ಬೆಂಗಳೂರು: ಅಕ್ರಮ ಮಾರ್ಗಗಳಮೂಲಕ ರಾಜ್ಯ ಸರ್ಕಾರವನ್ನು ಅಸ್ಥಿರಗೊಳಿಸಲು ಬಿಜೆಪಿ ಆಪರೇಷನ್ ಕಮನ ನಡೆಸುತ್ತಿದೆ ಎಂದು ರಾಜ್ಯಪಾಲ ವಜುಭಾಯ್ ವಾಲಾ ಅವರಿಗೆ ದೂರು ನೀಡಲು ಕಾಂಗ್ರೆಸ್ ನಿರ್ಧರಿಸಿದೆ ಎಂದು ಮೂಲಗಳಿಂದ ತಿಳಿದುಬಂದಿದೆ.
ಬಿಜೆಪಿ ವಿರುದ್ಧ ದಂಗೆ ಏಳುವಂತೆ ಕುಮಾರಸ್ವಾಮಿಯವರು ಕರೆ ನೀಡಿರುವ ಹಿನ್ನಲೆಯಲ್ಲಿ ರಾಜ್ಯಪಾಲರಿಗೆ ದೂರು ನೀಡಲು ಬಿಜೆಪಿ ಸಜ್ಜಾಗುತ್ತಿದೆ. ಇತರ ಬೆನ್ನಲ್ಲೇ ಆಪರೇಷನ್ ಕಮಲದ ವಿರುದ್ಧ ಕಾಂಗ್ರೆಸ್ ಕೂಡ ದೂರು ನೀಡಲು ನಿರ್ಧರಿಸಿದೆ.
ಕಾಂಗ್ರೆಸ್ ಶಾಸಕರನ್ನು ಸೆಳೆಯಲು ಬಿಜೆಪಿ ನಾಯಕರು ನಡೆಸಿದ ಸತತ ಯತ್ನಗಳ ಬಗ್ಗೆ ಶಾಸಕರಿಂದಲೇ ವಿವರವಾದ ದೂರು ಪತ್ರವನ್ನು ಬರೆಸುವುದು ಹಾಗೂ ಬಿಜೆಪಿ ನಾಯಕರು ಕಾಂಗ್ರೆಸ್ ಶಾಸಕರೊಂದಿಗೆ ನಡೆಸಿದ್ದಾರೆನ್ನಲಾದ ಆಡಿಯೋ ಸಂಭಾಷಣೆಯ ಕ್ಲಿಪ್ ನಂತರ ಸಾಕ್ಷ್ಯಾಧಾರ ಸಹಿತ ರಾಜ್ಯಪಾಲರಿಗೆ ದೂರು ನೀಡಲು ಕಾಂಗ್ರೆಸ್ ನಾಯಕರು ತೀರ್ಮಾನಿಸಿದ್ದಾರೆಂದು ಉನ್ನತ ಮೂಲಗಳು ಮಾಹಿತಿ ನೀಡಿವೆ.