ರಾಜಕೀಯ

ನಾನು ಕೂಡ ಮುಖ್ಯಮಂತ್ರಿಯಾಗಬೇಕು: ಶಾಸಕ ಉಮೇಶ್ ಕತ್ತಿ ಹೇಳಿದ್ದೇಕೆ?

Shilpa D
ಬೆಳಗಾವಿ:  ಕೇಂದ್ರದಲ್ಲಿ ಬಿಜೆಪಿ ನೇತೃತ್ವದ ಸರ್ಕಾರ ರಚನೆ ಮಾಡಿದ ಮೇಲೆ  ರಾಜ್ಯದಲ್ಲಿ ಯಡಿಯೂರಪ್ಪ ಮುಖ್ಯಮಂತ್ರಿಯಾಗುತ್ತಾರೆ ಎಂದು ಯಡಿಯೂರಪ್ಪ ಆಪ್ತ ಹಾಗೂ 8 ಬಾರಿ ಶಾಸಕರಾಗಿರುವ ಉಮೇಶ್ ಕತ್ತಿ ಹೇಳಿದ್ದಾರೆ,
ಕೇಂದ್ರದಲ್ಲಿ ಬಿಜೆಪಿ ಹೊಸ ಸರ್ಕಾರ ರಚನೆ ಆಗುತ್ತಿದ್ದಂತೆ ರಾಜ್ಯದಲ್ಲೂ ಹೊಸ ಸರ್ಕಾರ ರಚನೆ ಆಗುತ್ತೆ. ಲೋಕಸಭಾ ಚುನಾವಣಾ ಫಲಿತಾಂಶ ಬಳಿಕ ಯಡಿಯೂರಪ್ಪ ಮುಖ್ಯಮಂತ್ರಿ ಆಗುತ್ತಾರೆ ಎಂದು ಉಮೇಶ ಕತ್ತಿ ಹೇಳಿದ್ರು.
ಸದ್ಯ ಉತ್ತರ ಕರ್ನಾಟಕ ಅಭಿವೃದ್ಧಿ ಆಗುತ್ತಿಲ್ಲ, ಯಾಕಂದ್ರೆ 90 % ಬಜೆಟ್ ದಕ್ಷಿಣ ಕರ್ನಾಟಕಕ್ಕೆ ಹೋಗುತ್ತಿದ್ದೆ, 10 % ಮಾತ್ರ ಉತ್ತರ ಕರ್ನಾಟಕಕ್ಕೆ ಸಿಗುತ್ತೆ.  ಹೀಗಾಗಿ ಉತ್ತರ ಕರ್ನಾಟಕ ಅಭಿವೃದ್ಧಿ ಆಗಬೇಕು ಎಂಬುವುದು ನಮ್ಮ ಇಚ್ಛೆ. ಯಾವುದೇ ಪಕ್ಷದಲ್ಲಿ ಇದ್ದರೂ ಉತ್ತರ ಕರ್ನಾಟಕ ಅಭಿವೃದ್ಧಿಯಾಗಬೇಕು ಎಂಬುದು ನನ್ನ ಉದ್ದೇಶ. ಪ್ರತ್ಯೇಕ ರಾಜ್ಯ ವಿಚಾರದ ಬಗ್ಗೆ ಚರ್ಚೆ ಮಾಡಿ  ಮುಂದೆ ಹೇಳುತ್ತೇನೆ ಎಂದು ಅವರು ಹೇಳಿದರು.
ಉತ್ತರ ಕರ್ನಾಟಕದ ಬಗ್ಗೆ ಇರುವ ತಾರತಮ್ಯ ಧೋರಣೆಯನ್ನು ಸಹಿಸಿಕೊಳ್ಳಲು ಸಾಧ್ಯವಿಲ್ಲ, ಹೀಗಾಗಿ ನಾನು ಮುಖ್ಯಮಂತ್ರಿಯಾಗಬೇಕು ಎಂದು ಹೇಳಿದೆ, ಮತದಾನ ಮಾಡಿದ ನಂತರ ಬೆಲ್ಲದ್ ಬಾಗೇವಾಡಿಯಲ್ಲಿ ಮಾತನಾಡಿದ ಉಮೇಶ್ ಕತ್ತಿ ಈ ಬಾರಿ ಲೋಕಸಭೆ ಚುನಾವಣೆಯಲ್ಲಿ ಸುಮಾರು 300-350 ಸೀಟುಗಳನ್ನು ಗೆಲ್ಲುವುದಾಗಿ ಹೇಳಿದ್ದಾರೆ,
ಇನ್ನೂ ಜಾರಕಿಹೊಳಿ ರಾಜಿನಾಮೆ ಸಂಬಂಧ ಪ್ರತಿಕ್ರಿಯಿಸಿದ ಉಮೇಶ್ ಕತ್ತಿ, ಅದು ಅವರ ಕುಟುಂಬಕ್ಕೆ ಸಂಬಂಧಿಸಿದ ವಿಷಯ, ಬಿಜೆಪಿಗೆ ಯಾರೇ ಬಂದರು ಅವರನ್ನು ನಾವು ಸ್ವಾಗತಿಸುತ್ತೇವೆ ಎಂದು ಹೇಳಿದ್ದಾರೆ.
SCROLL FOR NEXT