ಬೆಂಗಳೂರು: ವಿಧಾನ ಪರಿಷತ್ ನ ಮೂರು ಸ್ಥಾನಗಳಿಗೆ ನಡೆದ ಚುನಾವಣೆಯಲ್ಲಿ ಪ್ರತಿಪಕ್ಷ ಬಿಜೆಪಿ ಹಿಂದೆ ಸರಿದ ಹಿನ್ನೆಲೆಯಲ್ಲಿ ಕಾಂಗ್ರೆಸ್ ನ ಇಬ್ಬರು ಹಾಗೂ ಜೆಡಿಎಸ್ ನ ಒಬ್ಬರು ಅವಿರೋಧವಾಗಿ ಆಯ್ಕೆಯಾಗಿದ್ದಾರೆ.
ವಿಧಾನಸಭೆಯಿಂದ ವಿಧಾನ ಪರಿಷತ್ ಗೆ ಅಕ್ಟೋಬರ್ 4ರಂದು ಚುನವಾಣೆ ನಿಗದಿಯಾಗಿತ್ತು. ಆದರೆ ಬಿಜೆಪಿಯಿಂದ ಯಾರೂ ನಾಮಪತ್ರ ಸಲ್ಲಿಸದ ಹಿನ್ನೆಲೆಯಲ್ಲಿ ಕಾಂಗ್ರೆಸ್ ನ ಎಂಸಿ ವೇಣುಗೋಪಾಲ್, ನಜೀರ್ ಅಹ್ಮದ್ ಹಾಗೂ ಜೆಡಿಎಸ್‌ನ ಎಂ. ರಮೇಶ್ ಗೌಡ ಅವರು ಅವಿರೋಧವಾಗಿ ಆಯ್ಕೆಗೊಂಡಿದ್ದಾರೆ ಎಂದು ಚುನಾವಣಾಧಿಕಾರಿ ಕುಮಾರಸ್ವಾಮಿ ಘೋಷಿಸಿದ್ದಾರೆ.
ವಿಧಾನಪರಿಷತ್ ಸದಸ್ಯರಾಗಿದ್ದ ಕೆಎಸ್ ಈಶ್ವರಪ್ಪ, ಜಿ.ಪರಮೇಶ್ವರ್ ಹಾಗೂ ವಿ.ಸೋಮಣ್ಣ ಅವರಿಂದ ತೆರವಾದ ಮೂರು ಪರಿಷತ್ ಸ್ಥಾನಗಳಿಗೆ ಅಕ್ಟೋಬರ್ 4ರಂದು ಚುನಾವಣೆ ನಿಗದಿಯಾಗಿತ್ತು.
ಬಿಜೆಪಿ ಮಾಜಿ ಶಾಸಕ ಸಿ.ಪಿ ಯೋಗೇಶ್ವರ್ ಅಥವಾ ಬಿಜೆ ಪುಟ್ಟಸ್ವಾಮಿ ಅವರನ್ನು ಕಣಕ್ಕಿಳಿಸಲು ನಿರ್ಧರಿಸಿತ್ತು, ಆದರೆ ಗೆಲುವಿಗೆ ಬೇಕಾದ 112 ಸಂಖ್ಯಾ ಬಲ ಇಲ್ಲದೆ ಇದ್ದ ಕಾರಣ ಕಣದಿಂದ ಹಿಂದೆ ಸರಿದಿತ್ತು