ಕೆ.ಸಿ ವೇಣುಗೋಪಾಲ್ 
ರಾಜಕೀಯ

ಲೋಕಸಭೆ ಚುನಾವಣೆಗೆ ಸಿದ್ದತೆ: ದೇಣಿಗೆ ಸಂಗ್ರಹಕ್ಕಾಗಿ ಮನೆ ಮನೆಗೆ ಕಾಂಗ್ರೆಸ್

ಮುಂಬರುವ ಲೋಕಸಭೆ ಚುನಾವಣೆಗಾಗಿ ಸಿದ್ಧತೆ ನಡೆಸುತ್ತಿರುವ ಕಾಂಗ್ರೆಸ್ ಮನೆ ಮನೆಗೆ ತೆರಳಿ ದೇಣಿಗೆ ಸಂಗ್ರಹಿಸಲು ನಿರ್ಧರಿಸಿದೆ....

ಬೆಂಗಳೂರು: ಮುಂಬರುವ ಲೋಕಸಭೆ ಚುನಾವಣೆಗಾಗಿ ಸಿದ್ಧತೆ ನಡೆಸುತ್ತಿರುವ ಕಾಂಗ್ರೆಸ್ ಮನೆ ಮನೆಗೆ ತೆರಳಿ ದೇಣಿಗೆ ಸಂಗ್ರಹಿಸಲು ನಿರ್ಧರಿಸಿದೆ.
ಅಕ್ಟೋಬರ್ ೨ರಂದು ಕಾಂಗ್ರೆಸ್ ಜನಸಂಪರ್ಕ ಅಭಿಯಾನಕ್ಕೆ ಚಾಲನೆ ನೀಡಲಾಗುವುದು. ಈ ಮೂಲಕ 18 ರಿಂದ 21 ವರ್ಷ ವಯಸ್ಸಿನ ಯುವಕರನ್ನು ಪಕ್ಷದತ್ತ ಸೆಳೆಯುವ ಗುರಿಯನ್ನು ಹಾಕಿಕೊಳ್ಳಲಾಗಿದೆ ಎಂದು ರಾಜ್ಯ ಕಾಂಗ್ರೆಸ್ ಉಸ್ತುವಾರಿ ಕೆ.ಸಿ.ವೇಣುಗೋಪಾಲ್ ಹೇಳಿದ್ದಾರೆ,
ಕಾಂಗ್ರೆಸ್ ಪದಾಧಿಕಾರಿಗಳ ಸಭೆ ನಂತರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಅಕ್ಟೋಬರ್ ೨ರಂದು ಜನಸಂಪರ್ಕ ಅಭಿಯಾನಕ್ಕೆ ಚಾಲನೆ ಸಿಗಲಿದ್ದು, ನವೆಂಬರ್ 19ಕ್ಕೆ ಅಭಿಯಾನ ಅಂತ್ಯಗೊಳ್ಳಲಿದೆ. ಮನೆಮನೆಗೆ ತೆರಳಿ ಚುನಾವಣೆಗೆ ದೇಣಿಗೆ ಸಂಗ್ರಹ, ಪ್ರತಿ ಬೂತ್​ನಲ್ಲಿ ೧೦ ಸಾವಿರ ದೇಣಿಗೆ ಸಂಗ್ರಹಕ್ಕೆ ನಿರ್ಧರಿಸಲಾಗಿದ್ದು, ಒಟ್ಟು ದೇಣಿಗೆ ಸಂಗ್ರಹದಲ್ಲಿ ಶೇಕಡ 50 ರಷ್ಟು ಎಐಸಿಸಿಗೆ ಹೋಗಲಿದೆ. ಉಳಿದ ದೇಣಿಗೆ ಹಣ ಕೆಪಿಸಿಸಿ, ಜಿಲ್ಲಾ ಘಟಕ ಹಾಗೂ ಬ್ಲಾಕ್ ಗಳಿಗೆ ನೀಡಲಾಗುವುದು ಎಂದ ಅವರು, ಕರ್ನಾಟಕದಲ್ಲಿ ಕಾಂಗ್ರೆಸ್ ಅತೀ ಹೆಚ್ಚು ಲೋಕಸಭಾ ಕ್ಷೇತ್ರದಲ್ಲಿ ಗೆಲುವು ಸಾಧಿಸಲಿದೆ ಎಂಬ ವಿಶ್ವಾಸ ವ್ಯಕ್ತಪಡಿಸಿದರು.
ಕೇಂದ್ರ ಬಿಜೆಪಿ ಸರ್ಕಾರ ಉತ್ತಮ ಆಡಳಿತ ನೀಡುವಲ್ಲಿ ಸಂಪೂರ್ಣ ವಿಫಲವಾಗಿದೆ. ರಾಷ್ಟ್ರದಲ್ಲಿ ಬಿಜೆಪಿ ವಿರುದ್ಧ ಜನರು ಈಗ ತಿರುಗಿಬಿದ್ದಿದ್ದಾರೆ ಎಂದು ಆರೋಪಿಸಿದ್ದಾರೆ.
ಇದೇ ವೇಳೆ ಮಾತನಾಡಿದ ಕೆಪಿಸಿಸಿ ಅಧ್ಯಕ್ಷ ದಿನೇಶ್ ಗುಂಡೂರಾವ್ ಅವರು, ಪ್ರತಿವರ್ಷ ಕೂಡ ಜನಸಂಪರ್ಕ ಅಭಿಯಾನ ನಡೆಯಲಿದೆ. ಮುಂದಿನ ತಿಂಗಳಿಂದ ಜಿಲ್ಲಾ ಮಟ್ಟದಲ್ಲಿ ಸಮಾವೇಶಗಳು, ತರಬೇತಿ ಶಿಬಿರಗಳನ್ನು ಹಮ್ಮಿಕೊಳ್ಳಲಾಗುವುದು ಎಂದು ಹೇಳಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

'ಜನರು ಬಿಜೆಪಿ, ಮೋದಿ ಅವರೊಂದಿಗಿದ್ದಾರೆ': 2029ರ ಚುನಾವಣೆಯಲ್ಲಿ ಮತ್ತೊಂದು 'ಭಾರಿ ಸೋಲಿಗೆ' ಸಿದ್ಧರಾಗಿ: ರಾಹುಲ್ ಗಾಂಧಿ ವಿರುದ್ಧ ಅಮಿತ್ ಶಾ ವಾಗ್ದಾಳಿ

'ಏನೇನ್ ದಾಖಲೆ ಇದೆ ಎಲ್ಲಾ ತರಿಸುತ್ತೇನೆ': HDK 'ಸ್ಟಿಂಗ್' ಆರೋಪಕ್ಕೆ CM ಡಿಕೆಶಿ ಶಾಕಿಂಗ್ ರಿಯಾಕ್ಷನ್!

SIR ವಿರುದ್ಧ ಪ್ರತಿಭಟನೆ ಮುಂದುವರೆಸುತ್ತೆವೆ: ರಾಜಕೀಯ, ಜನಸಾಮಾನ್ಯರ ಪ್ರತಿರೋಧಕ್ಕೇ ಜಯ': ರಾಹುಲ್ ಗಾಂಧಿ

‘ಸಿದ್ದರಾಮಯ್ಯಗೆ CD ತೋರಿಸಿ ರಾಜೀನಾಮೆ ಪಡೆದಿದ್ದಾರೆ’: ಯತ್ನಾಳ್​ ಸ್ಫೋಟಕ ಆರೋಪ

ಹನಿಟ್ರ್ಯಾಪ್ ಭೀತಿಯಲ್ಲಿದ್ದ ಸಿದ್ದರಾಮಯ್ಯಗೆ ಬಿಗ್ ರಿಲೀಫ್: ಮಾಧ್ಯಮಗಳಿಗೆ ವಿಡಿಯೋ ಪ್ರಸಾರ ಮಾಡದಂತೆ ನಿರ್ಬಂಧ ವಿಧಿಸಿದ ಕೋರ್ಟ್