ಹೆಚ್ ಡಿ ಕುಮಾರಸ್ವಾಮಿ, ಹೆಚ್ ಡಿ ದೇವೇಗೌಡ 
ರಾಜಕೀಯ

ಶಾಸಕರಿಗೆ ನಿಷ್ಠೆಯ ಪಾಠ ಹೇಳಿಕೊಟ್ಟ ದೇವೇಗೌಡ, ಕುಮಾರಸ್ವಾಮಿ

ಸದ್ಯದ ರಾಜ್ಯ ರಾಜಕೀಯ ಪರಿಸ್ಥಿತಿಯಲ್ಲಿ ಪಕ್ಷದ ಎಲ್ಲಾ ಶಾಸಕರು ಮತ್ತು ಕಾರ್ಯಕರ್ತರು ಒಗ್ಗಟ್ಟಾಗಿ ...

ಹಾಸನ: ಸದ್ಯದ ರಾಜ್ಯ ರಾಜಕೀಯ ಪರಿಸ್ಥಿತಿಯಲ್ಲಿ ಪಕ್ಷದ ಎಲ್ಲಾ ಶಾಸಕರು ಮತ್ತು ಕಾರ್ಯಕರ್ತರು ಒಗ್ಗಟ್ಟಾಗಿ ಇರಬೇಕೆಂದು ಮಾಜಿ ಪ್ರಧಾನಿ ಜೆಡಿಎಸ್ ವರಿಷ್ಠ ಹೆಚ್ ಡಿ ದೇವೇಗೌಡ ಮತ್ತು ಮುಖ್ಯಮಂತ್ರಿ ಹೆಚ್ ಡಿ ಕುಮಾರಸ್ವಾಮಿ ಕಿವಿಮಾತು ಹೇಳಿದ್ದಾರೆ.

ನಿನ್ನೆ ಹಾಸನದ ರೆಸಾರ್ಟ್ ವೊಂದರಲ್ಲಿ ಜೆಡಿಎಸ್ ಶಾಸಕಾಂಗ ಪಕ್ಷದ ಸಭೆ ನಡೆದಿದ್ದು ಅದರಲ್ಲಿ ತಮ್ಮ ಪಕ್ಷದ ಶಾಸಕರೊಂದಿಗೆ ಮಾತುಕತೆ ನಡೆಸಿದ್ದಾರೆ. ಸಭೆಯ ನಂತರ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ರೈತಪರವಾಗಿರುವ ಸಮ್ಮಿಶ್ರ ಸರ್ಕಾರವನ್ನು ಉರುಳಿಸಲು ಬಿಜೆಪಿ ನಾಯಕರು ಪ್ರಯತ್ನ ನಡೆಸುತ್ತಿದ್ದು ಬಿಜೆಪಿಯ ಆಮಿಷಗಳಿಗೆ ಪಕ್ಷದ ಶಾಸಕರು ಬಲಿಯಾಗಬಾರದು ಎಂದು ಕಿವಿಮಾತು ಹೇಳಿದರು.

ಒಟ್ಟು 37 ಜೆಡಿಎಸ್ ಶಾಸಕರಲ್ಲಿ ನಿನ್ನೆಯ ಸಭೆಯಲ್ಲಿ 33 ಶಾಸಕರು ಭಾಗವಹಿಸಿದ್ದರು. ಕೆ ಆರ್ ಪೇಟೆ ಶಾಸಕ ನಾರಾಯಣಗೌಡ ಮತ್ತು ತುಮಕೂರು ಗ್ರಾಮಾಂತರ ಶಾಸಕ ಗೌರಿ ಶಂಕರ್ ವೈಯಕ್ತಿಕ ಕಾರಣದಿಂದ ಸಭೆಗೆ ಹಾಜರಾಗಿಲ್ಲ ಎಂದಿದ್ದಾರೆ.

ಇನ್ನು ಕೆಲವು ಅತೃಪ್ತ ಜೆಡಿಎಸ್ ಶಾಸಕರು ಬಿಜೆಪಿ ಜೊತೆ ಸಂಪರ್ಕದಲ್ಲಿದೆ ಎಂಬ ವದಂತಿಯನ್ನು ಸಿಎಂ ಕುಮಾರಸ್ವಾಮಿ ನಿರಾಕರಿಸಿದ್ದಾರೆ.ಮುಂಬೈಯ ರೆಸಾರ್ಟ್ ಗೆ ಹೋಗಲು ಉದ್ದೇಶಿಸಿದ್ದ ಶಾಸಕರು ಕೂಡ ಸಭೆಯಲ್ಲಿ ಭಾಗವಹಿಸಿದ್ದಾರೆ ಎಂದು ಕುಮಾರಸ್ವಾಮಿ ಹೇಳಿದ್ದು ಹಲವು ಅನುಮಾನುಗಳಿಗೆ ಎಡೆ ಮಾಡಿಕೊಟ್ಟಿದೆ.

ಜೆಡಿಎಸ್ ಶಾಸಕ ಸುರೇಶ್ ಗೌಡ ಅವರನ್ನು ಪಕ್ಷಕ್ಕೆ ಸೆಳೆಯಲು ಬಿಜೆಪಿ ರಾಜ್ಯಾಧ್ಯಕ್ಷ ಬಿ ಎಸ್ ಯಡಿಯೂರಪ್ಪ ಪ್ರಯತ್ನಿಸುತ್ತಿದ್ದಾರೆ ಎಂದು ಕೂಡ ಸಿಎಂ ಕುಮಾರಸ್ವಾಮಿ ಆರೋಪಿಸಿದರು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

SIR ಅಕ್ರಮಗಳ ವಿರುದ್ಧ ಸುಪ್ರೀಂ ಕೋರ್ಟ್ ಮೆಟ್ಟಿಲೇರಿದ ರಾಹುಲ್ ಗಾಂಧಿ; TMC, RJD, ಮಿತ್ರಪಕ್ಷಗಳಿಂದಲೂ ಅರ್ಜಿ

ಸ್ಮಿತ್ ಮಚ್ಚರ್ ಬಗ್ಗೆ ಮೌನವೇಕೆ: ನನ್ನ ಆದರ್ಶ ಧ್ರುವ ರಾಠಿ ಅಲ್ಲ: ಶಿವಸೇನೆ UBT ತೊರೆದ ರಾಷ್ಟ್ರೀಯ ವಕ್ತಾರ ಆನಂದ್ ದುಬೆ!

ಮಧ್ಯಪ್ರದೇಶ: ಕುನೊ ರಾಷ್ಟ್ರೀಯ ಉದ್ಯಾನವನದಲ್ಲಿ ಚೀತಾ ಮರಿ ಸಾವು!

'ದೇಶಕ್ಕೆ ಬೇಕಿರುವುದು ಸಾಕ್ಷ್ಯವೇ ಹೊರತು ಆರೋಪಗಳಲ್ಲ; ರಾಹುಲ್ ಗಾಂಧಿಯದ್ದು 'ಪೊಳ್ಳು' ಪ್ರತಿಭಟನೆ, ಆರೋಪ: ಬಿಜೆಪಿ ವಾಗ್ದಾಳಿ

ಗುಟ್ಟಾಗಿ ಮದುವೆಯಾಗಿದ್ದಾರಾ ನಟಿ ತ್ರಿಶಾ?: ಲಂಡನ್ ಸೆಲ್ಫಿಯಲ್ಲಿನ ಲಾಕೆಟ್ ನ ಗುಟ್ಟೇನು!