ರಮೇಶ್ ಜಾರಕಿಹೊಳಿ ಮತ್ತು ಸತೀಶ್ ಜಾರಕಿಹೊಳಿ 
ರಾಜಕೀಯ

ರಮೇಶ್ ನನ್ನು ತಡೆಯದಿದ್ದರೆ ಸಮ್ಮಿಶ್ರ ಸರ್ಕಾರಕ್ಕೆ ಕಂಟಕ: ಸತೀಶ್ ಜಾರಕಿಹೊಳಿ

ರಮೇಶ್ ಜಾರಕಿಹೊಳಿ ಅವರನ್ನು ತಡೆಯದಿದ್ದರೇ ಮುಂದಿನ ದಿನಗಳಲ್ಲಿ ಸಮ್ಮಿಶ್ರ ಸರ್ಕಾರಕ್ಕೆ ಕಂಟಕ ಎದುರಾಗಲಿದೆ ಎಂದು ಶಾಮನೂರು ಶಿವಶಂಕರಪ್ಪ ಮತ್ತು ಸಚಿವ ಸತೀಶ್ ಜಾರಕಿಹೊಳಿ ...

ಬೆಳಗಾವಿ: ಸಚಿವ ಸತೀಶ್‌ ಜಾರಕಿಹೊಳಿಗೆ ತಲೆ ಕೆಟ್ಟಿದೆ ಎಂದು ಮಾಜಿ ಸಚಿವ ಕಾಂಗ್ರೆಸ್‌ ಬಂಡಾಯ ಶಾಸಕ ರಮೇಶ್‌ ಜಾರಕಿಹೊಳಿ ಹೇಳಿಕೆ  ನೀಡಿದ್ದರು, ಈ ಹಂತದಲ್ಲಿ ರಮೇಶ್ ಜಾರಕಿಹೊಳಿ ಅವರನ್ನು ತಡೆಯದಿದ್ದರೆ ಮುಂದಿನ ದಿನಗಳಲ್ಲಿ ಸಮ್ಮಿಶ್ರ ಸರ್ಕಾರಕ್ಕೆ ಕಂಟಕ ಎದುರಾಗಲಿದೆ ಎಂದು ಶಾಮನೂರು ಶಿವಶಂಕರಪ್ಪ ಮತ್ತು ಸಚಿವ ಸತೀಶ್ ಜಾರಕಿಹೊಳಿ ಹೇಳಿದ್ದಾರೆ.
ಹೋದರ ಸತೀಶ್‌ ಜಾರಕಿಹೊಳಿ ಅವರ ವಿರುದ್ಧ ಕಿಡಿ ಕಾರಿದ ರಮೇಶ್‌ ಜಾರಕಿಹೊಳಿ, ಈಗಾಗಲೆ ಒಬ್ಬ ಸಹೋದರನನ್ನು ಹಾಳು ಮಾಡಿದ್ದಾನೆ. ಅವನ ತಲೆ ಕೆಟ್ಟಿದೆ ಎಂದರು.
ಗೋಕಾಕ್‌ನಲ್ಲಿ ಲಖನ್‌ ಸ್ಪರ್ಧಿಸಿದರೆ ನನ್ನಷ್ಟು ಖುಷಿ ಪಡುವ ವ್ಯಕ್ತಿ ಬೇರೆಯವರಿಲ್ಲ ಎಂದರು.
ರಮೇಶ್‌ ಜಾರಕಿಹೊಳಿ ಅವರಿಗೆ ತಿರುಗೇಟು ನೀಡಿದ ಸಹೋದರ ಲಖನ್‌ ಜಾರಕಿಹೊಳಿ ನಾನು ಎಲ್ಲೋ ಹಾಳಾಗಿ ಹೋಗಿಲ್ಲ. ಕಾಂಗ್ರೆಸ್‌ನಲ್ಲೇ ಇದ್ದೇನೆ. ಸಿದ್ದರಾಮಯ್ಯ ನಮ್ಮ ನಾಯಕ. ಗೋಕಾಕ್‌ ಕಾಂಗ್ರೆಸ್‌ನ ಭದ್ರ ಕೋಟೆ ಎಂದು ಹೇಳಿದ್ದಾರೆ. 
ಇನ್ನೂ ಈ ಸಂಬಂಧ ಪ್ರತಿಕ್ರಯಿಸಿರುವ ರಮೇಶ್ ಜಾರಕಿಹೊಳಿ ನಾನು ತಾಂತ್ರಿಕವಾಗಿ ಇನ್ನೂ ಕಾಂಗ್ರೆಸ್ ನಲ್ಲಿದ್ದೇನೆ, ಶೀಘ್ರವೇ ನಾನು ರಾಜಿನಾಮೆ ನೀಡುತ್ತೇನೆ, ನನಗೆ ಕಾಂಗ್ರೆಸ್ ನಾಯಕತ್ವದ ಮೇಲೆ ಅಸಮಾಧಾನ ಇದೆ, 1999ಕ್ಕಿಂತ ರಾಜ್ಯ ಕಾಂಗ್ರೆಸ್ ಕೆಟ್ಟಿದೆ ಎಂದು ಹೇಳಿದ್ದಾರೆ. 

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ಸತತ 3ನೇ ದಿನ SIR ವಿರುದ್ಧ ಪ್ರತಿಭಟನೆ: ರಾಜ್ ಘಾಟ್ ನತ್ತ ಇಂಡಿಯಾ ಬ್ಲಾಕ್ ಸಂಸದರ ಮೆರವಣಿಗೆ!

ರೇಣುಕಾಸ್ವಾಮಿ ಕೊಲೆ ಪ್ರಕರಣ: ನಟ ಚಿಕ್ಕಣ್ಣ, ಯಶಸ್ ಸೂರ್ಯಗೆ ಬಿಗ್ ಶಾಕ್‌; ಇಬ್ಬರಿಗೂ ಕೋರ್ಟ್ ಸಮನ್ಸ್

ಜಿಎಸ್‌ಟಿ ಮಂಡಳಿಯಿಂದ ಪ್ರಕ್ರಿಯೆ ಸುಧಾರಣೆಗಳಿಗೆ ಅನುಮೋದನೆ; ಬಂಧನದ ಅಧಿಕಾರಕ್ಕೆ ಕಡಿವಾಣ!

ಶಿಕಾರಿಪುರದ ಈ ಗ್ರಾಮದಲ್ಲಿ ಬೀಗರೂಟ ಹಾಕಿದ್ರೆ ₹1 ಲಕ್ಷ, ಉಂಡು ಬಂದ್ರೆ ₹50 ಸಾವಿರ ದಂಡ! ಇಲ್ಲಿದೆ ಸ್ಫೋಟಕ ಕಾರಣ...

ಫ್ರೀಡಂ ಪಾರ್ಕ್‌ನಲ್ಲಿ CJP ಪ್ರತಿಭಟನೆ: ಜ್ಞಾನೇಶ್ ಹೋದರೆ ಅಜ್ಞಾನೇಶ್ ಬರುತ್ತಾನೆ; ಮೊದಲು SIR ರದ್ದುಗೊಳಿಸಿ - ಪ್ರಕಾಶ್ ರಾಜ್