ಜಿ. ಪರಮೇಶ್ವರ 
ರಾಜಕೀಯ

ಜೀರೋ ಟ್ರಾಫಿಕ್‌ನಿಂದ ಜನಸಾಮಾನ್ಯರಿಗೆ ತೊಂದರೆ: ಡಿಸಿಎಂ ಪರಮೇಶ್ವರ ವಿಷಾದ

ಜೀರೋ ಟ್ರಾಫಿಕ್‌ನಿಂದ ಜನಸಾಮಾನ್ಯರಿಗೆ ತೊಂದರೆಯಾಗುತ್ತಿರುವುದನ್ನು ಪ್ರಶ್ನಿಸಿದ್ದ ಮಾಧ್ಯಮಗಳ....

ಬೆಂಗಳೂರು: ಜೀರೋ ಟ್ರಾಫಿಕ್‌ನಿಂದ ಜನಸಾಮಾನ್ಯರಿಗೆ ತೊಂದರೆಯಾಗುತ್ತಿರುವುದನ್ನು ಪ್ರಶ್ನಿಸಿದ್ದ ಮಾಧ್ಯಮಗಳ ವಿರುದ್ಧವೇ ಗರಂ ಆಗಿದ್ದ ಉಪ ಮುಖ್ಯಮಂತ್ರಿ ಡಾ.ಜಿ.ಪರಮೇಶ್ವರ ಅವರಿಗೆ ಕೆಟ್ಟ ಮೇಲೆ ಬುದ್ದಿ ಬಂದಿದ್ದು, ಈಗ ವಿಷಾದ ವ್ಯಕ್ತಪಡಿಸಿದ್ದಾರೆ.
ಜೀರೋ ಟ್ರಾಫಿಕ್ ನಿಂದ ಜನ ಸಾಮಾನ್ಯರಿಗೆ ತೊಂದರೆಯಾಗುತ್ತಿರುವುದಕ್ಕೆ ವಿಷಾದಿಸುತ್ತೇನೆ. ಆದರೆ, ಪ್ರತಿನಿತ್ಯ ಸರ್ಕಾರದ ಹತ್ತಾರು ಕಾರ್ಯಕ್ರಮ,ಸಭೆಗಳು ಇರುವುದರಿಂದ ಸಮಯ ಪಾಲನೆ ಅನಿವಾರ್ಯ. ರಾಜ್ಯಪಾಲರು, ಮುಖ್ಯಮಂತ್ರಿಗಳು, ಗೃಹ ಸಚಿವರಿಗೆ ಜೀರೋ ಟ್ರಾಫಿಕ್ ವ್ಯವಸ್ಥೆ ನೀಡಲಾಗಿದೆ. ಸಾಧ್ಯವಾದಷ್ಟು ಟ್ರಾಫಿಕ್ ಆಗದಂತೆ ಪೊಲೀಸರಿಗೆ ಸೂಚಿಸಿದ್ದೇನೆ ಎಂದು ಪರಮೇಶ್ವರ ಅವರು ಟ್ಟೀಟ್ ಮಾಡಿದ್ದಾರೆ.
ಪರಮೇಶ್ವರ ಅವರು ಇಂದು ಬೆಳಗ್ಗೆ ಕೊಡವ ಸಮಾಜ ಮತ್ತು ಬಿಬಿಎಂಪಿ ಸಹಯೋಗದಲ್ಲಿ ನಗರದ ಮಿಲ್ಲರ್ಸ್ ರಸ್ತೆಯ ಜಂಕ್ಷನ್ ಬಳಿ ಸ್ಥಾಪಿಸಲಾಗಿರುವ ಫೀಲ್ಡ್ ಮಾರ್ಷಲ್ ಕಾರಿಯಪ್ಪರವರ ಪ್ರತಿಮೆ ಉದ್ಘಾಟನೆಗೆ ಝಿರೋ ಟ್ರಾಫಿಕ್ ಮೂಲಕವೇ ಆಗಮಿಸಿದ್ದರು. ನಾನು ಝಿರೋ ಟ್ರಾಫಿಕ್ ತಗೆದುಕೊಳ್ಳುವುದು ಮಾಧ್ಯಮಗಳಿಗೆ ಹೊಟ್ಟೆ ಉರಿಯೇ ಎಂದು ಪರಮೇಶ್ವರ ಪ್ರಶ್ನಿಸಿದ್ದರು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Operation Sindoor; Kirana Hills ಪರಮಾಣು ನೆಲೆಗೆ ಅಪ್ಪಳಿಸಿದ ಭಾರತದ ಡ್ರೋನ್? ಬೆಚ್ಚಿಬಿದ್ದ ಪಾಕಿಸ್ತಾನ..! Indian Army ಹೇಳಿದ್ದೇನು?

ನಿರ್ಬಂಧದ ಹೊರತಾಗಿಯೂ ರಷ್ಯಾದಲ್ಲಿ ಇಳಿದ ಅಮೆರಿಕದ C-17 ಮಿಲಿಟರಿ ವಿಮಾನ: ಮಿಷನ್ ಮಾತ್ರ ನಿಗೂಢ!

ನೀಟ್ ಪ್ರತಿಭಟನಾಕಾರರ ಮೇಲೆ ಪೊಲೀಸ್ ದೌರ್ಜನ್ಯ ಆರೋಪ: ಚರ್ಚೆಗೆ ವಿಪಕ್ಷಗಳ ಪಟ್ಟು, ಸಂಸದೀಯ ಸಮಿತಿ ಸಭೆಯಲ್ಲಿ ತೀವ್ರ ವಾಗ್ವಾದ!

2nd Test: ‘ಶ್ರೀಲಂಕಾ ಆಟಗಾರರ ವರ್ತನೆ ವೃತ್ತಿಪರವಾಗಿರಲಿಲ್ಲ’: ಬ್ಯಾಡ್ ಲೈಟ್ ವಿವಾದಕ್ಕೆ Sanjay Manjrekar ಕಿಡಿ

‘ಪ್ರಸಿದ್ಧ್ ಕೃಷ್ಣ ವಿಶ್ವದರ್ಜೆಯ ಬೌಲರ್ ಆಗಿ ಮಾರ್ಪಟ್ಟಿದ್ದಾರೆ’: ಕನ್ನಡಿಗನ ಶ್ಲಾಘಿಸಿದ ದಕ್ಷಿಣ ಆಫ್ರಿಕಾ ಮಾಜಿ ವೇಗಿ Morne Morkel