ನಾವು ದಶಕಗಳ ಕಾಲದ ಸ್ನೇಹಿತರು, ಇದೊಂದು ಸೌಜನ್ಯದ ಭೇಟಿ: ರೇವಣ್ಣ
ಜೆಡಿಎಸ್ ಶಾಸಕಾಂಗ ಸಭೆ ಬಳಿಕ ರಾಜಧಾನಿಗೆ ಮರಳಿರುವ ಲೋಕೋಪಯೋಗಿ ಸಚಿವ ಎಚ್ಡಿ ರೇವಣ್ಣ ಮಾಜಿ ಸಿಎಂ ಸಿದ್ದರಾಮಯ್ಯ ಹಾಗೂ ಡಿ.ಕೆ. ...
ಬೆಂಗಳೂರು: ಜೆಡಿಎಸ್ ಶಾಸಕಾಂಗ ಸಭೆ ಬಳಿಕ ರಾಜಧಾನಿಗೆ ಮರಳಿರುವ ಲೋಕೋಪಯೋಗಿ ಸಚಿವ ಎಚ್ಡಿ ರೇವಣ್ಣ ಮಾಜಿ ಸಿಎಂ ಸಿದ್ದರಾಮಯ್ಯ ಹಾಗೂ ಡಿ.ಕೆ. ಶಿವಕುಮಾರ್ ಮನೆಗೆ ದಿಢೀರ್ ಭೇಟಿ ನೀಡಿ, ಚರ್ಚೆ ನಡೆಸಿರುವುದು ಕುತೂಹಲಕ್ಕೆ ಕಾರಣವಾಗಿದೆ.
ಸಿದ್ದರಾಮಯ್ಯ ಮನೆಗೆ ಭೇಟಿ ನೀಡಿದ್ದ ರೇವಣ್ಣ ಒಂದು ಗಂಟೆಗೂ ಹೆಚ್ಚು ಕಾಲ ಚರ್ಚೆ ನಡೆಸಿದ್ದಾರೆ. ಇದಾದ ಬಳಿಕ ರೇವಣ್ಣ ಅವರು ಡಿಕೆ ಶಿವಕುಮಾರ್ ಮನೆಗೆ ಭೇಟಿ ನೀಡಿ ಅವರೊಂದಿಗೂ ಕೂಡ ಮಾತುಕತೆ ನಡೆಸಿದ್ದಾರೆ. ಭೇಟಿಯ ವೇಳೆ ಶಾಸಕರಾದ ಶಿವರಾಮ್ ಹೆಬ್ಬಾರ್, ಎಂಟಿಬಿ ನಾಗರಾಜ್, ಕೂಡ ಹಾಜರಿದ್ದರು.
ಈ ಕುರಿತು ಮಾತನಾಡಿರುವ ರೇವಣ್ಣ, ಮಾಜಿ ಸಿಎಂ ಸಿದ್ದರಾಮಯ್ಯ ಭೇಟಿ ಮಾಡಿದ್ದರಲ್ಲಿ ವಿಶೇಷತೆ ಇಲ್ಲ. ಆಸ್ಪತ್ರೆಯಿಂದ ಡಿಸ್ಚಾರ್ಜ್ ಆದ ಬಳಿಕ ಡಿಕೆಶಿ ಭೇಟಿ ಮಾಡಿರಲಿಲ್ಲ. ಹೀಗಾಗಿ ಇಂದು ಡಿಕೆಶಿ ಭೇಟಿ ಮಾಡಿ ಆರೋಗ್ಯ ವಿಚಾರಿಸಿದ್ದೇನೆ. ಇದೊಂದು ಸೌಜನ್ಯ ಭೇಟಿ ಅಷ್ಟೇ ಎಂದು ಹೇಳಿದ್ದಾರೆ.
ಇನ್ನೂ ಅಕ್ಟೋಬರ್ ಮೊದಲ ವಾರದಲ್ಲಿ ಸಚಿವ ಸಂಪುಟ ವಿಸ್ತರಣೆ ನಡೆಯಲಿದೆ ಎಂದು ಹೇಳಲಾಗಿದೆ.
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.