ಬೆಂಗಳೂರು: ಬಿಜೆಪಿಗೆ ಮತ ಹಾಕಿದರೆ , ನೀವು ಪಾಕಿಸ್ತಾನಕ್ಕೆ ಮತ ಚಲಾಯಿಸುತ್ತಿದ್ದೀರಿ ಎಂದರ್ಥ ಎಂದು ಸಮ್ಮಿಶ್ರ ಸರ್ಕಾರದ ಸಮನ್ವಯ ಸಮಿತಿ ಅಧ್ಯಕ್ಷ ಸಿದ್ದರಾಮಯ್ಯ ಹೇಳಿದ್ದಾರೆ
ಪ್ರಧಾನಿ ನರೇಂದ್ರ ಮೋದಿ ಅವರು ಮತ್ತೆ ಭಾರತದ ಪ್ರಧಾನಿ ಆಗಬೇಕೆಂದು ಪಾಕಿಸ್ತಾನ ಬಯಸುತ್ತಿದೆ ಎಂಬ ಪಾಕಿಸ್ತಾನ ಪ್ರಧಾನಿ ಇಮ್ರಾನ್ ಖಾನ್ ಹೇಳಿಕೆಗೆ ಸಂಬಂಧಿಸಿ ಪ್ರತಿಕ್ರಿಯಿಸಿರುವ ಸಿದ್ದರಾಮಯ್ಯ, ಇಮ್ರಾನ್ ಖಾನ್ ಬಿಜೆಪಿ ಹಾಗೂ ನರೇಂದ್ರ ಮೋದಿ ಅವರನ್ನು ಬೆಂಬಲಿಸುತ್ತಿರುವುದಕ್ಕೆ ಕಾರಣ ಏನು ? ಎಂದು ಟ್ವೀಟ್ ಮೂಲಕ ಪ್ರಶ್ನಿಸಿದ್ದಾರೆ.