ಕೆ.ಸಿ. ವೇಣುಗೋಪಾಲ್ 
ರಾಜಕೀಯ

ಬೆದರಿಕೆ ಅಥವಾ ಬ್ಲಾಕ್‌ಮೇಲ್ ತಂತ್ರ ಸಹಿಸಲಾಗದು: ವೇಣುಗೋಪಾಲ್ ವಾರ್ನಿಂಗ್

ಪಕ್ಷ ಬಿಡುವ ಬೆದರಿಕೆ, ಬ್ಲಾಕ್‌ಮೇಲ್ ತಂತ್ರಗಳನ್ನು ಸಹಿಸುವುದಿಲ್ಲ ಎಂದು ಕಾಂಗ್ರೆಸ್‌ ಶಾಸಕರಿಗೆ ರಾಜ್ಯ ಉಸ್ತುವಾರಿ ಕೆ.ಸಿ.ವೇಣುಗೋಪಾಲ್‌ ಖಡಕ್‌ ಎಚ್ಚರಿಕೆ ...

ಬೆಂಗಳೂರು: ಪಕ್ಷ ಬಿಡುವ ಬೆದರಿಕೆ, ಬ್ಲಾಕ್‌ಮೇಲ್ ತಂತ್ರಗಳನ್ನು  ಸಹಿಸುವುದಿಲ್ಲ ಎಂದು ಕಾಂಗ್ರೆಸ್‌ ಶಾಸಕರಿಗೆ ರಾಜ್ಯ  ಉಸ್ತುವಾರಿ ಕೆ.ಸಿ.ವೇಣುಗೋಪಾಲ್‌ ಖಡಕ್‌ ಎಚ್ಚರಿಕೆ ನೀಡಿದ್ದಾರೆ.
ಕೆಪಿಸಿಸಿ ಕಚೇರಿಯಲ್ಲಿ ನಡೆದ ಸಭೆಯ ನಂತರ ಸುದ್ದಿಗಾರರ ಜತೆ ಮಾತನಾಡಿದ ಅವರು, ಬಿಜೆಪಿಯವರ ಕೆಟ್ಟ ರಾಜಕೀಯ ಕರ್ನಾಟಕದಲ್ಲಿ ನಡೆಯುವುದಿಲ್ಲ. ಕಾಂಗ್ರೆಸ್‌ನ ಯಾವ ಶಾಸಕರೂ ಪಕ್ಷ ಬಿಡುವುದಿಲ್ಲ ಎಂದು ಹೇಳಿದರು.
ಪಕ್ಷದಲ್ಲಿ ಯಾವುದೇ ಕಾರಣಕ್ಕೂ ಶಿಸ್ತು ಉಲ್ಲಂಘನೆ ಸಹಿಸುವುದಿಲ್ಲ. ಪಕ್ಷದಲ್ಲಿದ್ದುಕೊಂಡೇ ಭಿನ್ನಮತ ಚಟುವಟಿಕೆಗಳನ್ನು ನಡೆಸುವವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲಾಗುವುದು ಎಂದು ಹೇಳಿದ್ದಾರೆ. ಶಾಸಕರಿಗೆ ಏನೇ ಸಮಸ್ಯೆಗಳಿದ್ದರೂ ಪಕ್ಷದ ವೇದಿಕೆಯಲ್ಲಿ ಚರ್ಚಿಸಿ ಪರಿಹಾರ ಕಂಡುಕೊಳ್ಳಬೇಕು. ಸಮ್ಮಿಶ್ರ ಸರ್ಕಾರಕ್ಕೆ ಯಾವುದೇ ರೀತಿಯಲ್ಲೂ ಕಾಂಗ್ರೆಸ್‌ನಿಂದ ತೊಂದರೆಯಾಗಬಾರದು ಎಂದು ತಿಳಿಸಿದಾರೆ. ಈ ಮೂಲಕ ಬಂಡಾಯ ಶಾಸಕರಿಗೆ ಪರೋಕ್ಷವಾಗಿ ಎಚ್ಚರಿಕೆ ಸಂದೇಶ ರವಾನಿಸಿದ್ದಾರೆ.
ಎಂ.ಟಿ.ಬಿ.ನಾಗರಾಜ್‌ ಹಾಗೂ ಸುಧಾಕರ್‌ ಚೆನ್ನೈಗೆ ಹೋಗಿದ್ದ ವಿಚಾರ ಕುರಿತು ಪ್ರಸ್ತಾಪಿಸಿದಾಗ, ಚೆನ್ನೈ ಸುಂದರ ನಗರ, ಅಲ್ಲಿ ಯಾಕೆ ಹೋಗಬಾರದು ಎಂದು ಪ್ರಶ್ನಿಸಿ, ಕಾಂಗ್ರೆಸ್‌ ಶಾಸಕರ ಬಗ್ಗೆ ನಮಗೆ ಸಂಪೂರ್ಣ ವಿಶ್ವಾಸವಿದೆ ಅವರು. ಯಾವುದೇ ಕಾರಣಕ್ಕೂ ಪಕ್ಷ ತೊರೆಯುವುದಿಲ್ಲ ಎಂದು ತಿಳಿಸಿದರು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ಬಾಲಿವುಡ್ ಹಿರಿಯ ನಟ ನಾನಾ ಪಾಟೇಕರ್ ಇನ್ನಿಲ್ಲ

"ಜೀವಕ್ಕೆ ಕುತ್ತು ತರುವ ಹಾದಿ": ರಷ್ಯಾ ಸೇನಾ ನೇಮಕಾತಿ ಆಮಿಷಗಳಿಗೆ ಬಲಿಯಾಗದಂತೆ ನಾಗರಿಕರಿಗೆ ಭಾರತ ಕಟ್ಟುನಿಟ್ಟಿನ ಸೂಚನೆ, 69 ಭಾರತೀಯರ ಬಿಡುಗಡೆಗೆ ಪಟ್ಟು..!

CM ಡಿ.ಕೆ. ಶಿವಕುಮಾರ್‌ಗಾಗಿ IndiGo flight ಲೇಟ್? VVIP ಸಂಸ್ಕೃತಿ ವಿರುದ್ಧ ಪ್ರಯಾಣಿಕರ ಆಕ್ರೋಶ..!

ಬರಗಾಲದ ಬೆನ್ನಲ್ಲೇ ಬೆಲೆ ಏರಿಕೆ ಬರೆ: ಮಧ್ಯಮ ವರ್ಗದವರಿಗೆ ಆರ್ಥಿಕ ಹೊಡೆತ, ಅಕ್ಕಿ ದರ ಗಗನಕ್ಕೆ..!

ಬರ ಎಫೆಕ್ಟ್: ರೈತರ ನೆರವಿಗೆ ಧಾವಿಸಿದ ಸರ್ಕಾರ; 1,250 ಕೋಟಿ ರೂ. ಮೊದಲ ಕಂತು ಬಿಡುಗಡೆ..!