ನಿರ್ಮಲಾ ವೆಂಕಟೇಶ್ 
ರಾಜಕೀಯ

ಕೋಲಾರ ಲೋಕಸಭಾ ಸ್ಥಾನದಿಂದ ಬಿಜೆಪಿಯಿಂದ ಸ್ಪರ್ಧಿಸಲು ಸಿದ್ಧ: ನಿರ್ಮಲಾ ವೆಂಕಟೇಶ್

ಮುಂಬರುವ ಲೋಕಸಭಾ ಚುನಾವಣೆಯಲ್ಲಿ ವರಿಷ್ಠರು ಅವಕಾಶ ನೀಡಿದ್ದರೆ ಬಿಜೆಪಿಯಿಂದ ಕೋಲಾರ ಕ್ಷೇತ್ರದಿಂದಲೇ ಕಣಕ್ಕಿಳಿಯುತ್ತೇನೆ ಎಂದು ಮಾಜಿ ವಿಧಾನಪರಿಷತ್ ಸದಸ್ಯೆ ಹಾಗೂ ರಾಷ್ಟ್ರೀಯ ಮಹಿಳೆ ಆಯೋಗದ ಮಾಜಿ ಅಧ್ಯಕ್ಷೆ ನಿರ್ಮಲಾ ವೆಂಕಟೇಶ್ ಹೇಳಿದ್ದಾರೆ.

ಕೋಲಾರ: ಮುಂಬರುವ ಲೋಕಸಭಾ ಚುನಾವಣೆಯಲ್ಲಿ ವರಿಷ್ಠರು ಅವಕಾಶ ನೀಡಿದ್ದರೆ   ಬಿಜೆಪಿಯಿಂದ ಕೋಲಾರ ಕ್ಷೇತ್ರದಿಂದಲೇ ಕಣಕ್ಕಿಳಿಯುತ್ತೇನೆ ಎಂದು ಮಾಜಿ ವಿಧಾನಪರಿಷತ್ ಸದಸ್ಯೆ ಹಾಗೂ ರಾಷ್ಟ್ರೀಯ ಮಹಿಳೆ ಆಯೋಗದ ಮಾಜಿ ಅಧ್ಯಕ್ಷೆ ನಿರ್ಮಲಾ ವೆಂಕಟೇಶ್ ಹೇಳಿದ್ದಾರೆ.

ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, ಕೇಂದ್ರದ ಮಾಜಿ ಸಚಿವ ಕೆ.ಎಚ್. ಮುನಿಯಪ್ಪ ಸತತ ಏಳು ಅವಧಿಗೆ ಕೋಲಾರದ ಜನ ಆಯ್ಕೆ ಮಾಡಿದ್ದಾರೆ.  ಆದರೆ, ಅವರು ಜನರ ನಿರೀಕ್ಷೆಗೆ ತಕ್ಕಂತೆ ಕೆಲಸ ಮಾಡಿಲ್ಲ. ಮುನಿಯಪ್ಪ ಅವರ ಆಡಳಿತದಿಂದ ಜನ ಬೇಸತ್ತಿದ್ದು, ಈಗ ಬದಲಾವಣೆಗೆ ಬಯಸಿದ್ದಾರೆ  ಪಕ್ಷದ ಹೈಕಮಾಂಡ್ ಟಿಕೆಟ್ ನೀಡಿದರೆ ಚುನಾವಣೆಗೆ ಸ್ಪರ್ಧಿಸುವುದಾಗಿ ತಿಳಿಸಿದರು.

ಕ್ಷೇತ್ರದಲ್ಲಿ ಬಿಜೆಪಿಯಿಂದ ಸ್ಪರ್ಧಿಸಲು ನಾನು ಆಕಾಂಕ್ಷಿಯಾಗಿದ್ದು, ಅವಕಾಶ ಕೊಡುವಂತೆ ಪ್ರಧಾನಿ ನರೇಂದ್ರ ಮೋದಿ ಹಾಗೂ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಅಮಿತ್ ಶಾ ಅವರಿಗೆ ಮನವಿ ಮಾಡಿದ್ದೇನೆ. ಟಿಕೆಟ್ ಸಿಗುವ ವಿಶ್ವಾಸವಿದೆ ಎಂದರು.

ಕೋಲಾರ  ಲೋಕಸಭಾ ಕ್ಷೇತ್ರದ ವ್ಯಾಪ್ತಿಯಲ್ಲಿ 8 ವಿಧಾನಸಭಾ ಕ್ಷೇತ್ರಗಳಿದ್ದು, ಪ್ರತಿ ಕ್ಷೇತ್ರದಲ್ಲೂ ಪ್ರವಾಸ ಮಾಡಿದ್ದೇನೆ.  ಪಕ್ಷದ ಕಾರ್ಯಕರ್ತರು ಹಾಗೂ ನಾಯಕರೊಂದಿಗೆ ಚುನಾವಣೆ ಸಂಬಂಧ ಚರ್ಚೆ ನಡೆಸಿರುವುದಾಗಿ ತಿಳಿಸಿದರು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ದೆಹಲಿಯಲ್ಲಿ ನಾಯಕರ ಬಂಧನ, ಮೆಟ್ರೋ ಸ್ಥಗಿತ ಕುರಿತ ನ್ಯಾಯಾಂಗ ನಿಂದನೆ: ಭಾನುವಾರವೂ 'ಸುಪ್ರೀಂ' ವಿಶೇಷ ಪೀಠದಿಂದ ವಿಚಾರಣೆ!

BBK 13: ಗಾನವಿ ಹೇಳಿಕೆಗೆ ನೊಂದು ಗಗನ್ ತಾಯಿಗೆ ತಾನೇ ಕ್ಷಮೆ ಕೇಳಿ ಕಣ್ಣೀರು ಹಾಕಿದ ಸುದೀಪ್

ವಿಶ್ವಸಂಸ್ಥೆಯ ಭದ್ರತಾ ಮಂಡಳಿಯಲ್ಲಿ ಭಾರತ, ಆಫ್ರಿಕಾಗೆ ಸೂಕ್ತ ಪ್ರಾತಿನಿಧ್ಯ ಸಿಗಲೇಬೇಕು: ಜೈಶಂಕರ್ ಆಗ್ರಹ

ಪ್ರತಿಭಟನೆಗಳ ನಡುವೆಯೇ ಚು. ಆಯೋಗ ಮಹತ್ವದ ನಡೆ, ಹೊಸ ಉಪಾಯುಕ್ತರ ನೇಮಕ, 27 ಅಧಿಕಾರಿಗಳಿಗೆ ಹೊಸ ಹೊಣೆ!

ಮಣಿಪುರದಲ್ಲಿ ಮತ್ತೆ ಭುಗಿಲೆದ್ದ ಹಿಂಸಾಚಾರ: 30 ಮನೆ-ಅಂಗಡಿಗಳಿಗೆ ಬೆಂಕಿ, ಕನಿಷ್ಠ 5 ಸಾವು!