ತುಮಕೂರು: ರಾಜ್ಯ ಸಮ್ಮಿಶ್ರ ಸರ್ಕಾರದ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ ಬಿಜೆಪಿ ಮಾಜಿ ಸಂಸದ ಜಿ.ಎಸ್.ಬಸವರಾಜು ಅವರು, ಜಿಲ್ಲೆಯ ಕಾಂಗ್ರೆಸ್ ಮತ್ತು ಜೆಡಿಎಸ್ ಶಾಸಕರು ನಿರ್ವೀರ್ಯರಾಗಿದ್ದಾರೆ ಎಂದು ಗುರುವಾರ ವಿವಾದಾತ್ಮಕ ಹೇಳಿಕೆ ನೀಡಿದ್ದಾರೆ.
ಇಂದು ನಗರದಲ್ಲಿ ಸುದ್ದಿಗೋಷ್ಠಿ ಉದ್ದೇಶಿಸಿ ಮಾತನಾಡಿದ ಬಿಜೆಪಿ ನಾಯಕ, 'ನಿರ್ವೀರ್ಯರಾಗಿರುವ ಕಾಂಗ್ರೆಸ್ ಮತ್ತು ಜೆಡಿಎಸ್ ಶಾಸಕರು ತುಮಕೂರು ಜಿಲ್ಲೆ ನಾಶ ಮಾಡುತ್ತಿದ್ದಾರೆ. ಉಪ ಮುಖ್ಯಮಂತ್ರಿ ಪರಮೇಶ್ವರ್ ಅವರು ಝೀರೋ ಟ್ರಾಫಿಕ್‌ಗಾಗಿ ಹೋರಾಟ ಮಾಡುತ್ತಿದ್ದಾರೆ ಎಂದು ಕಿಡಿ ಕಾರಿದರು.
ಇದೇ ವೇಳೆ ಹೇಮಾವತಿ ನದಿ ನೀರನ್ನು ಜಿಲ್ಲೆಗೆ ಸದುಪಯೋಗಪಡಿಸಬೇಕು ಎಂದು ಒತ್ತಾಯಿಸಿದ ಅವರು, ಸಚಿವ ಡಿ.ಕೆ.ಶಿವಕುಮಾರ್ ಮತ್ತು ಸಂಸದ ಡಿ.ಕೆ.ಸುರೇಶ್ ಅವರು ನಮ್ಮ ಜಿಲ್ಲೆಯ ನೀರನ್ನು ಕನಕಪುರಕ್ಕೆ ಕೊಂಡೊಯ್ಯಲು ಸಿದ್ದತೆ ನಡೆಸಿದ್ದಾರೆ ಎಂದು ಆರೋಪಿಸಿದರು.