇಟಿ ಮಾಡಿದ್ದಾರೆ, ಮುಂಬರುವ ಸಂಪುಟ ವಿಸ್ತರಣೆಯಲ್ಲಿ ಪರಿಶಿಷ್ಟ ಜಾತಿಗೆ ಸೇರಿದ ಶಾಕರಲ್ಲಿ ಒಬ್ಬರನ್ನು ಸಚಿವರನ್ನಾಗಿಸಬೇಕೆಂದು ಸತೀಶ್ ಜಾರಕಿಹೊಳಿ ಬೇಡಿಕೆ ಇಟ್ಟಿದ್ದಾರೆ ಎಂದು ಶಾಸಕರ ಆಪ್ತ ಮೂಲಗಳು ತಿಳಿಸಿವೆ, ಜೊತೆಗೆ ಎಸ್ ಟಿ ಸಮುದಾಯಕ್ಕೆ ನಿಗಮ-ಮಂಡಳಿಗಳಲ್ಲೂ ಅವಕಾಶ ನೀಡಬೇಕೆಂದು ಒತ್ತಾಯ ಮಾಡಿದ್ದಾರೆ.
ಬಳ್ಳಾರಿ ಕಾಂಗ್ರೆಸ್ ಶಾಸಕ ಬಿ. ನಾಗೇಂದ್ರ ಅರಿಗೆ ಸಚಿವ ಸ್ಥಾನ ನೀಡುವಂತೆ ಸತೀಶ್ ಬೇಡಿಕೆ ಇಟ್ಟಿದ್ದಾರೆ ಎಂದು ತಿಳಿದು ಬಂದಿದೆ,
ಬಳ್ಳಾರಿ ಶಾಸಕರಾದ ಭೀಮಾ ನಾಯ್ಕ, ತುಕಾರಾಂ  ಮತ್ತು ಗಣೇಶ್ ಬುಧವಾರ ದೆಹಲಿಗೆ ತೆರಳಿದ್ದು, ಹೈ ಕಮಾಂಡ್ ಗೆ ತಮ್ಮ ಅಭಿಪ್ರಾಯ ತಿಳಿಸಿದ್ದಾರೆ, ಇವರ ಮನವಿಯನ್ನು ಗಂಭೀರವಾಗಿ ಪರಿಗಣಿಸುವುದಾಗಿ ದೆಹಲಿ ನಾಯಕರು ತಿಳಿಸಿದ್ದಾರೆ, ಆದರೆ ನಾಗೇಂದ್ರ ಅವರನ್ನು ಸಂಪುಟಕ್ಕೆ ಸೇರಿಸುವುದನ್ನು ತಡೆಯಲು ಯಾರಿಂದಲೂ ಸಾಧ್ಯವಿಲ್ಲ ಎಂಬುದಾಗಿ ತಿಳಿದು ಬಂದಿದೆ. ಇನ್ನೂ ಬೆಳಗಾವಿ ರಾಜಕೀಯಕ್ಕೆ ಪ್ರವೇಶಿಸದಂತೆ ಡಿ,ಕೆ ಶಿವಕುಮಾರ್ ಗೆ ಹೈಕಮಾಂಡ್ ಕಟ್ಟಪ್ಪಣೆ ಮಾಡಿದೆ
ಬೆಳಗಾವಿ ಉಸ್ತುವಾರಿಯನ್ನು ರಮೇಶ್ ಜಾರಕಿಹೊಳಿಗೆ ನೀಡಿದ್ದು, ಶಿವಕುಮಾರ್ ಹಸ್ತಕ್ಷೇಪದಿಂದ ರಮೇಶ್ ಗೆ ಜಿಲ್ಲಾ ರಾಜಕೀಯದಲ್ಲಿ ಯಾವುದೇ ಅಧಿಕಾರ ಇಲ್ಲದಂತಾಗಿದೆ ಎಂದು ಸಭೆಯಲ್ಲಿ ವೇಣುಗೋಪಾಲ್ ಅವರಿಗೆ  ಸತೀಶ್ ವಿವರಿಸಿದ್ದಾರೆ. ಹೀಗಾಗಿ ಬೆಳಗಾವಿ ರಾಜಕೀಯದಲ್ಲಿ ಶಿವಕುಮಾರ್ ಅವರನ್ನು ದೂರವಿರಿಸುವಂತೆ ಜಾರಕಿಹೊಳಿ ಸಹೋದರರು ಜಾರಕಿಹೊಳಿ ಸಹೋದರರು ಮನವಿ ಮಾಡಿದ್ದಾರೆ.
SCROLL FOR NEXT